108 ವಾಹನದಲ್ಲಿ ಹೆರಿಗೆ

ವಿಜಯಪುರ: ಹೆರಿಗೆ ನೋವಿನಿಂದ ಬಳಲುತ್ತಿದ್ದ ದೇವೂರ ಗ್ರಾಮದ ಸಂಗೀತಾ ಪವಾರ ಮಾರ್ಗ ಮಧ್ಯೆ 108 ವಾಹನದಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ.

ದೇವರಹಿಪ್ಪರಗಿಯಿಂದ ವಿಜಯಪುರ ಜಿಲ್ಲಾಸ್ಪತ್ರೆಗೆ ಆಗಮಿಸುತ್ತಿದ್ದಾಗ ನಗರದ ಗೋಳಗುಮ್ಮಟ ಬಳಿ ಹೆರಿಗೆ ನೋವು ಕಾಣಿಸಿಕೊಂಡಿದ್ದರಿಂದ 108 ಸಿಬ್ಬಂದಿ ಸುರಕ್ಷಿತವಾಗಿ ಹೆರಿಗೆ ಮಾಡಿಸಿದ್ದಾರೆ. ಸದ್ಯ ತಾಯಿ, ಮಗು ಸುರಕ್ಷಿತವಾಗಿದ್ದು, ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.