More

    ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ವಿರೋಧ

    ವಿಜಯಪುರ: ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ವಿರೋಧ ವ್ಯಕ್ತಪಡಿಸಿ ಬಹುಜನ ಸಮಾಜ ಪಾರ್ಟಿಯಿಂದ ಮಂಗಳವಾರ ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
    ಕಾರ್ಯದರ್ಶಿ ಕೆ.ಆರ್. ತೊರವಿ ಮಾತನಾಡಿ, ರಾಜ್ಯದಲ್ಲಿ ಅನೇಕ ಜ್ವಲಂತ ಸಮಸ್ಯೆಗಳು ಜನರನ್ನು ಬಾಧಿಸುತ್ತಿದ್ದರೂ ಅವುಗಳ ಪರಿಹಾರಕ್ಕೆ ಗಮನ ಕೊಡುತ್ತಿಲ್ಲ. ಅತಿವೃಷ್ಟಿಯಿಂದ ಮನೆ ಆಸ್ತಿ ಪಾಸ್ತಿಗಳನ್ನು ಕಳೆದುಕೊಂಡವರಿಗೆ ಇನ್ನೂ ಪುನರ್ವಸತಿ ಕಲ್ಪಿಸಿಲ್ಲ. ಬಗರ್‌ಹುಕುಂ ಸಾಗುವಳಿ ಸಕ್ರಮವಾಗಿಲ್ಲ. ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ತಡೆ ಹಿಡಿಯಲಾಗಿದೆ. ಕೇಂದ್ರ ಸರ್ಕಾರ ದಿನನಿತ್ಯ ಇಂಧನ ದರ ಏರಿಸುತ್ತಿರುವುದರಿಂದ ಅಗತ್ಯ ವಸ್ತುಗಳ ಬೆಲೆ ಗಗನಕ್ಕೆ ಏರಿದೆ. ಅದನ್ನು ತಡೆಯಲು ರಾಜ್ಯ ಸರ್ಕಾರದ ಬಳಿ ಯಾವುದೇ ಕಾರ್ಯಕ್ರಮವಿಲ್ಲ. ಅದನ್ನು ಬಿಟ್ಟು ಗೋಹತ್ಯೆ ನಿಷೇಧ ಕಾಯ್ದೆ ಜಾರಿ ಮಾಡಲು ಮುಂದಾಗಿರುವುದು ಸರಿಯೇ ಎಂದು ಪ್ರಶ್ನಿಸಿದರು.
    ಯಾವುದೇ ಕಾರಣಕ್ಕೂ ಗೋಹತ್ಯೆ ಕಾಯ್ದೆಯನ್ನು ಜಾರಿ ಮಾಡಬಾರದು ಎಂದು ಒತ್ತಾಯಿಸಿದರು. ಜಿಲ್ಲಾಧ್ಯಕ್ಷ ಅಕ್ಬರ್ ಮುಲ್ಲಾ, ಯಶವಂತ ಪೂಜಾರಿ, ವಲಯ ಉಸ್ತುವಾರಿ ದಸ್ತಗೀರ ಮುಲ್ಲಾ, ರಮೇಶ ಐಹೊಳಿ, ಬಸವರಾಜ ಕಾಂಬಳೆ, ಮಿಲಿಂದ ತೊರವಿ, ದೇವರಾಜ ಬನಸೋಡೆ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts