More

    ಗುಣಮುಖರ ಸಂಖ್ಯೆ ಏರಿಕೆ

    ವಿಜಯಪುರ: ಜಿಲ್ಲೆಯಲ್ಲಿ ಕರೊನಾದಿಂದ ಗುಣಮುಖರ ಸಂಖ್ಯೆ ಹೆಚ್ಚಳವಾಗಿದೆ. ಸೋಮವಾರ 64 ಜನರು ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಈ ವರೆಗೆ 12,563 ಜನರು ಗುಣಮುಖರಾಗಿದ್ದಾರೆ.
    38 ಜನರಲ್ಲಿ ಕೋವಿಡ್ ಸೋಂಕು ದೃಢವಾಗಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 13,028ಕ್ಕೆ ಏರಿಕೆ ಆಗಿದೆ. ಒಟ್ಟು 1,52,275 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ 1,38,437 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ 810 ಜನರ ವರದಿ ಬರಬೇಕಿದೆ. 269 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 1,53,581 ಜನರ ಮೇಲೆ ನಿಗಾ ವಹಿಸಲಾಗಿದೆ. 1,40,265 ಜನರು ಕ್ವಾರಂಟೈನ್ ಅವಧಿ ಮುಗಿಸಿದ್ದಾರೆ. 557 ಜನರು ರಿಪೋರ್ಟಿಂಗ್ ಅವಧಿಯಲ್ಲಿದ್ದಾರೆ. ಸೋಮವಾರ ಮೃತಪಟ್ಟವರ ಸಂಖ್ಯೆ ವರದಿಯಾಗಿಲ್ಲ. ಈ ವರೆಗೆ 196 ಜನರು ಮೃತಪಟ್ಟಿದ್ದಾರೆ ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts