More

    ಉಚಿತ ಲ್ಯಾಪ್‌ಟಾಪ್ ಯೋಜನೆ ವಿಸ್ತರಿಸಿ

    ವಿಜಯಪುರ: ಪದವಿ ಅಂತಿಮ ವರ್ಷದ ವಿದ್ಯಾರ್ಥಿಗಳಿಗೂ ಲ್ಯಾಪ್‌ಟಾಪ್ ಉಚಿತವಾಗಿ ವಿತರಿಸಲು ಆಗ್ರಹಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಸೇಷನ್ (ಎಐಡಿಎಸ್‌ಒ) ಜಿಲ್ಲಾ ಸಮಿತಿ ನೇತೃತ್ವ ವಿದ್ಯಾರ್ಥಿನಿಯರು ಶನಿವಾರ ಪ್ರತಿಭಟನೆ ನಡೆಸಿದರು.
    ನಗರದ ಡಾ. ಬಿ.ಆರ್. ಅಂಬೇಡ್ಕರ್ ವೃತ್ತದ ಬಳಿ ಜಮಾಯಿಸಿದ ವಿದ್ಯಾರ್ಥಿನಿಯರು ಲ್ಯಾಪ್‌ಟಾಪ್‌ಗಾಗಿ ಆಗ್ರಹಿಸಿ ಘೋಷಣೆ ಕೂಗಿದರು. ಬಳಿಕ ಜಿಲ್ಲಾಡಳಿತ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.
    ನೇತೃತ್ವ ವಹಿಸಿದ್ದ ಎಐಡಿಎಸ್‌ಒ ಜಿಲ್ಲಾಧ್ಯಕ್ಷೆ ಶೋಭಾ ಎಸ್ ಮಾತನಾಡಿ, ಸರ್ಕಾರ 2019-2020ನೇ ವರ್ಷದ ಪ್ರಥಮ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡುತ್ತಿರುವುದು ಸಂತೋಷದ ವಿಷಯ. ಆದರೆ ದ್ವಿತೀಯ ಮತ್ತು ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಈ ಯೋಜನೆಯ ಲ ಸಿಗದೇ ಇರುವುದು ವಿಷಾದನೀಯ. ಅಂತಿಮ ವರ್ಷದ ವಿದ್ಯಾರ್ಥಿಗಳು ತಮ್ಮ ಪದವಿ ಮುಗಿಸಿಕೊಂಡು ಇನ್ನು ಕೇವಲ 2-3 ತಿಂಗಳಲ್ಲಿ ಹೊರ ಹೋಗುತ್ತಾರೆ. ಅವರಿಗೆ ಉಚಿತ ಲ್ಯಾಪ್‌ಟಾಪ್ ನೀಡುವುದರಿಂದ ಅವರು ತಮ್ಮ ಉನ್ನತ ವ್ಯಾಸಾಂಗ ನಡೆಸಲು ಅನುಕೂಲವಾಗುತ್ತದೆ ಎಂದರು.
    ಸರ್ಕಾರದ ಉಚಿತ ಲ್ಯಾಪ್‌ಟಾಪ್ ನೀಡುವ ಯೋಜನೆ ಈ ಎಲ್ಲ ವಿದ್ಯಾರ್ಥಿಗಳನ್ನು ಒಳಗೊಳ್ಳಬೇಕಾಗಿತ್ತು. ಆದರೆ ಕೇವಲ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‌ಟಾಪ್ ನೀಡಿದ್ದು ತಾರತಮ್ಯ ನೀತಿ ಅನುಸರಿಸಿದಂತಾಗಿದೆ. ವಿದ್ಯಾರ್ಥಿಗಳು ಎಂದರೆ ಎಲ್ಲರೂ ಒಂದೆ ಎಂಬ ಭಾವ ಸರ್ಕಾರಕ್ಕಿರಬೇಕೆಂದರು.
    ಕಾರ್ಯದರ್ಶಿ ಸುರೇಖಾ ಕಡಪಟ್ಟಿ, ದೀಪಾ ವಡ್ಡರ, ಸಾವಿತ್ರಿ, ದುಂಡೇಶ ಬಿರಾದಾರ, ಕಾವೇರಿ ರಜಪೂತ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts