18 C
Bangalore
Friday, December 6, 2019

ರಾಜ್ಯದಲ್ಲಿ ಸಂಘಟನಾ ಪರ್ವ ಆರಂಭ

Latest News

ನೀರಿದೆ, ಪೂರೈಕೆ ವ್ಯವಸ್ಥೆ ಇಲ್ಲ

ಚಿಕ್ಕಮಗಳೂರು: ಈ ವರ್ಷ ಮಳೆ ಚೆನ್ನಾಗಿಯೇ ಆಗಿದೆ. ಎಲ್ಲ ನೀರಿನ ಮೂಲಗಳೂ ಭರ್ತಿಯಾಗಿವೆ. ನೀರು ಕೊಡಲು ಇನ್ನೇನು ಸಮಸ್ಯೆ? ನಾಗರಿಕರ ಇಂತಹ ಮಾತು,...

ಕುಕ್ಕರಹಳ್ಳಿ ಕೆರೆಯಲ್ಲಿ ಎರಡು ದ್ವೀಪ ನಿರ್ಮಿಸಿ

ಮೈಸೂರು: ಕುಕ್ಕರಹಳ್ಳಿ ಕೆರೆಯಲ್ಲಿ ಹೊಸದಾಗಿ ಎರಡು ದ್ವೀಪಗಳನ್ನು ನಿರ್ಮಾಣ ಮಾಡುವಂತೆ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯ ಡಾ.ಕೆ.ಎಂ.ಜಯರಾಮಯ್ಯ ಮೈಸೂರು...

ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು

ಮೈಸೂರು: ತೀವ್ರ ಕುತೂಹಲ ಕೆರಳಿಸಿರುವ ಹುಣಸೂರು ಅಖಾಡದಲ್ಲಿ ಕುರುಡು ಕಾಂಚಾಣದ ಸದ್ದು ಮಾಡಿರುವುದರ ಜತೆಗೆ ಹೆಂಡದ ಘಾಟು ಹೆಚ್ಚು ವಿಜೃಂಭಿಸಿದೆ! ಮತದಾರರನ್ನು ಸೆಳೆಯಲು ಇಲ್ಲಿ...

ಯುವತಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಸೆರೆ

ಮೈಸೂರು: ಪ್ರೀತಿಸಲು ನಿರಾಕರಿಸಿದ ಯುವತಿಯ ಮೇಲೆ ಹಲ್ಲೆ ನಡೆಸಿದ್ದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಪಿರಿಯಾಪಟ್ಟಣ ಮೂಲದ ಮಂಚೇಗೌಡನಕೊಪ್ಪಲು ನಿವಾಸಿ, ಖಾಸಗಿ ಕಂಪನಿಯ ಉದ್ಯೋಗಿ ಅಮೃತ್...

ಹುಣಸೂರು ಉಪಕದನ ಬಹುತೇಕ ಶಾಂತಿಯುತ

ಮೈಸೂರು: ಜಿದ್ದಾಜಿದ್ದಿನ ಕಣವಾಗಿರುವ ಹುಣಸೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಗುರುವಾರ ಶೇ.76ರಷ್ಟು ಮತದಾನವಾಗಿದೆ. 2018ರ ಸಾರ್ವತ್ರಿಕ ಚುನಾವಣೆಯಲ್ಲಿ ಶೇ.82.54ರಷ್ಟು ಮತ್ತು ಆರು ತಿಂಗಳ...

ವಿಜಯಪುರ: ರಾಜ್ಯದಲ್ಲಿ ಸಂಘಟನಾ ಪರ್ವ ಆರಂಭಗೊಂಡಿದ್ದು, ಮುಂದಿನ ಚುನಾವಣೆಗೆ ಕಾರ್ಯಕರ್ತರು ಸನ್ನದ್ಧರಾಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಹೇಳಿದರು.
ನಗರದ ಮಹೇಶ್ವರಿ ಮಂಗಲ ಕಾರ್ಯಾಲಯದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಪ್ರಮುಖ ಕಾರ್ಯಕರ್ತರ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಿಜೆಪಿ ವಿಶಿಷ್ಟ ಹಾಗೂ ವಿಭಿನ್ನವಾದ ಪಕ್ಷವಾಗಿದ್ದು, ಸಾಮಾನ್ಯ ಕಾರ್ಯಕರ್ತರಿಗೂ ಅವಕಾಶಗಳನ್ನು ಕಲ್ಪಿಸಲಾಗುತ್ತಿದೆ. ಚಹಾ ಮಾರುವ ವ್ಯಕ್ತಿಯೂ ದೇಶದ ಪ್ರಧಾನಿ ಆಗಬಹುದು ಎನ್ನುವುದನ್ನು ಪಕ್ಷ ತೋರಿಸಿಕೊಟ್ಟಿದೆ. ಸಾಮಾನ್ಯ ಕಾರ್ಯಕರ್ತನಾದ ನನಗೆ ರಾಜ್ಯಾಧ್ಯಕ್ಷ ಸ್ಥಾನ ನೀಡಿ ಸಂಘಟನೆಗೆ ಪಕ್ಷ ಅನುವು ಮಾಡಿಕೊಟ್ಟಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
ಭ್ರಷ್ಟಾಚಾರಮುಕ್ತ, ಕಾಂಗ್ರೆಸ್‌ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬಂದು ಅನೇಕ ಜನಪ್ರಿಯ ಯೋಜನೆಗಳನ್ನು ದೇಶದ ಜನರಿಗೆ ನೀಡಿದ್ದಾರೆ. ಉಜ್ವಲ, ಸ್ವಚ್ಛ ಭಾರತ ಅಭಿಯಾನ, ಮುದ್ರಾ ಯೋಜನೆ, ಸುಕನ್ಯಾ ಸಮೃದ್ಧಿ, ಜನ್‌ಧನ್ ಯೋಜನೆ ಇನ್ನಿತರ ಮಹತ್ವದ ಯೋಜನೆಗಳನ್ನು ನೀಡಿದ್ದಾರೆ. ಜಗದ್ಗುರು ಭಾರತ ನಿರ್ಮಾಣದ ಕನಸು ಹೊಂದಿದ್ದ ಸ್ವಾಮಿ ವಿವೇಕಾನಂದರ ಕನಸನ್ನು ಮೋದಿ ಅವರು ನನಾಸಾಗಿಸುತ್ತಿದ್ದಾರೆ ಎಂದರು.
ಅರಬ್ ರಾಷ್ಟ್ರಗಳಲ್ಲಿಯೂ ಮೋದಿ ಅವರ ಅಲೆ ಹೆಚ್ಚಾಗಿದೆ. ವಿಶ್ವದ ದೊಡ್ಡಣ್ಣ ಅಮೆರಿಕಾದ ಅಧ್ಯಕ್ಷ ಟ್ರಂಪ್ ಅವರೇ, ಮೋದಿ ಅವರು ಸಬ್‌ಕಾ ಸಾತ್ ಸಬ್ ಕಾ ವಿಕಾಸ್ ಯೋಜನೆ ಜಾರಿಗೊಳಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ನೆನಪಿಸಿದರು. ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ 370 ಕಲಂ ಅನ್ನು ರದ್ದುಗೊಳಿಸುವ ಮೂಲಕ ಶ್ಯಾಂ ಪ್ರಸಾದ್ ಮುಖರ್ಜಿ ಅವರ ಕನಸನ್ನು ಸಕಾರಗೊಳಿಸಿದ ಕೀರ್ತಿ ಮೋದಿ ಅವರಿಗೆ ಸಲ್ಲುತ್ತದೆ ಎಂದರು.

ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ: ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಈಗಿನಿಂದಲೇ ಕಾರ್ಯಕರ್ತರು ಸಜ್ಜುಗೊಳ್ಳಬೇಕು ಎಂದು ಕಟೀಲ್ ತಿಳಿಸಿದರು. ಯಡಿಯೂರಪ್ಪ ನೇತೃತ್ವದ ಸರ್ಕಾರ ಪೂರ್ಣಾವಧಿ ಪೂರೈಸಲಿದೆ. ಬರ ಮತ್ತು ನೆರೆ ಎರಡನ್ನು ಏಕಕಾಲಕ್ಕೆ ಬಿಎಸ್‌ವೈ ಅವರು ನಿರ್ವಹಣೆ ಮಾಡುತ್ತಿದ್ದಾರೆ. ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ, ಸಂತ್ರಸ್ತರಿಗೆ ಪರಿಹಾರ ನೀಡುವ ಕೆಲಸ ಮಾಡುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಬಿಜೆಪಿ 150ಕ್ಕೂ ಹೆಚ್ಚು ಸ್ಥಾನ ಪಡೆದು ಮತ್ತೊಮ್ಮೆ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಾಂಗ್ರೆಸ್ಸಿಗರು ನಿರುದ್ಯೋಗಿಗಳು: ಅಧಿಕಾರ ಕಳೆದುಕೊಂಡ ಕಾಂಗ್ರೆಸ್ಸಿಗರು ನಿರುದ್ಯೋಗಿಗಳಾಗಿದ್ದಾರೆ. ಅಧಿಕಾರವಿದ್ದಾಗ ಕೆಲಸ ಮಾಡದೆ ಸರ್ಕಾರವನ್ನು ಟೀಕಿಸುವ ಕೆಲಸ ಮಾಡುತ್ತಿದ್ದಾರೆ. ಭ್ರಷ್ಟಾಚಾರವನ್ನು ಬೆಂಬಲಿಸಿ, ಸರ್ಕಾರದ ಆಸ್ತಿ-ಪಾಸ್ತಿಯನ್ನು ಹಾನಿ ಮಾಡುವ, ಪ್ರತಿಭಟನೆ ಕೈಗೊಳ್ಳುವ ಮೂಲಕ ಕಾಂಗ್ರೆಸ್‌ನವರು ನಿರುದ್ಯೋಗಿಗಳಾಗಿದ್ದಾರೆ. ಭ್ರಷ್ಟಾಚಾರ ಮಾಡಿದರೆ ಜೈಲಿಗೆ ಕಳುಹಿಸಲು ಮೋದಿ ನಿರ್ಧರಿಸಿದ್ದಾರೆ. ಆದರೆ ಕಾಂಗ್ರೆಸ್‌ನವರಿಗೆ ಕೋರ್ಟ್‌ನಲ್ಲಿ, ಸಂವಿಧಾನದಲ್ಲಿ ನಂಬಿಕೆ ಇಲ್ಲ, ಈ ಕಾರಣಕ್ಕಾಗಿಯೇ ದ್ವೇಷದ ರಾಜಕಾರಣ ಎಂದು ಹೇಳುತ್ತಿದೆ, ಆದರೆ ಬಿಜೆಪಿ ಎಂದೂ ದ್ವೇಷದ ರಾಜಕಾರಣ ಮಾಡುವುದಿಲ್ಲ. ಸಿಬಿಐ ಮೊದಲಾದವುಗಳು ಸ್ವಾಯುತ್ತ ಸಂಸ್ಥೆಗಳು, ತನ್ನ ಕೆಲಸವನ್ನು ತಾವು ಮಾಡುತ್ತಿವೆ ಎಂದರು.

ಸಿದ್ದು ವಿರುದ್ಧ ಲೇವಡಿ: ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇನ್ನೂ ಆರು ತಿಂಗಳಲ್ಲಿ ಚುನಾವಣೆ ಬರುತ್ತದೆ ಎಂದು ಹೇಳಿಕೊಂಡು ಅಡ್ಡಾಡುತ್ತಿದ್ದಾರೆ. ಅವರು ಅಧಿಕಾರದಲ್ಲಿದ್ದಾಗ ನಿದ್ರಾಮಯ್ಯ ಆಗಿದ್ದರೂ. ಇದೀಗ ಎಚ್ಚೆತ್ತುಕೊಂಡಿದ್ದು, ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಟೀಕಿಸುವುದೇ ಅವರ ಕೆಲಸವಾಗಿದೆ. ಸಿದ್ದರಾಮಯ್ಯ ಅವರು ಕಳೆದ ಐದು ವರ್ಷ ನಿದ್ರೆ ಮಾಡಿದರು, ಅವರಿಗೆ ಸಂಬಂಧಿಸಿದಂತೆ ರಾಮಾಯಣದ ಕಥಾಭಾಗವೊಂದು ನೆನಪಿಸಿದ ಅವರು, ಕುಂಭಕರ್ಣನ ಬಳಿ ಒಬ್ಬರು ಅಳುತ್ತಿರುವುದನ್ನು ರಾಮ ಕಾಣುತ್ತಾನೆ. ಆಗ ಅಲ್ಲಿರುವವುದು ನಿದ್ರಾದೇವಿ ಎಂದು ಗೊತ್ತಾಗುತ್ತದೆ. ಆಗ ವಿಚಾರಿಸುವ ಶ್ರೀರಾಮನಿಗೆ ಆ ನಿದ್ರಾದೇವಿ ಹೇಳುತ್ತಾಳೆ, ಇಷ್ಟು ದಿನ ನಾನು ಕುಂಭಕರ್ಣನಲ್ಲಿ ಆಶ್ರಯ ಪಡೆದುಕೊಂಡಿದ್ದೆ, ಈಗ ನಾನು ಎಲ್ಲಿ ಹೋಗಬೇಕು ಎಂಬ ಚಿಂತೆಯಲ್ಲಿದ್ದೇನೆ ಎಂದು ಅಳುತ್ತಿರುವುದಾಗಿ ತಿಳಿಸುತ್ತಾಳೆ. ತಕ್ಷಣವೇ ರಾಮ ನಿದ್ರಾದೇವಿಗೆ ವರವನ್ನು ನೀಡಿ, ಕಲಿಯುಗದಲ್ಲಿ ನನ್ನ ಹೆಸರಿನ ವ್ಯಕ್ತಿಯೇ ಒಂದು ರಾಜ್ಯದ ಮುಖ್ಯಮಂತ್ರಿಯಾಗುತ್ತಾನೆ, ಆತನ ಬಳಿ ನೀನು ಹೋಗು ಎಂದು ಹೇಳುತ್ತಾನೆ. ಹೀಗಾಗಿ ನಿದ್ರಾದೇವಿ ಸಿದ್ದರಾಮಯ್ಯ ಅವರಲ್ಲಿದ್ದಾಳೆ ಎಂದು ವ್ಯಂಗ್ಯವಾಡಿದರು.
ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಅರುಣ್ ಮಾತನಾಡಿದರು. ಚುನಾವಣಾ ಉಸ್ತುವಾರಿ ಅಮರನಾಥ ಪಾಟೀಲ, ಸಂಸದ ರಮೇಶ ಜಿಗಜಿಣಗಿ, ಪಕ್ಷದ ಜಿಲ್ಲಾದ್ಯಕ್ಷ ಚಂದ್ರಶೇಖರ ಕವಟಗಿ, ಶಾಸಕರಾದ ಬಸನಗೌಡ ಯತ್ನಾಳ್, ಎ.ಎಸ್. ಪಾಟೀಲ ನಡಹಳ್ಳಿ, ಸೋಮನಗೌಡ ಪಾಟೀಲ ಸಾಸನೂರ, ಎಂಎಲ್‌ಸಿ ಅರುಣ ಶಹಾಪುರ, ಹನುಮಂತ ನಿರಾಣಿ, ಮಾಜಿ ಸಚಿವರಾದ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಎಸ್.ಕೆ.ಬೆಳ್ಳುಬ್ಬಿ, ಮಾಜಿ ಶಾಸಕ ರಮೇಶ ಭೂಸನೂರ, ಮನೋಹರ ಐನಾಪುರ, ಮುಖಂಡರಾದ ವಿಜಯಕುಮಾರ ಪಾಟೀಲ, ಡಾ.ಗೋಪಾಲ ಕಾರಜೋಳ, ಸಂಗರಾಜ ದೇಸಾಯಿ, ದಯಾಸಾಗರ ಪಾಟೀಲ ಇತರರು ಪಾಲ್ಗೊಂಡಿದ್ದರು.

Stay connected

278,730FansLike
580FollowersFollow
619,000SubscribersSubscribe

ವಿಡಿಯೋ ನ್ಯೂಸ್

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...

VIDEO| 3ನೇ ಮಹಡಿಯಿಂದ ಬಿದ್ದರೂ ಗಾಯವಾಗದೇ ಬದುಕುಳಿದ 2 ವರ್ಷದ...

ಪಂಜಿಮ್​: ದಮನ್ ಮತ್ತು ದಿಯುನಲ್ಲಿರುವ ಹೌಸಿಂಗ್​ ಕಾಂಪ್ಲೆಕ್ಸ್​ನ ಮೂರನೇ ಮಹಡಿಯಿಂದ ಕೆಳಗೆ ಬಿದ್ದ ಎರಡು ವರ್ಷದ ಮಗುವೊಂದು ಪವಾಡ ರೀತಿಯಲ್ಲಿ ಬದುಕುಳಿದಿರುವ ಘಟನೆ ನಡೆದಿದ್ದು, ಇದಕ್ಕೆ ಸಂಬಂಧಪಟ್ಟ ವಿಡಿಯೋ ಸಾಮಾಜಿಕ...

‘ಅಬುಧಾಬಿ ಯುವರಾಜ ಮತ್ತು ಪುಟ್ಟ ಬಾಲಕಿ’ಯ ಭಾವನಾತ್ಮಕ ಕತೆಯಿದು…; ನಿರಾಸೆಗೊಂಡ...

ಈ ಸುದ್ದಿ ಓದಿ, ವಿಡಿಯೋ ನೋಡಿದರೆ ಒಂದು ಕ್ಷಣ ಹೃದಯಕ್ಕೆ ತಟ್ಟುತ್ತದೆ. ಪುಟ್ಟ ಹುಡುಗಿಯ ನಿರಾಸೆ ಮತ್ತು ಅಬುಧಾಬಿಯ ಯುವರಾಜ ಶೇಖ್​ ಮೊಹಮ್ಮದ್​ ಬಿನ್​​ ಜಾಯೇದ್​ ಅವರ ಮೃದು ಮನಸು ಇಲ್ಲಿ ಅನಾವರಣಗೊಂಡಿದೆ. ಸೌದಿ...

VIDEO| ಪಶುವೈದ್ಯೆ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಗಳ ವಿಚಾರವಾಗಿ ಪ್ರಧಾನಿ...

ಮುಂಬೈ: ತೆಲಂಗಾಣದಲ್ಲಿ ನಡೆದ ಮಹಿಳಾ ಪಶುವೈದ್ಯಾಧಿಕಾರಿಯ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಇಡೀ ದೇಶವೇ ಖಂಡಿಸಿದ್ದು, ಆರೋಪಿಗಳಿಗೆ ಘೋರ ಶಿಕ್ಷೆಯಾಗಬೇಕೆಂಬ ಒಕ್ಕೊರಲು ಅಭಿಪ್ರಾಯ ವ್ಯಕ್ತವಾಗುತ್ತಿದೆ. ಭಾರತೀಯ ಸಿನಿಮಾ ರಂಗದ ತಾರೆಯರು ಕೂಡ...

VIDEO| ಸಫಾರಿ ವಾಹನವನ್ನು ಹಿಮ್ಮೆಟ್ಟಿ ಬಂದ ಹುಲಿ ವಿಡಿಯೋ ವೈರಲ್​:...

ಸವಾಯಿ ಮಧೊಪುರ್​: ರಾಜಸ್ಥಾನದ ರಣಥಂಬೋರ್​ ರಾಷ್ಟ್ರೀಯ ಉದ್ಯಾನವನದಲ್ಲಿ ಹೆಣ್ಣು ಹುಲಿಯೊಂದು ಪ್ರವಾಸಿಗರಿದ್ದ ಸಫಾರಿ ಜೀಪ್​ ಅನ್ನು ಹಿಮ್ಮೆಟ್ಟಿಸಿಕೊಂಡು ಬಂದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ. ವಿಡಿಯೋದಲ್ಲಿರುವ ಹುಲಿಯನ್ನು ಕೋಡ್​...