ಗ್ರಾಮಲೆಕ್ಕಾಧಿಕಾರಿ ಅಮಾನತು

ಚಡಚಣ: ಸಮರ್ಪಕವಾಗಿ ಬೆಳೆ ಸಮೀಕ್ಷೆ ಮಾಡದೆ ಕರ್ತವ್ಯ ಲೋಪ ಎಸಗಿದ ಇಂಚಗೇರಿ ಗ್ರಾಮದ ಗ್ರಾಮಲೆಕ್ಕಾಧಿಕಾರಿ ಪ್ರವೀಣ ಲಮಾಣಿ ಅವರನ್ನು ಸೇವೆಯಿಂದ ಅಮಾನತುಗೊಳಿಸಿ ಜಿಲ್ಲಾಧಿಕಾರಿ ಎಸ್.ಬಿ. ಶೆಟ್ಟೆಣ್ಣವರ ಆದೇಶ ಹೊರಡಿಸಿದ್ದಾರೆ.

ಇಂಚಗೇರಿ ಗ್ರಾಮ ವ್ಯಾಪ್ತಿಯಲ್ಲಿ 1418 ಜಮೀನುಗಳಿದ್ದು, ಅದರಲ್ಲಿ 269 ಜಮೀನುಗಳ ಸಮೀಕ್ಷೆ ಮಾಡಲಾಗಿದೆ. ಮಹಾವೀರನಗರ ವ್ಯಾಪ್ತಿಯ 433 ಜಮೀನುಗಳಲ್ಲಿ ಕೇವಲ 141ಜಮೀನುಗಳ ಸಮೀಕ್ಷೆ ಮಾಡಲಾಗಿದೆ. ಬೆಳೆ ಸಮೀಕ್ಷೆ ಮೇಲ್ವಿಚಾರಣೆ ಕಾರ್ಯದಲ್ಲಿ ನಿರ್ಲಕ್ಷೃತನ ತೋರಿದ ಗ್ರಾಮಲೆಕ್ಕಾಧಿಕಾರಿ ಪ್ರವೀಣ ಲಮಾಣಿ ವಿರುದ್ಧ ಇಲಾಖೆ ವಿಚಾರಣೆ ಬಾಕಿ ಇರಿಸಿ ಅವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.