More

    ಕೇಂದ್ರ ಸರ್ಕಾರದ ಯೋಜನೆಗಳ ವ್ಯಾಪಕ ಜಾಗೃತಿ

    ವಿಜಯಪುರ: ಕೇಂದ್ರ ಸರ್ಕಾರದ ಯೋಜನೆಗಳು ಸಕಾಲಕ್ಕೆ ಸಾರ್ವಜನಿಕರಿಗೆ ತಲುಪಿಸುವ ನಿಟ್ಟಿನಲ್ಲಿ ಕ್ಷೇತ್ರ ಜನ ಸಂಪರ್ಕ ಕಾರ್ಯಾಲಯದಿಂದ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ ಎಂದು ಜಿಪಂ ಸಿಇಒ ಗೋವಿಂದ ರೆಡ್ಡಿ ಹೇಳಿದರು.
    ಇಲ್ಲಿನ ದರಬಾರ್ ಕಾಲೇಜಿನಲ್ಲಿ ಕ್ಷೇತ್ರ ಜನಸಂಪರ್ಕ ಕಾರ್ಯಾಲಯ, ವಾರ್ತಾ ಮತ್ತು ಪ್ರಸಾರ ಸಚಿವಾಲಯ, ಜಿಲ್ಲಾಡಳಿತ, ಜಿಪಂ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಎನ್‌ಎಸ್‌ಎಸ್ ಘಟಕ ಮತ್ತು ವಿವಿಎಸ್ ಮಹಾವಿದ್ಯಾಲಯದ ಸಂಯುಕ್ತಾಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಏಕ ಭಾರತ ಶ್ರೇಷ್ಠ ಭಾರತ ವಿಶೇಷ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
    ಯೋಜನೆಗಳ ಬಗ್ಗೆ ಅರಿವು ಮೂಡಿಸಲು ವಿವಿಧ ರಚನಾತ್ಮಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಸ್ಪರ್ಧೆಗಳನ್ನು ಸಹ ಏರ್ಪಡಿಸಲಾಗುತ್ತಿದೆ. ಗ್ರಾಮೀಣ ಹಾಗೂ ನಗರ ಪ್ರದೇಶದ ಜನರಿಗೆ ತಿಳಿವಳಿಕೆ ಮೂಡಿಸಲಾಗುತ್ತಿದೆ. ಪಾಲಕರು, ಹಿರಿಯ ನಾಗರಿಕರಿಗಾಗಿ ವಿಶೇಷ ಉಪನ್ಯಾಸಗಳನ್ನು ಏರ್ಪಡಿಸಲಾಗುತ್ತಿದೆ ಎಂದರು.
    ಕ್ಷೇತ್ರ ಜನಸಂಪರ್ಕ ಇಲಾಖೆ ಸಂಯೋಜಕ ಮುರುಳಿಧರ ಕಾರಭಾರಿ ಮಾತನಾಡಿ, ಯುವಕರಿಗೆ ದೇಶದ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ನಮ್ಮ ರಾಜ್ಯದ ಮತ್ತು ಅನ್ಯ ರಾಜ್ಯದ ಸಂಸ್ಕೃತಿ, ಕಲೆ, ಸಾಹಿತ್ಯದ ಪೋಷಣೆ ಮಾಡುವುದು ಕಾರ್ಯಕ್ರಮದ ಉದ್ದೇಶವಾಗಿದೆ ಎಂದರು. ಅರವಿಂದ ಕೊಪ್ಪ, ಸುನೀಲಕುಮಾರ ಯಾಧವ ಮಾತನಾಡಿದರು.
    ವಿವಿಧ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗಿಯಾಗಿದ್ದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪ್ರಮಾಣ ಪತ್ರ ನೀಡಲಾಯಿತು. ಕಾಲೇಜಿನ ಮುಖ್ಯಸ್ಥ ರಾಜೇಶ ದರಬಾರ್, ಎನ್‌ಎಸ್‌ಎಸ್ ನೋಡಲ್ ಅಧಿಕಾರಿ ಎಚ್ .ಎಸ್. ಸಜ್ಜಾದೆ, ಪ್ರಾಚಾರ್ಯ ಜಿ.ಎಚ್. ಮಣ್ಣೂರ, ವಿನಾಯಕ ಗ್ರಾಮಪುರೋಹಿತ, ಮಂಜುನಾಥ ಜನಗೊಂಡ, ರಾಜು ಕಪಾಳಿ ಮತ್ತಿತರರಿದ್ದರು.

    ಕೇಂದ್ರ ಸರ್ಕಾರದ ಯೋಜನೆಗಳ ವ್ಯಾಪಕ ಜಾಗೃತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts