More

    ಮಹಿಳೆಯರು ಯಶಸ್ವಿ ಉದ್ಯಮಿಗಳಾಗಲಿ

    ವಿಜಯಪುರ: ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ತಮ್ಮ ಛಾಪನ್ನು ಮೂಡಿಸಿದ್ದಾರೆ. ಉದ್ಯಮ ರಂಗದಲ್ಲಿಯೂ ಬೆಳವಣಿಗೆ ಹೊಂದಲು ಅವರಿಗೆ ಸಾಕಷ್ಟು ಅವಕಾಶಗಳಿವೆ. ತರಬೇತಿ ಪಡೆದು ಯಶಸ್ವಿ ಉದ್ಯಮಿಗಳಾಗಬೇಕು ಎಂದು ಮಹಿಳಾ ಮತ್ತು ಮಕ್ಕಳ ಇಲಾಖೆ ಅಧೀಕ್ಷಕಿ ಅನಿತಾ ಎಸ್. ಬಿರಾದಾರ ಹೇಳಿದರು.

    ಇಲ್ಲಿನ ರುಡ್‌ಸೆಟ್ ಸಂಸ್ಥೆಯಲ್ಲಿ ಬುಧವಾರ ಮುಕ್ತಾಯಗೊಂಡ ಮಹಿಳೆಯರ ಬ್ಯೂಟಿ ಪಾರ್ಲರ್ ಉಚಿತ ತರಬೇತಿ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

    21ನೇ ಶತಮಾನದ ವೈಜ್ಞಾನಿಕ ಯುಗದಲ್ಲಿ ಮಹಿಳೆ ಪುರುಷನಷ್ಟೇ ಸಮರ್ಥಳು ಎಂಬುದನ್ನು ತೋರಿಸಿಕೊಟ್ಟಿದ್ದಾಳೆ. ನಗರ-ಗ್ರಾಮೀಣ ಪ್ರದೇಶವೆನ್ನದೆ ಸೌಂದರ್ಯಪ್ರಜ್ಞೆ ಎಲ್ಲ ವಯೋಮಾನದ ಮಹಿಳೆಯರಲ್ಲಿ ಮೂಡುತ್ತಿದೆ. ಬ್ಯೂಟಿ ಪಾರ್ಲರ್ ಉದ್ಯಮ ಬೇಡಿಕೆಯ ಉದ್ಯಮವಾಗಿದೆ. ಮಹಿಳೆಯರು ಕೂಡ ಯಶಸ್ವಿ ಉದ್ಯಮಿಗಳಾಗಲು ಅವಕಾಶ ಇದೆ ಎಂದರು.

    ಅಧ್ಯಕ್ಷತೆ ವಹಿಸಿದ್ದ ರುಡ್‌ಸೆಟ್ ಸಂಸ್ಥೆ ನಿರ್ದೇಶಕ ರಾಜೇಂದ್ರ ಜೈನಾಪೂರ ಮಾತನಾಡಿ, ಆರಂಭದಲ್ಲಿ ಉದ್ಯಮಿಗಳಿಗೆ ತರಬೇತಿ ಅತ್ಯವಶ್ಯ. ಅದನ್ನು ಪಡೆದು ಉದ್ಯಮ ರಂಗದಲ್ಲಿ ಯಶಸ್ಸು ಗಳಿಸಬೇಕು ಎಂದು ತಿಳಿಸಿದರು.

    ರುಡ್‌ಸೆಟ್ ಸಂಸ್ಥೆ ಹಿರಿಯ ಉಪನ್ಯಾಸಕ ಮಲ್ಲಿಕಾರ್ಜುನ ಹತ್ತಿ, ಉಪನ್ಯಾಸಕ ಬಸವರಾಜ ಸನಪಾ ಹಾಗೂ ಮಹಿಳೆಯರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts