More

    144 ಜನರು ಆಸ್ಪತ್ರೆಯಿಂದ ಬಿಡುಗಡೆ

    ವಿಜಯಪುರ: ಜಿಲ್ಲೆಯಲ್ಲಿ ಶುಕ್ರವಾರ ಕರೊನಾದಿಂದ ಗುಣಮುಖರಾದವರ ಸಂಖ್ಯೆ ಹೆಚ್ಚಳವಾಗಿದೆ. 144 ಜನರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಈ ವರೆಗೆ 12,386 ಜನರು ಗುಣಮುಖರಾಗಿದ್ದಾರೆ.
    ಮತ್ತೆ 53 ಜನರಲ್ಲಿ ಕೋವಿಡ್ ಸೋಂಕು ದೃಢವಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 12,893 ಕ್ಕೆ ಏರಿಕೆ ಆಗಿದೆ. ಒಟ್ಟು 1,48,918 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ 1,35,158 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ 867 ಜನರ ವರದಿ ಬರಬೇಕಿದೆ. 311 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 1,49,626 ಜನರ ಮೇಲೆ ನಿಗಾ ವಹಿಸಲಾಗಿದೆ. 1,36,252 ಜನರು ಕ್ವಾರಂಟೈನ್ ಅವಧಿ ಮುಗಿಸಿದ್ದಾರೆ. 792 ಜನರು ರಿಪೋರ್ಟಿಂಗ್ ಅವಧಿಯಲ್ಲಿದ್ದಾರೆ. ಶುಕ್ರವಾರ 56 ವರ್ಷದ ವ್ಯಕ್ತಿ ಸಾವನ್ನಪ್ಪಿದ್ದು, ಈ ವರೆಗೆ ಮೃತರ ಸಂಖ್ಯೆ 196ಕ್ಕೆ ಏರಿಕೆ ಆಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts