21.7 C
Bengaluru
Tuesday, January 21, 2020

ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಿ

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ವಿಜಯಪುರ: ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಬೇಟಿ ಬಚಾವೋ ಬೇಟಿ ಪಡಾವೊ ಯೋಜನೆ ಕುರಿತು ವ್ಯಾಪಕ ಜಾಗೃತಿ ಕೈಗೊಳ್ಳುವ ಮೂಲಕ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶನಿವಾರ 2019-20ನೇ ಸಾಲಿನ ಜಿಲ್ಲಾ ಮಟ್ಟದ ವಿಶೇಷ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಹೆಣ್ಣು ಮಗುವನ್ನು ರಕ್ಷಿಸಿ, ಹೆಣ್ಣು ಮಗುವನ್ನು ಓದಿಸಿ ಕಾರ್ಯಕ್ರಮ ಅತ್ಯಂತ ಮಹತ್ವದ್ದಾಗಿದೆ. ಈ ಕಾರ್ಯಕ್ರಮ ಕುರಿತು ಹೆಚ್ಚಿನ ಜಾಗೃತಿ ಅವಶ್ಯಕತೆಯಿದೆ. ಶಾಲೆಯಿಂದ ಹೊರಗುಳಿದ ಹೆಣ್ಣು ಮಗು ಹಾಗೂ ಅವರ ಕೌಟುಂಬಿಕ ಸ್ಥಿತಿಗತಿಗಳ ಬಗ್ಗೆ ಸೂಕ್ತ ಸಮೀಕ್ಷೆ ನಡೆಸಿ, ವಿವಿಧ ಯೋಜನೆಗಳಡಿ ಲಾಭ ದೊರಕಿಸಿ ಅವರ ಕುಟುಂಬದ ಆರ್ಥಿಕ ಪರಿಸ್ಥಿತಿ ಸುಧಾರಣೆಗೆ ಮತ್ತು ಸಂಬಂಧಿಸಿದ ಕುಟುಂಬದ ಮಗು ಶಾಲೆಯಿಂದ ಹೊರಗುಳಿಯದಂತೆ ಅವಶ್ಯಕ ಕ್ರಮಗಳನ್ನು ಕೈಗೊಳ್ಳಲು ಸೂಚಿಸಿದರು.

ಶಿಕ್ಷಣದ ಜತೆಗೆ ಆರ್ಥಿಕ ಸೌಲಭ್ಯ
ಜಿಪಂ ಸಿಇಒ ವಿಕಾಸ ಕಿಶೋರ ಸುರಳಕರ ಮಾತನಾಡಿ, ಜಿಲ್ಲೆಯಲ್ಲಿ 4.75ಲಕ್ಷ ಮಕ್ಕಳು ಶಾಲೆಯಲ್ಲಿ ಓದುತ್ತಿದ್ದು, ಈ ಮಕ್ಕಳಲ್ಲಿ ಹೆಣ್ಣು ಮಗು ಶಾಲೆಯಿಂದ ಹೊರಗುಳಿದ ಬಗ್ಗೆ ನಿರಂತರ ಪರಿಶೀಲನೆ ನಡೆಸಬೇಕು. ಮೊದಲನೇ ತರಗತಿಯಿಂದ 10ನೇ ತರಗತಿಯವರೆಗೆ ಮಗು ಶಾಲೆಯಲ್ಲಿ ಓದುತ್ತಿದೆಯೇ? ಎಂಬುವುದರ ಬಗ್ಗೆ ಖಾತ್ರಿಪಡಿಸಿಕೊಳ್ಳುವುದರ ಜೊತೆಗೆ ಶಾಲೆಯಿಂದ ಹೊರಗುಳಿದ ಮಕ್ಕಳ ಆರ್ಥಿಕ ಸ್ಥಿತಿಗತಿ ಬಗ್ಗೆಯೂ ಪರಿಶೀಲಿಸಿ, ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಹಾಗೂ ಇತರೆ ಸರ್ಕಾರಿ ಯೋಜನೆಗಳಡಿ ಸೌಲಭ್ಯ ಕಲ್ಪಿಸಿ ಕೌಟುಂಬಿಕ ಆರ್ಥಿಕ ಪರಿಸ್ಥಿತಿ ಸುಧಾರಿಸುವ ಜೊತೆಗೆ ಮಗು ಶಾಲೆಯಿಂದ ಹೊರಗುಳಿಯದಂತೆ ನೋಡಿಕೊಳ್ಳಲು ತಿಳಿಸಿದರು.

ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಾಧೀಶ ರವೀಂದ್ರ ಕಾರಭಾರಿ ಮಾತನಾಡಿ, ಜೆಜೆ ಆಕ್ಟ್ ಪೋಕ್ಸೊ ಕಾಯ್ದೆ ಕುರಿತು ಜಾಗೃತಿ ಮೂಡಿಸಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ನೋಡಲ್ ಅಧಿಕಾರಿಯೋರ್ವರನ್ನು ನೇಮಿಸಿಕೊಂಡು ಕಾನೂನು ಸೇವಾ ಪ್ರಾಧಿಕಾರದ ಸದಸ್ಯರೊಂದಿಗೆ ಸಮನ್ವಯತೆ ಸಾಧಿಸಿ ಜಾಗೃತಿ ಮೂಡಿಸಬೇಕು ಎಂದರು.

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ರವೀಂದ್ರ ಕಾರಬಾರಿ, ಪಾಲಿಕೆ ಆಯುಕ್ತ ಡಾ.ಔದ್ರಾಮ್, ಡಿಎಚ್‌ಒ ಡಾ.ಮಹೇಂದ್ರ ಕಾಪ್ಸೆ, ಜಿಲ್ಲಾ ಶಸ ಚಿಕಿತ್ಸಕ ಡಾ. ಶರಣಪ್ಪ ಕಟ್ಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಸಿ.ಬಿ. ಕುಂಬಾರ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೊದ್ದಾರ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಪ್ರಸನ್ನ, ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ನಿರ್ಮಲಾ ಸುರಪುರ ಉಪಸ್ಥಿತರಿದ್ದರು.

ಗೆಳತಿ ವಿಶೇಷ ಚಿಕಿತ್ಸಾ ಘಟಕ ಜಿಲ್ಲಾ ಸಮನ್ವಯ-ಪರಿಶೀಲನಾ ಸಭೆ
ದೌರ್ಜನ್ಯಕ್ಕೊಳಗಾದ ಮಹಿಳೆಯರಿಗೆ ವೈದ್ಯಕೀಯ ಚಿಕಿತ್ಸೆ ಮತ್ತಿತರ ಸೌಲಭ್ಯಗಳನ್ನು ದೊರಕಿಸುವ ಜೊತೆಗೆ ದೌರ್ಜನ್ಯಕ್ಕೆ ಸಂಬಂಧಪಟ್ಟಂತೆ ಸಂತ್ರಸ್ತರಿಂದ ಸಲ್ಲಿಕೆಯಾದ ಅರ್ಜಿಗೆ ತಕ್ಷಣ ಸ್ಪಂದಿಸಿ, 24 ಗಂಟೆಯೊಳಗೆ 25 ಸಾವಿರ ರೂ.ಗಳ ಪರಿಹಾರ ಧನ ಮಂಜೂರು ಮಾಡುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿ ದೌರ್ಜನ್ಯಕ್ಕೊಳಗಾಗಿರುವ 18 ವರ್ಷದೊಳಗಿನ ಹೆಣ್ಣು ಮಕ್ಕಳಿಗೆ ಸಂಬಂಧಪಟ್ಟಂತೆ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಚಾರ್ಜ್‌ಶಿಟ್ ಮಾಹಿತಿ, ತನಿಖಾ ಹಂತದ ಮಾಹಿತಿಯನ್ನು ವಾರದೊಳಗೆ ಸಲ್ಲಿಸಬೇಕು. ಅದರಂತೆ 18 ವಯೋಮಾನ ಮೇಲ್ಪಟ್ಟ ಮಹಿಳೆಯರ ಮೇಲಾಗಿರುವ ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆಯೂ ಪ್ರಕರಣದ ಹಂತದ ಬಗ್ಗೆ ಸಮಗ್ರ ಮಾಹಿತಿ ಕಲೆ ಹಾಕಿ ಮುಂಬರುವ ಸಭೆಗಳಲ್ಲಿ ಮಂಡಿಸಬೇಕು. ಈಗಾಗಲೇ ವಿವಿಧ ಹಂತದಲ್ಲಿರುವ ಪ್ರಕರಣಗಳ ಶೀಘ್ರ ವಿಲೇವಾರಿಯಾಗದೇ ಇರುವ ಬಗ್ಗೆ ಮಾಹಿತಿ ಕೂಡ ಒದಗಿಸುವಂತೆ ಪೊಲೀಸ್ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರಿಗೆ ಸೂಚಿಸಿದರು.

ಬಾಲ್ಯ ವಿವಾಹ ತಡೆ ಜಿಲ್ಲಾ ಸಮನ್ವಯ ಸಮಿತಿ ಸಭೆ
ಜಿಲ್ಲೆಯಲ್ಲಿ ಬಾಲ್ಯ ವಿವಾಹ ನಡೆಯದಂತೆ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಸೂಚಿಸಿದರು.

ಬಾಲ್ಯ ವಿವಾಹಗಳಿಗೆ ಸಂಬಂಧಪಟ್ಟಂತೆ ಬಾಲ್ಯ ವಿವಾಹ ತಡೆಯುವ ಕಾರ್ಯವನ್ನು ನಿರ್ವಹಿಸಲು ಜಿಲ್ಲಾ ಸಮನ್ವಯ ಸಮಿತಿ ಕಾರ್ಯನಿರ್ವಹಿಸುತ್ತಿದ್ದು, ನೈಸರ್ಗಿಕ ನ್ಯಾಯ ಇರಬೇಕೆಂಬ ಉದ್ದೇಶದೊಂದಿಗೆ ಇಂತಹ ಅನಿಷ್ಠ ಪದ್ಧತಿ ಜಾರಿಯಲ್ಲಿ ಇರದಂತೆ ನೋಡಿಕೊಳ್ಳಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸಿಇಒ ಸುರಳಕರ ಅವರು, ಬಾಲ್ಯವಿವಾಹದಿಂದಾಗುವ ದುಷ್ಪರಿಣಾಮಗಳ ಬಗ್ಗೆ ಸೂಕ್ತ ಜಾಗೃತಿ ಮೂಡಿಸುವ ಕಾರ್ಯವನ್ನು ಸಂಬಂಧಪಟ್ಟ ಇಲಾಖೆಯ ಮೂಲಕ ಮಾಡಬೇಕು. ಬಾಲ್ಯ ವಿವಾಹದಿಂದಾಗುವ ಸಾಮಾಜಿಕ ದುಷ್ಪರಿಣಾಮ ಹಾಗೂ ವ್ಯತಿರಿಕ್ತ ಪರಿಣಾಮಗಳ ಬಗ್ಗೆಯೂ ಅರಿವು ಮೂಡಿಸುವಂತೆ ತಿಳಿಸಿದರು.

ಲಿಂಗತ್ವ ಅಲ್ಪಸಂಖ್ಯಾತರು ಹಾಗೂ ದಮನಿತರು
ಲಿಂಗಾತ್ವ ಅಲ್ಪಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ದಮನಿತ ಮಹಿಳೆಯರ ಯೋಜನೆಯ ಜಿಲ್ಲಾ ಮಟ್ಟದ ಸಮಿತಿ ಸಭೆ ನಡೆಸಿದ ಜಿಲ್ಲಾಧಿಕಾರಿಗಳು, ರಾಜೀವ ಗಾಂಧಿ ವಸತಿ ಯೋಜನೆಗಳಡಿ ದಮನಿತ ಮಹಿಳೆಯರಿಗೆ ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ನಿವೇಶನ ಮಂಜೂರಾತಿ ಕುರಿತಂತೆ ಚರ್ಚಿಸಿದರು.ನಿವೇಶನ ರಹಿತ ಲಾನುಭವಿಗಳ ಬಗ್ಗೆ ಅವಶ್ಯಕ ಮಾಹಿತಿ ಪಡೆದು, ಆಯಾ ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳ ವ್ಯಾಪ್ತಿಯಲ್ಲಿ ವಿವಿಧ ರೀತಿಯ ನಿವೇಶನಗಳು ಲಭ್ಯವಿದ್ದು, ಈ ಕುರಿತಂತೆ ನಿವೇಶನ ಗುರುತಿಸಲು ಅವಶ್ಯಕ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಉದ್ಯೋಗಿನಿ-ಚೇತನಾ ಯೋಜನೆಯಡಿ ದಮನಿತ ಮಹಿಳೆಯರಿಗೆ ಸ್ವ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯ ಹಾಗೂ ಲಿಂಗತ್ವ ಅಲ್ಪಸಂಖ್ಯಾತರಿಗೆ ಗುರುತಿನ ಚೀಟಿ ನೀಡುವ ಕುರಿತು ಚರ್ಚಿಸಲಾಯಿತು.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...