More

    ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹ

    ವಿಜಯಪುರ: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಂಗನವಾಡಿ ನೌಕರರ ಸಂಘದ ವತಿಯಿಂದ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದರು.

    ಈ ವೇಳೆ ಅಂಗನವಾಡಿ ನೌಕರರ ಸಂಘದ ಜಿಲ್ಲಾಧ್ಯಕ್ಷೆ ಸುನಂದಾ ನಾಯಕ ಮಾತನಾಡಿ, ಕೋವಿಡ್-19 ಸಾಂಕ್ರಾಮಿಕ ಪಿಡುಗಿನ ವಿರುದ್ಧ ಹೋರಾಟ ಮಾಡುವಲ್ಲಿ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರು ಬಹಳ ನಿರ್ಣಾಯಕ ಪಾತ್ರ ವಹಿಸಿದ್ದಾರೆ. ಸರ್ಕಾರಿ ನೌಕರರಿಗೆ ಅನ್ವಯವಾಗುವ ಸೇವಾ ಸೌಲಭ್ಯವನ್ನು ಒದಗಿಸಬೇಕು. ಅಂಗನವಾಡಿ ಕಾರ್ಯಕರ್ತೆಯರಿಗೆ ಆರೋಗ್ಯ ವಿಮಾ ಸೌಲಭ್ಯ ನೀಡಬೇಕು. ಅವರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಬೇಕು. ಹೆರಿಗೆ ರಜೆ, ಇನ್ನಿತರ ರಜೆಗಳನ್ನು ನೀಡುವ ವ್ಯವಸ್ಥೆ ಆಗಬೇಕು. ಅವರ ಕುಂದುಕೊರತೆಯನ್ನು ಪರಿಹರಿಸಲು ಸಮಿತಿಗಳನ್ನು ಕೇಂದ್ರ, ಎಲ್ಲಾ ರಾಜ್ಯ ಮತ್ತು ಜಿಲ್ಲಾಮಟ್ಟಗಳಲ್ಲಿ ರಚಿಸಬೇಕು ಎಂದು ಒತ್ತಾಯಿಸಿದರು.

    ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರನ್ನು ಕಾಯಂಗೊಳಿಸಬೇಕು. ಕಾರ್ಮಿಕರೆಂದು ಪರಿಗಣಿಸಿ ಕನಿಷ್ಠ ವೇತನ ಮತ್ತು ಸಾಮಾಜಿಕ ಭದ್ರತಾ ಸೌಲಭ್ಯಗಳನ್ನು ನೀಡಬೇಕೆಂದು ಈ ಹಿಂದೆ ನಡೆದ 45ನೇ ಕಾರ್ಮಿಕ ಸಮ್ಮೇಳನದಲ್ಲಿ ಸರ್ಕಾರಕ್ಕೆ ಮನವಿ ಮಾಡಿಕೊಳ್ಳಲಾಗಿತ್ತು. ಆದರೆ ಈವರೆಗೆ ಬೇಡಿಕೆ ಈಡೇರಿಲ್ಲ ಎಂದು ತಿಳಿಸಿದರು.

    ಕರ್ನಾಟಕ ಪ್ರಾಂತ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಭೀಮಶಿ ಕಲಾದಗಿ, ಕಾರ್ಯಕರ್ತೆಯರಾದ ಸುವರ್ಣಾ ಹಲಗಣಿ, ಮಮತಾ ಮೊಗರೆ, ಶಾಲಿನಿ ಮೊಹಿತೆ, ರಾಜೇಶ್ವರಿ ಸಂಕದ, ಗೀತಾ ಜಾಧವ, ಮಹಾನಂದಾ ಗೋಂದಳಿ, ಎಸ್.ಎಂ. ಇನಾಮದಾರ, ಮಹಿರುನಿಸಾ ಪಟೇಲ, ಭಾಗೀರತಿ ಬಂಡಿವಡ್ಡರ, ಗೀತಾ ನಾಯಕ, ಎಂ.ಬಿ. ಪತ್ತಾರ, ಡಿ.ಡಿ.ಚವ್ಹಾಣ, ಎಂ.ಎ. ಹಚಡದ, ಶಾಲಿನಿ ಮೊಕಾಶಿ ಮುಂತಾದವರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts