22.5 C
Bengaluru
Sunday, January 19, 2020

ಫಲವತ್ತತೆಗೆ ಅನುಗುಣವಾಗಿ ಬೆಳೆ ಬೆಳೆಯಿರಿ

Latest News

ಕುಸಿದು ಬಿದ್ದ ಕಾಲುವೆ ಸಂಪರ್ಕ ಸೇತುವೆ ಪರಿಶೀಲನೆ

ಮುದ್ದೇಬಿಹಾಳ: ತಾಲೂಕಿನ ಸರೂರ, ಕವಡಿಮಟ್ಟಿ, ನೆರಬೆಂಚಿ ಗ್ರಾಮದ ಭಾಗದಲ್ಲಿ ಹಾಯ್ದು ಹೋಗಿರುವ ಕಾಲುವೆ ಕಾಮಗಾರಿ ಕಳಪೆಮಟ್ಟದಿಂದ ಕೂಡಿದ್ದು, ಕೂಡಲೇ ದುರಸ್ತಿಗೆ ಅಧಿಕಾರಿಗಳು ಕ್ರಮ...

400 ಲೀಟರ್ ಹಾಲು ಮಣ್ಣು ಪಾಲು

ಬಸರಾಳು: ಚಾಲಕನ ನಿಯಂತ್ರಣ ತಪ್ಪಿ ಹಾಲಿನ ಲಾರಿ ಉರುಳಿಬಿದ್ದ ಪರಿಣಾಮ 300 ರಿಂದ 400 ಲೀಟರ್ ಹಾಲು ಮಣ್ಣುಪಾಲಾಗಿದೆ.ನಾಗಮಂಗಲ, ಬಸರಾಳು ಹೋಬಳಿಯ ವಿವಿಧ...

ಪಲ್ಸ್ ಪೋಲಿಯೋದಲ್ಲಿ ಶೇ.95ರಷ್ಟು ಸಾಧನೆ

ಮಂಡ್ಯ: ಜಿಲ್ಲಾದ್ಯಂತ ಭಾನುವಾರ ಜಿಲ್ಲಾ ಆರೋಗ್ಯ ಇಲಾಖೆಯಿಂದ ಮೊದಲ ದಿನವೇ 1,18663 ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಲಾಗಿದೆ. ಜ.19ರಿಂದ 22ರವರೆಗೆ ಪಲ್ಸ್ ಪೋಲಿಯೋ...

ಬಲೆಯಲ್ಲಿ ಸಿಲುಕಿದ್ದ ಹೆಬ್ಬಾವು ರಕ್ಷಣೆ

ಕೆ.ಎಂ.ದೊಡ್ಡಿ: ಕೆರೆಯಲ್ಲಿ ಮೀನು ಹಿಡಿಯಲು ಹಾಕಿದ್ದ ಬಲೆಯಲ್ಲಿ ಹೆಬ್ಬಾವು ಸಿಲುಕಿ ಹಾಕಿಕೊಂಡಿದ್ದ ಹಿನ್ನೆಲೆಯಲ್ಲಿ ಮದ್ದೂರಿನ ಉರಗ ಸಂರಕ್ಷಕ ಮಾ.ನ. ಪ್ರಸನ್ನಕುಮಾರ್ ಹಾವನ್ನು ರಕ್ಷಿಸಿ...

ವೇಮನ ಒಬ್ಬ ಸಮಾಜ ಸುಧಾರಕ

ವಿಜಯಪುರ : ಜೀವನವೆಂಬ ಸಂತೆಯೊಳಗಿದ್ದುಕೊಂಡೇ ಸಂತನಾಗಿ ಬೆಳೆದ ಮಹಾಯೋಗಿ ವೇಮನ ಅವರು ಒಬ್ಬ ಸಮಾಜ ಸುಧಾರಕ ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು. ನಗರದ ಕಂದಗಲ್...

ವಿಜಯಪುರ: ರೈತರು ಮಣ್ಣನ್ನು ಪರೀಕ್ಷೆಗೊಳಪಡಿಸಿ ಅದರ ಲವತ್ತತೆಗೆ ಅನುಗುಣವಾಗಿ ಬೆಳೆ ಬೆಳೆಯಬೇಕೆಂದು ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ. ಮನಗೂಳಿ ಹೇಳಿದರು.
ನಗರದ ತೋಟಗಾರಿಕೆ ಇಲಾಖೆಯ ಬಸವ ವನದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಸಸ್ಯ ಸಂತೆ ಹಾಗೂ ತೋಟಗಾರಿಕೆ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು.
ರೈತರು ಒಂದೇ ಬೆಳೆಗೆ ಸೀಮಿತವಾಗದೇ ಮಿಶ್ರ ಬೆಳೆಗೆ ಹೆಚ್ಚು ಒತ್ತು ನೀಡಬೇಕು. ಅಕ್ಕಪಕ್ಕದ ರೈತರು ಬೆಳೆದಿದ್ದಾರೆಂದು ನಾವು ಅದೇ ಬೆಳೆ ಬೆಳೆಯೋಣವೆಂಬ ಧೋರಣೆ ಇರಬಾರದು ಎಂದು ಹೇಳಿದರು.
ದೇಶದಲ್ಲಿ ಶೇ.75 ರಷ್ಟು ಜನ ಕೃಷಿ ಚಟುವಟಿಕೆ ಇದ್ದರೂ, ದೇಶ ಆಹಾರ ಸಮಸ್ಯೆ ಎದುರಿಸುತ್ತಿದೆ. ಹೊರ ರಾಷ್ಟ್ರಗಳಲ್ಲಿ ಕೇವಲ ಶೇ.25 ರಷ್ಟು ಜನ ಮಾತ್ರ ಕೃಷಿ ಕೈಗೊಂಡಿದ್ದರೀ ಭಾರತ ಸೇರಿದಂತೆ ಇನ್ನುಳಿದ ರಾಷ್ಟ್ರಗಳಿಗೆ ಆಹಾರ ರಫ್ತು ಮಾಡುತ್ತಿವೆ. ಅಲ್ಲಿರುವ ಆಧುನಿಕ ಕೃಷಿ ಯಂತ್ರೋಪಕರಣಗಳ ಬಳಕೆ, ಬಿತ್ತನೆ ಮಾಡುವ ಪದ್ಧತಿ ಕಾರಣವಾಗಿದೆ. ಕೃಷಿಯಲ್ಲಿ ಅಭಿವೃದ್ಧಿ ಹೊಂದಿದ ರಾಷ್ಟ್ರದ ಕೃಷಿ ಪದ್ಧತಿಯನ್ನು ನಮ್ಮ ರೈತರು ಅಳವಡಿಸಿಕೊಂಡರೆ ಮುಂದೊಂದು ದಿನ ವಿಶ್ವಕ್ಕೆ ಆಹಾರ ರಫ್ತು ಮಾಡುವ ದೇಶ ನಮ್ಮದಾಗಲಿದೆ ಎಂದು ಹೇಳಿದರು.
ಸರ್ಕಾರ ರೈತರ ಅನುಕೂಲಕ್ಕಾಗಿ ರೈತ ಮಿತ್ರ, ಕೃಷಿ ವಿಕಾಸ, ಕೃಷಿ ಭಾಗ್ಯ ಯೋಜನೆ ಸೇರಿದಂತೆ ಹಲವು ಯೋಜನೆಗಳನ್ನು ಅನುಷ್ಠಾನಗೊಳಿಸಿದ್ದು, ಗ್ರಾಮಾಂತರ ಮಟ್ಟದಲ್ಲಿ ಇಲಾಖೆಯ ಕಾರ್ಯಕ್ರಮಗಳ ಮೂಲಕ ಮನೆ-ಮನೆಗೂ ಸರ್ಕಾರದ ರೈತಾಭಿವೃದ್ಧಿ ಯೋಜನೆಗಳನ್ನು ತಲುಪಿಸಬೇಕು ಹಾಗೂ ರೈತರು ಕೂಡ ಈ ಯೋಜನೆಗಳ ಸದುಪಯೋಗ ಪಡೆದುಕೊಂಡು ಆರ್ಥಿಕವಾಗಿ ಸಬಲರಾಗಬೇಕೆಂದು ಹೇಳಿದರು.
ಕಾರ್ಯಕ್ರಮದಲ್ಲಿ 2019-20ನೇ ಸಾಲಿನ ತೋಟಗಾರಿಕೆ ಇಲಾಖೆ ಅಭಿವೃದ್ಧಿ ಯೋಜನೆಗಳ ಸಮಗ್ರ ಮಾಹಿತಿಯುಳ್ಳ ಕಿರುಹೊತ್ತಿಗೆ ಬಿಡುಗಡೆಗೊಳಿಸಿದರು.
ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ, ತೋಟಗಾರಿಕೆ ಇಲಾಖೆ ಉಪನಿರ್ದೇಶಕ ಸಂತೋಷ ಇನಾಂದಾರ್ ಸೇರಿದಂತೆ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.

ರೈತರು ಆಹಾರ ಒದಗಿಸುವುದರಲ್ಲಿ ಮೇಲಸ್ತರದಲ್ಲಿದ್ದು, ಆರ್ಥಿಕ ಹಾಗೂ ಸಾಮಾಜಿಕ ರಂಗದಲ್ಲೂ ರೈತರು ಅಭಿವೃದ್ಧಿ ಹೊಂದಬೇಕು. ಆಗ ಮಾತ್ರ ದೇಶ ಅಭಿವೃದ್ಧಿ ಹೊಂದುತ್ತದೆ.
ಎಂ.ಸಿ. ಮನಗೂಳಿ, ಜಿಲ್ಲಾ ಉಸ್ತುವಾರಿ ಸಚಿವ

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...