More

    ಕರೊನಾಗೆ ಮತ್ತೊಬ್ಬ ವ್ಯಕ್ತಿ ಸಾವು

    ವಿಜಯಪುರ: ಜಿಲ್ಲೆಯಲ್ಲಿ ಭಾನುವಾರ ಮತ್ತೆ ಕರೊನಾ ಆಸ್ಫೋಟಗೊಂಡಿದ್ದು, 88 ಜನರಲ್ಲಿ ಕೋವಿಡ್ ಸೋಂಕು ದೃಢವಾಗಿದೆ. ಈ ಮೂಲಕ ಸೋಂಕಿತರ ಸಂಖ್ಯೆ 12,664ಕ್ಕೆ ಏರಿಕೆ ಆಗಿದೆ.
    60 ಜನರು ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದು, ಈವರೆಗೆ 11,931 ಜನರು ಕರೊನಾದಿಂದ ಗುಣಮುಖರಾಗಿದ್ದಾರೆ. ಒಟ್ಟು 1,43,295 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ 1,29,308 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ 1,323 ಜನರ ವರದಿ ಬರಬೇಕಿದೆ. 538 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 1,43,998 ಜನರ ಮೇಲೆ ನಿಗಾ ವಹಿಸಲಾಗಿದೆ. 1,30,535 ಜನರು ಕ್ವಾರಂಟೈನ್ ಅವಧಿ ಮುಗಿಸಿದ್ದಾರೆ. 1,337 ಜನರು ರಿಪೋರ್ಟಿಂಗ್ ಅವಧಿಯಲ್ಲಿದ್ದಾರೆ. ಭಾನುವಾರ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಈವರೆಗೆ ಮೃತರ ಸಂಖ್ಯೆ 195ಕ್ಕೆ ಏರಿಕೆ ಆಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ ಕುಮಾರ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts