More

    ತಲೆ ಮೇಲೆ ಕಲ್ಲು ಹೊತ್ತು ಪ್ರತಿಭಟನೆ

    ವಿಜಯಪುರ: ನಗರದ ಅಭಿವೃದ್ಧಿಗೆ ಒತ್ತಾಯಿಸಿ ಜೆಡಿಎಸ್ ಅಲ್ಪಸಂಖ್ಯಾತರ ರಾಜ್ಯ ಸಂಘಟನಾ ಕಾರ್ಯದರ್ಶಿ ಇಜಾಜ ಅಹ್ಮದ ಮುಕಬಿಲ ನೇತೃತ್ವದಲ್ಲಿ ಸೋಮವಾರ ಜಿಲ್ಲಾಡಳಿತದ ಮುಂದೆ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.

    ವಾರ್ಡ್ ನಂ.28ರಲ್ಲಿ ಮೂಲ ಸೌಕರ್ಯಗಳಿಲ್ಲ. ಒಳ ಚರಂಡಿ ವ್ಯವಸ್ಥೆ, ರಸ್ತೆ ಅಭಿವೃದ್ಧಿ ಕಾಣದೆ ಜನರು ಸಮಸ್ಯೆ ಅನುಭವಿಸುತ್ತಿದ್ದಾರೆ. ಮಳೆ ಬಂದಾಗ ವಾಹನ ಸಂಚಾರಕ್ಕೆ ತೊಂದರೆ ಆಗುತ್ತಿದೆ. ಈ ಬಗ್ಗೆ ಅನೇಕ ಬಾರಿ ಪಾಲಿಕೆ ಅಧಿಕಾರಿಗಳ ಗಮನಕ್ಕೆ ತಂದರೂ ಪ್ರಯೋಜನ ಆಗಿಲ್ಲ. ಈ ಬಗ್ಗೆ ಅಧಿಕಾರಿಗಳು ಎಚ್ಚೆತ್ತುಕೊಂಡು ಕಾಮಗಾರಿ ಕೈಗೊಳ್ಳಬೇಕೆಂದು ಕಾರ್ಯಕರ್ತರು ಒತ್ತಾಯಿಸಿದರು.

    ಇದೇ ವೇಳೆ ಮಹಾನಗರ ಪಾಲಿಕೆ ಕಚೇರಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ತಲೆ ಮೇಲೆ ಕಲ್ಲು ಹೊತ್ತು ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.

    ಜೆಡಿಎಸ್ ಯುವ ಘಟಕದ ಜಿಲ್ಲಾ ಕಾರ್ಯಾಧ್ಯಕ್ಷ ಸಾಜಿದ ಹುಸೇನರಿಸಾಲ್ದಾರ, ನಿಂಗನಗೌಡ ಸೋಲಾಪುರ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts