More

    ಅರ್ಧ ಶತಕ ಬಾರಿಸಿದ ಕರೊನಾ

    ವಿಜಯಪುರ: ಜಿಲ್ಲೆಯಲ್ಲಿ ಮತ್ತೆ ಕರೊನಾ ಅರ್ಧ ಶತಕ ಬಾರಿಸಿದೆ. ಗುರುವಾರ 52 ಜನರಿಗೆ ಕರೊನಾ ಸೋಂಕು ದೃಢವಾಗಿದ್ದು, ಈ ವರೆಗೆ ಸೋಂಕಿತರ ಸಂಖ್ಯೆ 13,191ಕ್ಕೆ ಏರಿಕೆ ಆಗಿದೆ.
    33 ಜನರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಈ ವರೆಗೆ 12,671 ಜನರು ಗುಣಮುಖರಾಗಿದ್ದಾರೆ. ಒಟ್ಟು 1,56,082 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ 1,41,311 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ 1,580 ಜನರ ವರದಿ ಬರಬೇಕಿದೆ. 323 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 1,56,913 ಜನರ ಮೇಲೆ ನಿಗಾ ವಹಿಸಲಾಗಿದೆ. 1,43,344 ಜನರು ಕ್ವಾರಂಟೈನ್ ಅವಧಿ ಮುಗಿಸಿದ್ದಾರೆ. 701 ಜನರು ರಿಪೋರ್ಟಿಂಗ್ ಅವಧಿಯಲ್ಲಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts