ಕಿಡಿಗೇಡಿಗಳಿಂದ ಕಬ್ಬಿಗೆ ಬೆಂಕಿ

>

ಚಡಚಣ: ಸಮೀಪದ ನಿವರಗಿ ಗ್ರಾಮದ ರೈತನ ಕಬ್ಬಿನ ಗದ್ದೆಗೆ ಶನಿವಾರ ಕಿಡಿಗೇಡಿಗಳು ಬೆಂಕಿ ಹಚ್ಚಿದ ಪರಿಣಾಮ ಕಬ್ಬು ಸಂಪೂರ್ಣ ಸುಟ್ಟು ಲಕ್ಷಾಂತರ ರೂ. ಹಾನಿಯಾಗಿದೆ.

ಗ್ರಾಮದ ಹಿರಗಣ್ಣ ವಿಠಲ ಪೂಜಾರಿ ಅವರಿಗೆ ಸೇರಿದ ಕಬ್ಬಿನ ಗದ್ದೆಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. ಪರಿಣಾಮ ಕಟಾವಿಗೆ ಬಂದಿದ್ದ 3 ಎಕರೆ ಕಬ್ಬು ಬೆಂಕಿಗೆ ಆಹುತಿಯಾಗಿದೆ. ಸುದ್ದಿ ತಿಳಿದು ಸ್ಥಳಕ್ಕಾಗಮಿಸಿದ ಇಂಡಿ ಅಗ್ನಿ ಶಾಮಕ ದಳದ ಸಿಬ್ಬಂದಿ ಹಾಗೂ ಅಕಪಕ್ಕದ ರೈತರು ಹರಸಾಹಸ ಪಟ್ಟು ಬೆಂಕಿ ನಂದಿಸಲು ಯಶಸ್ವಿಯಾದರು. ಚಡಚಣ ಪೊಲೀಸ್ ಠಾಣೆೆಯಲ್ಲಿ ಪ್ರಕರಣ ದಾಖಲಾಗಿದೆ.