More

    ಮತ್ತೆ ಸೋಂಕಿತರ ಸಂಖ್ಯೆ ಹೆಚ್ಚಳ

    ವಿಜಯಪುರ: ಜಿಲ್ಲೆಯಲ್ಲಿ ದಸರಾ ಹಬ್ಬದ ನಂತರ ಮಂಗಳವಾರ ಮತ್ತೆ ಕರೊನಾ ಸೋಂಕಿತರ ಸಂಖ್ಯೆ ಹೆಚ್ಚಳಗೊಂಡಿದೆ. ಒಂದೇ ದಿನ 126 ಜನರಲ್ಲಿ ಕೋವಿಡ್ ಪಾಸಿಟಿವ್ ದೃಢವಾಗಿದೆ. ಸೋಂಕಿತರ ಸಂಖ್ಯೆ 12,272ಕ್ಕೆ ಏರಿಕೆ ಆಗಿದೆ.
    63 ಜನರು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈವರೆಗೆ 11,635 ಜನರು ಗುಣಮುಖರಾಗಿದ್ದಾರೆ. 1,36,141 ಜನರ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅದರಲ್ಲಿ 1,23,172 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ 697 ಜನರ ವರದಿ ಬರಬೇಕಿದೆ. 446 ಸಕ್ರಿಯ ಪ್ರಕರಣಗಳಿದ್ದು, ಸೋಂಕಿತರಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 1,37,521 ಜನರ ಮೇಲೆ ನಿಗಾ ವಹಿಸಲಾಗಿದೆ. 1,24,263 ಜನರು ಕ್ವಾರಂಟೈನ್ ಅವಧಿ ಮುಗಿಸಿದ್ದಾರೆ. 1,432 ಜನರು ರಿಪೋರ್ಟಿಂಗ್ ಅವಧಿಯಲ್ಲಿದ್ದಾರೆ. ಮಂಗಳವಾರ ಒಬ್ಬ ವ್ಯಕ್ತಿ ಮೃತಪಟ್ಟಿದ್ದು, ಈವರೆಗೆ ಮೃತರ ಸಂಖ್ಯೆ 191ಕ್ಕೆ ಏರಿಕೆ ಆಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲಕುಮಾರ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts