More

    ಕನ್ನಡ ಭಾಷೆ ಶ್ರೀಮಂತಗೊಳಿಸಿ

    ವಿಜಯಪುರ: ಕನ್ನಡ ಭಾಷೆ ಮತ್ತು ಸಾಹಿತ್ಯ ಪರಂಪರೆಯನ್ನು ಶ್ರೀಮಂತಗೊಳಿಸುವುದು ಕನ್ನಡನಾಡಿನ ಪ್ರತಿಯೊಬ್ಬ ಸ್ವಾಭಿಮಾನಿ ಕನ್ನಡಿಗರ ಕರ್ತವ್ಯವಾಗಬೇಕು ಎಂದು ಡಿವೈಎಸ್‌ಪಿ ಕೆ.ಸಿ.ಲಕ್ಷ್ಮೀನಾರಾಯಣ ಹೇಳಿದರು.
    ನಗರದ ಶ್ರೀ ಜಗಜ್ಯೋತಿ ಬಸವೇಶ್ವರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಜಿಲ್ಲಾ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ವಿಜಯಪುರ ತಾಲೂಕು ಮಟ್ಟದ ನೂತನ ಘಟಕ ಉದ್ಘಾಟನೆ ಮತ್ತು ಪದಾಧಿಕಾರಿಗಳ ಪದಗ್ರಹಣ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿ, ಕನ್ನಡ ನಾಡು, ನುಡಿ, ನೆಲ, ಜಲ, ಭಾಷೆ, ಸಾಹಿತ್ಯ, ಸಂಸ್ಕೃತಿ, ಪರಂಪರೆ ಉಳಿಯಬೇಕಾದರೆ ಎಲ್ಲರೂ ಶ್ರಮಿಸಬೇಕಿದೆ ಎಂದರು.
    ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ ಮಾತನಾಡಿ, ಮಾತೃಭಾಷೆ ಶಿಕ್ಷಣದಿಂದ ವಂಚಿತವಾಗಿರುವ ಮಕ್ಕಳಲ್ಲಿ ಸೃಜನಶೀಲತೆಯ ಗುಣ ಕಾಣಲು ಸಾಧ್ಯವಿಲ್ಲ. ಅಂತಹ ಮಕ್ಕಳು ಇತ್ತ ಕನ್ನಡವು ಬಾರದೆ ಅತ್ತ ಆಂಗ್ಲ ಭಾಷೆಯು ಬಾರದೆ ಅತಂತ್ರ ಸ್ಥಿತಿಯಲ್ಲಿರುತ್ತಾರೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

    ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕಿನ ಸಹಾಯಕ ಮಹಾಪ್ರಬಂಧಕ ನಾರಾಯಣ ಯಾಜಿ ಮಾತನಾಡಿದರು. ಚುಟುಕು ಸಾಹಿತ್ಯ ಪರಿಷತ್‌ನ ಜಿಲ್ಲಾಧ್ಯಕ್ಷ ಬಂಡೆಪ್ಪ ತೇಲಿ, ಖಾದಿ ಗ್ರಾಮೋದ್ಯೋಗ ಸಂಘದ ಜಿಲ್ಲಾಧ್ಯಕ್ಷ ಬಾಪುಗೌಡ ಪಾಟೀಲ, ಜಗದೀಶ ಸಾಲಳ್ಳಿ, ಮೌನೇಶ್ವರ ಮೇಟಿ, ಬಿ.ಎಲ್. ಪಾಟೀಲ, ಶೇಖರ ಹೂಗಾರ, ಗೀತಾ ಗುಂಡಳ್ಳಿ, ಡಾ.ಸುರೇಶ ಕಾಗಲಕರ ರೆಡ್ಡಿ, ರಮೇಶ ಕಂಠಿ, ಚೇತನ ಪಟ್ಟಣಶೆಟ್ಟಿ, ಭೀಮಗೌಡ ಕಾಳೆ, ಸಂಗೀತಾ ಕೋಟ್ಯಾಳ, ಕಿರಣ ನಾಯಕ, ವಿರೇಶ ವಾಲಿಕಾರ, ಅಬ್ದುಲ ಇನಾಮದಾರ, ಸಂತೋಷ ಲಮಾಣಿ, ಪ್ರಶಾಂತ ಅಗಸರ, ಗಿರಿಶ ಬಿರಾದಾರ ಮುಂತಾದವರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts