More

    ಇಂದಿರಾ ಗಾಂಧಿ ಜನ್ಮ ದಿನಾಚರಣೆ

    ವಿಜಯಪುರ: ನಗರದ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಅವರ ಜನ್ಮ ದಿನವನ್ನು ಗುರುವಾರ ಆಚರಿಸಲಾಯಿತು.

    ಇಂದಿರಾ ಗಾಂಧಿ ಭಾವಚಿತ್ರಕ್ಕೆ ಪುಷ್ಪ ಸಮರ್ಪಿಸಿದ ಜಿಲ್ಲಾಧ್ಯಕ್ಷ ಪ್ರೊ.ರಾಜು ಆಲಗೂರ ಮಾತನಾಡಿ, ಉಕ್ಕಿನ ಮಹಿಳೆ ಎಂದೇ ಖ್ಯಾತರಾದ ಇಂದಿರಾಜಿಯವರು 17 ವರ್ಷ ಈ ದೇಶದ ಪ್ರಧಾನಿಯಾಗಿ ಬಡವರು, ದೀನ ದಲಿತರು, ಹಿಂದುಳಿದ ವರ್ಗಗಳ ಅಪಾರ ಪ್ರೀತಿ ಗಳಿಸಿದ್ದರು. ಕೆಳವರ್ಗದ ಜನರಿಗಾಗಿ ರೋಟಿ, ಕಪಡಾ ಔರ ಮಕಾನ್, ಪಡಿತರ ಚೀಟಿ, ವೃದ್ಧಾಪ್ಯ ವೇತನ ಮುಂತಾದ ಜನಪರ ಯೋಜನೆಗಳನ್ನು ರೂಪಿಸಿದ್ದರು. ಬ್ಯಾಂಕ್‌ಗಳನ್ನು ರಾಷ್ಟ್ರೀಕರಣಗೊಳಿಸಿ ಊಳುವವನೆ ಭೂಮಿಯ ಒಡೆಯ ಮುಂತಾದ ಯೋಜನೆಗಳನ್ನು ಜಾರಿಗೆ ತಂದರು. ಅವರ ಆದರ್ಶಗಳನ್ನು ನಾವೆಲ್ಲರೂ ರೂಢಿಸಿಕೊಳ್ಳೋಣವೆಂದರು.

    ಮುಖಂಡರಾದ ವೈಜನಾಥ ಕರ್ಪೂರಮಠ, ಹಾಸಿಂಪೀರ ವಾಲೀಕಾರ, ಎಂ.ಎಂ.ಸುತಾರ, ವೈಜನಾಥ ಕರ್ಪೂರಮಠ, ವಿಜಯಕುಮಾರ ಘಾಟಗೆ, ಶಬ್ಬೀರ ಜಹಾಗೀರದಾರ, ಅಬ್ದುಲ್ ಹಮೀದ್ ಮುಶ್ರೀಫ್, ಚಾಂದಸಾಬ ಗಡಗಲಾವ, ಬಾಳನಗೌಡ ಪಾಟೀಲ, ಸಾಹೇಬಗೌಡ ಬಿರಾದಾರ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts