More

    ದಲಿತರ ಮೇಲೆ ಪೊಲೀಸರ ದೌರ್ಜನ್ಯ ಸಲ್ಲ

    ವಿಜಯಪುರ: ಜಿಲ್ಲೆಯಲ್ಲಿ ದಲಿತರ ಮೇಲೆ ಪೊಲೀಸರ ದೌರ್ಜನ್ಯ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಡಾ. ಡಿ.ಜಿ. ಸಾಗರ್ ಆರೋಪಿಸಿದರು.

    ಪ್ರಜಾತಾಂತ್ರಿಕ ವ್ಯವಸ್ಥೆಯಲ್ಲಿ ಮಾನವ ಹಕ್ಕುಗಳಿಗೆ ಪೊಲೀಸರು ಕುತ್ತು ತರುತ್ತಿದ್ದಾರೆ. ಏಕಾಏಕಿ ರೌಡಿ ಶೀಟರ್ ಪ್ರಕರಣ ದಾಖಲಿಸಿ ದಲಿತರನ್ನು ಜೈಲಿಗೆ ಕಳುಸುವ ಷಡ್ಯಂತ್ರ ರೂಪಿಸಿದ್ದಾರೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಪೊಲೀಸ್ ಇಲಾಖೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

    ದಲಿತರ ಮೇಲಿನ ದೌರ್ಜನ್ಯ, ಕೊಲೆ, ಅಂಬೇಡ್ಕರ್ ಪ್ರತಿಮೆಗೆ ಅವಮಾನ, ದಲಿತ ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯಗಳು ಹೆಚ್ಚಾಗುತ್ತಿವೆ. ಈ ಬಗ್ಗೆ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳದೆ ಪ್ರತಿಭಟನಾಕಾರರ ಮೇಲೆ ರೌಡಿಶೀಟರ್ ತೆರೆದು ಭವಿಷ್ಯ ಹಾಳು ಮಾಡಲಾಗುತ್ತಿದೆ. ಜಿಲ್ಲೆಯ ಪೊಲೀಸ್ ಠಾಣೆಗಳು ಕೋಮುವಾದಿ ಠಾಣೆಗಳಾಗಿವೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ಬಿಜೆಪಿ ಮುಖಂಡನ ರೀತಿ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದರು.

    ರೌಡಿಶೀಟರ್ ತೆರೆಯಬೇಕಾದರೆ ಅಪರಾಧ ಹಿನ್ನೆಲೆ, ಕನಿಷ್ಠ ಮೂರು ತಿಂಗಳು ಶಿಕ್ಷೆಗೆ ಗುರಿ ಆಗಿರಬೇಕು. ಅಂತಹ ವ್ಯಕ್ತಿ ಮೇಲೆ ರೌಡಿಶೀಟರ್ ತೆರೆಯಬೇಕು. ಆದರೆ ಕೇವಲ ಸರ್ಕಾರದ ವಿರುದ್ಧ ಪ್ರತಿಭಟಿಸುವ, ಅನ್ಯಾಯಕ್ಕೊಳಗಾದವರ ಪರ ನ್ಯಾಯ ಕೇಳಲು ಹೋಗುವವರ ವಿರುದ್ಧ ರೌಡಿಶೀಟರ್ ತೆರೆದು ಅವರನ್ನು ಮೂಲೆಗುಂಪು ಮಾಡುವ ಕೆಲಸ ಮಾಡುತ್ತಿರುವುದು ಆತಂಕಕಾರಿ ವಿಷಯ ಎಂದರು.

    10 ರಂದು ಪ್ರತಿಭಟನೆ
    ದಲಿತರ ಮೇಲಿನ ಪೊಲೀಸ್ ದೌರ್ಜನ್ಯ ಖಂಡಿಸಿ ಮಾ.10 ರಂದು ದಸಂಸ ವತಿಯಿಂದ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ಅಂದು ಮಧ್ಯಾಹ್ನ 12 ಗಂಟೆಗೆ ವಿಜಯಪುರದ ಶ್ರೀ ಸಿದ್ಧೇಶ್ವರ ದೇವಸ್ಥಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನೆರವೇರಲಿದೆ. ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರು, ದಲಿತ ಮುಖಂಡರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

    ಮುಖಂಡರಾದ ರಮೇಶ ಆಸಂಗಿ, ವಿನಾಯಕ ಗುಣಸಾಗರ, ವೈ.ಸಿ.ಮಯೂರ, ಅಶೋಕ ಚಲವಾದಿ, ಸಿದ್ದು ರಾಯಣ್ಣ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts