More

    ಸ್ವಾತಂತ್ರ್ಯ ದಿನಾಚರಣೆ ಸಿದ್ಧತೆ ಪರಿಶೀಲನೆ

    ವಿಜಯಪುರ: ಆ.15 ರಂದು ಸ್ವಾತಂತ್ರೃ ದಿನೋತ್ಸವವನ್ನು ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕ್ರೀಡಾಂಗಣದಲ್ಲಿ ಆಚರಿಸಲಾಗುತ್ತಿದ್ದು ಮಂಗಳವಾರ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ್ ಪೂರ್ವಭಾವಿ ಸಿದ್ಧತೆಗಳನ್ನು ಪರಿಶೀಲಿಸಿದರು.
    ಸ್ವಾತಂತ್ರೃ ದಿನಾಚರಣೆಗೆ ಅವಶ್ಯಕ ಸಿದ್ಧತೆ ಮಾಡಿಕೊಳ್ಳಬೇಕು. ಯಾವುದೇ ಲೋಪಕ್ಕೆ ಅವಕಾಶ ನೀಡದೆ ಅಚ್ಚುಕಟ್ಟಾಗಿ ಕಾರ್ಯಕ್ರಮವನ್ನು ಆಯೋಜಿಸಬೇಕು. ಶಿಷ್ಟಾಚಾರದಂತೆ ಗಣ್ಯಮಾನ್ಯರನ್ನು ಆಹ್ವಾನಿಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
    ಕಾರ್ಯಕ್ರಮದ ಮುಂಚಿತವಾಗಿ ಆಗಮಿಸುವ ಗಣ್ಯಮಾನ್ಯರಿಗೆ ಕ್ರೀಡಾಂಗಣದಲ್ಲಿರುವ ದೈಹಿಕ ಶಿಕ್ಷಣ ಅಧ್ಯಯನ ಕೇಂದ್ರದಲ್ಲಿ ಆಸನದ ವ್ಯವಸ್ಥೆ ಮಾಡಿಕೊಳ್ಳಬೇಕು. ದ್ವಜಾರೋಹಣ ಸಂದರ್ಭದಲ್ಲಿ ಪತ್ರಕರ್ತರಿಗೆ ಹಾಗೂ ಗಣ್ಯಮಾನ್ಯರಿಗೆ ಆಸನದ ವ್ಯವಸ್ಥೆ ಮಾಡಿಕೊಳ್ಳಬೇಕು. ಪರೇಡ್ ಕೈಗೊಳ್ಳುವಾಗ ಯಾವುದೇ ರೀತಿಯಲ್ಲಿ ಲೋಪಗಳಾಗದಂತೆ ಪರೇಡ್ ಸ್ಥಳವನ್ನು ಸಿದ್ಧಪಡಿಸಿಕೊಳ್ಳಬೇಕು ಎಂದು ಸೂಚಿಸಿದರು.
    ಕರೊನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕ್ರೀಡಾಂಗಣದ ಪ್ರವೇಶದ್ವಾರದಲ್ಲಿ ಮಾಸ್ಕ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಿಕೊಳ್ಳಬೇಕು ಹಾಗೂ ಪರಸ್ಪರ ಅಂತರ ಕಾಪಾಡಿಕೊಳ್ಳುವಂತೆ ನೋಡಿಕೊಳ್ಳಬೇಕು. ಕಾರ್ಯಕ್ರಮದಲ್ಲಿ ಭಾಗವಹಿಸಿದವರಿಗೆ ಪರಸ್ಪರ ಅಂತರದಲ್ಲಿ ಆಸನದ ವ್ಯವಸ್ಥೆ ಹಾಗೂ ಕುಡಿಯುವ ನೀರಿನ ಸಮಸ್ಯೆ ಆಗದಂತೆ ನೋಡಿಕೊಳ್ಳಬೇಕು ಎಂದರು.
    ಉಪ ವಿಭಾಗಾಧಿಕಾರಿ ಸೋಮಲಿಂಗ ಗೆಣ್ಣೂರ, ತಹಸೀಲ್ದಾರ್ ಮೋಹನ್‌ಕುಮಾರಿ, ನಿಂಗಪ್ಪ ಗೋಠೆ, ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಸ್.ಜಿ. ಲೋಣಿ ಮತ್ತಿತರರಿದ್ದರು.

    ಸ್ವಾತಂತ್ರ್ಯ ದಿನಾಚರಣೆ ಸಿದ್ಧತೆ ಪರಿಶೀಲನೆ
    ಸ್ವಾತಂತ್ರ್ಯ ದಿನಾಚರಣೆ ಸಿದ್ಧತೆ ಪರಿಶೀಲನೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts