More

    ಮೂರನೇ ಅಲೆ ತಡೆಗೆ ಸಿದ್ಧತೆ

    ವಿಜಯಪುರ: ಗಡಿ ಭಾಗದ ವಿಜಯಪುರ ಜಿಲ್ಲೆಯಲ್ಲಿ ಕರೊನಾ ಮೂರನೇ ಅಲೆ ತಡೆಗೆ ಜಿಲ್ಲಾಡಳಿತ ಮುಂಜಾಗ್ರತೆ ಕ್ರಮ ಕೈಗೊಂಡಿದೆ. ಈಗಾಗಲೇ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಬೆಡ್‌ಗಳ ವ್ಯವಸ್ಥೆ ಸೇರಿದಂತೆ ಇತರ ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಮುನ್ನೆಚ್ಚರಿಕೆ ನೀಡಲಾಗಿದೆ.ಜಿಲ್ಲಾಸ್ಪತ್ರೆಯಲ್ಲಿರುವ ಹಳೇ ಡಯಾಲಿಸಿಸ್ ವಾರ್ಡ್‌ನ್ನು (ಬಿ) 10 ವೆಂಟಿಲೇಟರ್‌ಗಳುಳ್ಳ ಚಿಕ್ಕಮಕ್ಕಳ ತುರ್ತು ಚಿಕಿತ್ಸಾ ನಿಗಾ ಘಟಕವನ್ನಾಗಿ ಮಾರ್ಪಡಿಸಲಾಗಿದೆ. ಹೆಚ್ಚುವರಿಯಾಗಿ 14 ಹಾಸಿಗೆಯ ಎಚ್‌ಡಿಯು ಸಾಮಾನ್ಯ ತೀವ್ರ ನಿಗಾ ಘಟಕ ಸ್ಥಾಪಿಸಲಾಗಿದೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

    ಶೇ.75 ರಷ್ಟು ಹಾಸಿಗೆ ಮೀಸಲು
    ಜಿಲ್ಲೆಯಲ್ಲಿರುವ ಒಟ್ಟು 14 ಸರ್ಕಾರಿ ಆಸ್ಪತ್ರೆಗಳು, 162 ಖಾಸಗಿ ಆಸ್ಪತ್ರೆಗಳಲ್ಲಿ ಸರ್ಕಾರದ ಆದೇಶದನ್ವಯ ಶೇ.75 ರಷ್ಟು ಹಾಸಿಗೆಗಳನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗಾಗಿ ಮೀಸಲಿಡುವಂತೆ ಸೂಚನೆ ನೀಡಲಾಗಿದೆ. 3508 ಜನರಲ್ ಬೆಡ್, 2025 ಎಚ್‌ಡಿಯು ಆಕ್ಸಿಜನ್ ಬೆಡ್, 533 ಐಸಿಯುವಿ ಬೆಡ್ ವ್ಯವಸ್ಥೆ ಇದೆ. ಅದರಲ್ಲಿ 3122 ಜನರಲ್ ಬೆಡ್, 1713 ಎಚ್‌ಡಿಯು ಆಕ್ಸಿಜನ್ ಬೆಡ್, 211 ಐಸಿಯು, 400 ಐಸಿಯು ಮತ್ತು ವೆಂಟಿಲೇಟರ್ ಬೆಡ್‌ಗಳನ್ನು ಕಾಯ್ದಿರಿಸಲಾಗಿದೆ. ಜಿಲ್ಲಾಸ್ಪತ್ರೆಯಲ್ಲಿ 1000 ಎಲ್‌ಪಿಎಂ ಸಾಮರ್ಥ್ಯದ ಆಕ್ಸಿಜನ್ ಪ್ಲಾೃಂಟ್, ಮುದ್ದೇಬಿಹಾಳ, ಬಸವನಬಾಗೇವಾಡಿ, ಇಂಡಿ, ಸಿಂದಗಿ ತಾಲೂಕು ಆಸ್ಪತ್ರೆಯಲ್ಲಿ 500 ಎಲ್‌ಪಿಎಂ ಸಾಮರ್ಥ್ಯದ ಪ್ಲಾೃಂಟ್, ಚಡಚಣ ಸಮುದಾಯ ಆರೋಗ್ಯ ಕೇಂದ್ರದಲ್ಲಿ 280 ಎಲ್‌ಪಿಎಂ ಸಾಮರ್ಥ್ಯದ ಪ್ಲಾೃಂಟ್ ಅಳವಡಿಸಲಾಗಿದೆ.

    ಜಿಲ್ಲೆಯಲ್ಲಿ ಕೋವಿಡ್ ಮೂರನೇ ಅಲೆ ನಿಯಂತ್ರಣಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಕೈಗೊಳ್ಳಲಾಗುತ್ತಿದೆ. ಆಸ್ಪತ್ರೆಗಳಲ್ಲಿ ಸಿಬ್ಬಂದಿ ರಜೆ ಹೋಗದಂತೆ ಕ್ರಮ ಕೈಗೊಳ್ಳಲಾಗಿದೆ. ಗಡಿಭಾಗದ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ ಮಾಡಲಾಗುತ್ತಿದೆ. ಮಾಸ್ಕ್ ಧರಿಸುವುದು, ಪರಸ್ಪರ ಅಂತರ ಕಾಪಾಡುವುದು, ಸ್ಯಾನಿಟೈಸರ್ ಬಳಕೆಗೆ ಜನರಲ್ಲಿ ಮತ್ತಷ್ಟು ಜಾಗೃತಿ ಮೂಡಿಸಲಾಗುತ್ತಿದೆ.


    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts