More

    ಜಿಲ್ಲಾಧಿಕಾರಿ ಪಾಟೀಲ ವರ್ಗಾವಣೆಗೆ ವಿರೋಧ

    ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಒಂದೂವರೆ ವರ್ಷದಿಂದ ಜಿಲ್ಲಾಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ವೈ.ಎಸ್. ಪಾಟೀಲರನ್ನು ಏಕಾಏಕಿ ವರ್ಗಾವಣೆ ಮಾಡಿರುವುದನ್ನು ಖಂಡಿಸಿ ವಿವಿಧ ಪ್ರಗತಿಪರ ಮುಖಂಡರು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿ, ಅವರ ವರ್ಗಾವಣೆ ರದ್ದುಗೊಳಿಸುವಂತೆ ಆಗ್ರಹಿಸಿ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ್ ಮೂಲಕ ಮುಖ್ಯಮಂತ್ರಿಗಳಿಗೆ ಬುಧವಾರ ಮನವಿ ಸಲ್ಲಿಸಿದರು.
    ದಲಿತ ಮುಖಂಡ ಅಡಿವೆಪ್ಪ ಸಾಲಗಲ್ ಮಾತನಾಡಿ, ಜಿಲ್ಲೆಯಲ್ಲಿ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾಧಿಕಾರಿಗಳನ್ನು ದಿಢೀರ್ ವರ್ಗಾವಣೆ ಮಾಡಿರುವ ಕ್ರಮ ಸರಿಯಾದುದ್ದಲ್ಲ. ಪ್ರಪಂಚದಲ್ಲಿ ಹರಡುತ್ತಿರುವ ಕರೊನಾ ವೈರಸ್‌ನಿಂದ ಇಡೀ ಪ್ರಪಂಚವೇ ತಲ್ಲಣಗೊಂಡಿರುವ ಇಂತಹ ಪರಿಸ್ಥಿತಿಯಲ್ಲಿ ಅಧಿಕಾರಿಗಳನ್ನು ವರ್ಗಾವಣೆ ಮಾಡಿರುವ ಕ್ರಮ ಖಂಡನೀಯ ಎಂದರು.

    ಕೆಪಿಪಿಪಿ ರಾಜ್ಯಾಧ್ಯಕ್ಷ ಪ್ರಕಾಶ ಕುಂಬಾರ ಮಾತನಾಡಿ, ಜಿಲ್ಲೆಯಲ್ಲಿ ಕರೊನಾ ವಾರಿಯರ್ಸ್ ಜತೆಗೆ ನಿಕಟ ಸಂಪರ್ಕವನ್ನಿಟ್ಟುಕೊಂಡು ನಿಷ್ಠೆಯಿಂದ ಕಾರ್ಯನಿರ್ವಹಿಸಿದ ಪಾಟೀಲರ ಸೇವೆ ಅನನ್ಯವಾಗಿದೆ. ಇಂತಹ ಜಿಲ್ಲಾಧಿಕಾರಿಗಳನ್ನು ವರ್ಗಾವಣೆ ಮಾಡಿರುವುದು ಜಿಲ್ಲೆಯ ಪ್ರಜ್ಞಾವಂತ ಜನರಲ್ಲಿ ಸಂಶಯಕ್ಕೆ ಎಡೆಮಾಡಿಕೊಟ್ಟಿದೆ ಎಂದರು.
    ಸಮಾಜ ಸೇವಕರಾದ ಯಾಜ್ ಕಲಾದಗಿ, ಮಹಾದೇವ ರಾವಜಿ, ದಸ್ತಗೀರ್ ಸಾಲೋಟಗಿ, ಶರಣಗೌಡ ಪಾಟೀಲ, ರಾಜೇಂದ್ರ ಬಿರಾದಾರ, ರಜಾಕ್ ಕಾಖಂಡಕಿ, ರಾಜು ಕುಚಬಾಳ, ಸಿ.ಎಸ್. ಪಾಟೀಲ, ಸೋಮು ಕಲ್ಲೂರ, ಗಿರೀಶ ಕುಲಕರ್ಣಿ, ಮಲ್ಲು ಕುಂಬಾರ, ಯುವರಾಜ ಚೋಳಕೆ ಮತ್ತಿತರರು ಇದ್ದರು.

    ಜಿಲ್ಲಾಧಿಕಾರಿ ಪಾಟೀಲ ವರ್ಗಾವಣೆಗೆ ವಿರೋಧ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts