More

    ಎಐಕೆಎಸ್‌ಸಿಸಿ ನೇತೃತ್ವ ಪ್ರತಿಭಟನೆ

    ವಿಜಯಪುರ: ದೆಹಲಿಯಲ್ಲಿ ನಡೆಯುತ್ತಿರುವ ರೈತರ ನ್ಯಾಯಯುತ ಹೋರಾಟ ಹತ್ತಿಕ್ಕುತ್ತಿರುವ ಕೇಂದ್ರ ಸರ್ಕಾರದ ಧೋರಣೆ ಖಂಡಿಸಿ ಮತ್ತು ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ರೈತ ಸಂಘರ್ಷ ಸಮನ್ವಯ ಸಮಿತಿ ಪದಾಧಿಕಾರಿಗಳು ಮಂಗಳವಾರ ಜಿಲ್ಲಾಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
    ಕೇಂದ್ರ ಸರ್ಕಾರದ ರೈತ ವಿರೋಧಿ ಧೋರಣೆ ವಿರುದ್ಧ ಘೋಷಣೆ ಕೂಗಿದ ರೈತರು ಬಳಿಕ ಜಿಲ್ಲಾಡಳಿತ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

    ಕೇಂದ್ರ ಸರ್ಕಾರ ರೈತರಿಗೆ ಅನ್ಯಾಯ ಮಾಡುತ್ತಿದೆ. ದೇಶದ ಬೆನ್ನೆಲುಬಾದ ರೈತನ ಬೆನ್ನಿಗೆ ಚೂರಿ ಹಾಕುತ್ತಿದೆ. ಹೋರಾಟ ಮಾಡುವುದು ಪ್ರತಿಯೊಬ್ಬ ಭಾರತೀಯನ ಸಂವಿಧಾನಾತ್ಮಕ ಹಕ್ಕು. ಆದರೆ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಹೋರಾಟ ಸಹಿಸಿಕೊಳ್ಳಲಾಗುತ್ತಿಲ್ಲ. ಹೋರಾಟಗಾರರು ದೆಹಲಿ ಪ್ರವೇಶ ಮಾಡದಂಂತೆ ದೊಡ್ಡ ದೊಡ್ಡ ಯಂತ್ರಗಳನ್ನು ಬಳಸಿ ರಸ್ತೆಗಳನ್ನು ಅಗೆದಿದ್ದಾರೆ. ಬ್ಯಾರಿಕೇಡ್ ಅಳವಡಿಸಿ ತಡೆಯುತ್ತಿದ್ದಾರೆ. ಜಲ ಫಿರಂಗಿ ಸಿಡಿಸುತ್ತಿದ್ದಾರೆ. ಲಾಠಿ ಚಾರ್ಜ್ ಮಾಡುತ್ತಿದ್ದಾರೆ. ಹೀಗೆಲ್ಲ ಮಾಡಿ ಹೋರಾಟ ಮಾಡುವ ಹಕ್ಕು ಕಿತ್ತುಕೊಳ್ಳುವಂತಹ ಕುತಂತ್ರ ಬುದ್ಧಿ ಬಿಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
    ಉತ್ತರ ಭಾರತದ ಹಲವು ರಾಜ್ಯಗಳಿಂದ ಲಕ್ಷಾಂತರ ರೈತರು, ಮಹಿಳೆಯರು ಮಕ್ಕಳೊಂದಿಗೆ ದೆಹಲಿಗೆ ಆಗಮಿಸಿ ಕಳೆದ ಆರು ದಿನಗಳಿಂದ ಕೊರೆಯುವ ಚಳಿ ಲೆಕ್ಕಿಸದೆ ಪ್ರತಿಭಟನೆ ಮಾಡುತ್ತಿರುವುದು ಇಡೀ ದೇಶದ ರೈತರಿಗೆ ಸ್ಫೂರ್ತಿಯಾಗಿದೆ ಎಂದರು.

    ರೈತ ವಿರೋಧಿ ಕಾಯ್ದೆ

    ಸರ್ಕಾರ ತಂದಿರುವ ರೈತ ವಿರೋಧಿ ತಿದ್ದುಪಡಿ ಕಾಯ್ದೆಗಳನ್ನು ಹಿಂತೆಗೆದುಕೊಳ್ಳುವಂತೆ ಆಗ್ರಹಿಸಿ ಇಡೀ ದೇಶಾದ್ಯಂತ ರೈತರು ಹೋರಾಟ ಮಾಡುತ್ತಿದ್ದಾರೆ. ಸರ್ಕಾರ ಹೋರಾಟ ಹತ್ತಿಕ್ಕಲು ಎಲ್ಲ ರೀತಿಯ ದುರುಳ ಪ್ರಯತ್ನ ನಡೆಸಿದೆ. ಸಂಕಷ್ಟದಲ್ಲಿರುವ ರೈತರು ಹಾಗೂ ಗ್ರಾಮೀಣ ಜನತೆಗೆ ರೇಷನ್, ಕೃಷಿಗೆ ಬ್ಯಾಂಕ್ ಸಾಲ, ಬೆಂಬಲ ಬೆಲೆ, ಉದ್ಯೋಗ ಖಾತ್ರಿ ಜಾರಿ, ಇಂಧನ ದರ ನಿಯಂತ್ರಣ, ಕಷ್ಟದಲ್ಲಿರುವವರೆಗೆ ಆರ್ಥಿಕ ನೆರವು ಇತ್ಯಾದಿಗಳನ್ನು ನೀಡಬೇಕಾದ ಸಮಯದಲ್ಲಿ ರೈತ ವಿರೋಧಿ ಹಾಗೂ ಕಾರ್ಪೋರೇಟ್ ಕಂಪನಿ ಪರ ಕಾಯ್ದೆ ರೂಪಿಸಿದ್ದು ಖಂಡನೀಯ ಎಂದು ಪ್ರತಿಭಟನಾ ನಿರತರು ಆಕ್ರೋಶ ವ್ಯಕ್ತಪಡಿಸಿದರು.
    ಮುಖಂಡರಾದ ಭೀಮಶಿ ಕಲಾದಗಿ, ಬಿ.ಭಗವಾನ್ ರೆಡ್ಡಿ, ಅರವಿಂದ ಕುಲಕರ್ಣಿ, ಬಾಳು ಜೇವೂರ, ಪ್ರಕಾಶ ಕಿಲಾರೆ, ಭೀಮಸಿ ಕೊಟ್ಯಾಳ, ರಾಜಾಸಾಬ ಕೋಲಾರ, ಸುರೇಖಾ ರಜಪೂತ, ಸದಾಶಿವ ಬರಟಗಿ, ಸಿದ್ರಾಮ ಬಂಗಾರಿ, ಸಂಗಪ್ಪ ಕಪಾಳಿ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts