More

    ಶತಕ ಸನಿಹ ಮೃತರ ಸಂಖ್ಯೆ

    ವಿಜಯಪುರ: ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ ನಾಲ್ವರು ಮೃತಪಟ್ಟಿದ್ದು, 140 ಜನರಿಗೆ ಕರೊನಾ ಸೋಂಕು ದೃಢವಾಗಿದೆ. ಮೃತರ ಸಂಖ್ಯೆ 95ಕ್ಕೆ ಏರಿಕೆ ಆಗಿದೆ. ಮೃತರ ಅಂತ್ಯ ಸಂಸ್ಕಾರ ಶಿಷ್ಟಾಚಾರದಂತೆ ನೆರವೇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ಮಾಹಿತಿ ನೀಡಿದ್ದಾರೆ.

    6,333ಕ್ಕೇರಿದ ಸೋಂಕಿತರು

    ಜಿಲ್ಲೆಯಲ್ಲಿ ಶುಕ್ರವಾರ ಮತ್ತೆ 140 ಜನರಿಗೆ ಕರೊನಾ ಸೋಂಕು ಇರುವುದು ದೃಢವಾಗಿದೆ. ಇಲ್ಲಿವರೆಗೆ 6,333 ಜನರಿಗೆ ಸೋಂಕು ದೃಢವಾಗಿದೆ. ಶುಕ್ರವಾರ 152 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಟ್ಟು 5,431 ಜನರು ಬಿಡುಗಡೆಗೊಂಡಿದ್ದಾರೆ.
    ಒಟ್ಟು 70,984 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ 63,463 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ 1,188 ಜನರ ವರದಿ ಬರಬೇಕಿದೆ. 807 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 54,219 ಜನರ ಮೇಲೆ ನಿಗಾ ವಹಿಸಲಾಗಿದೆ. 41,557 ಜನರು ಕ್ವಾರಂಟೈನ್ ಅವಧಿ ಮುಗಿಸಿದ್ದಾರೆ. 7,136 ಜನರು ರಿಪೋರ್ಟಿಂಗ್ ಅವಧಿಯಲ್ಲಿದ್ದಾರೆ.

    ತಾಲೂಕುವಾರು ಮಾಹಿತಿ

    ವಿಜಯಪುರ ತಾಲೂಕು ವ್ಯಾಪ್ತಿ 3356, ಬಸವನಬಾಗೇವಾಡಿ 605, ಬಬಲೇಶ್ವರ 65, ಚಡಚಣ 35, ದೇವರಹಿಪ್ಪರಗಿ 59, ಇಂಡಿ 570, ಕೊಲ್ಹಾರ 57, ಮುದ್ದೇಬಿಹಾಳ 606, ನಿಡಗುಂದಿ 35, ಸಿಂದಗಿ 527, ತಾಳಿಕೋಟೆ 198, ತಿಕೋಟಾ 76 ಹಾಗೂ ಇತರ ಜಿಲ್ಲೆಗಳಿಂದ ಆಗಮಿಸಿದ 144 ಜನರಿಗೆ ಕೋವಿಡ್ ಸೋಂಕು ದೃಢವಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts