More

    ಲ್ಯಾಬ್‌ಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ

    ವಿಜಯಪುರ: ಅತ್ಯಾಧುನಿಕ ಸೌಕರ್ಯವುಳ್ಳ ಕರೊನಾ ರೋಗ ಪತ್ತೆಯ ಪ್ರಯೋಗಾಲಯ ಸ್ಥಾಪನೆಗೆ ಪ್ರಸ್ತಾವನೆ ಸಲ್ಲಿಸುವಂತೆ ಆರೋಗ್ಯ ಸಚಿವ ಬಿ. ಶ್ರೀರಾಮಲು ಸೂಚಿಸಿದರು.
    ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಬುಧವಾರ ಅಧಿಕಾರಿಗಳ ಸಭೆ ಬಳಿಕ ಸುದ್ದಿಗಾರರಿಗೆ ಮಾಹಿತಿ ನೀಡಿದ ಅವರು, ಜಿಲ್ಲೆಯ ಎಲ್ಲ ಶಾಸಕರು ಲ್ಯಾಬ್ ಸ್ಥಾಪಿಸುವಂತೆ ಅನೇಕ ಬಾರಿ ಒತ್ತಾಯಿಸಿದ್ದಾರೆ. ಗೋವಾ, ಮಹಾರಾಷ್ಟ್ರದ ಗಡಿ ಭಾಗದಲ್ಲಿರುವ ಕಾರಣ ಜಿಲ್ಲೆಗೊಂದು ಲ್ಯಾಬ್ ಅವಶ್ಯಕತೆ ಇದೆ. ಹೀಗಾಗಿ ಲ್ಯಾಬ್‌ಗೆ ಪ್ರಸ್ತಾವನೆ ಸಲ್ಲಿಸಬೇಕೆಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು.
    ವಿಜಯಪುರ ಜಿಲ್ಲಾ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳಲ್ಲಿ ಒಟ್ಟು 40 ವೆಂಟಿಲೇಟರ್‌ಗಳನ್ನು ಸಜ್ಜುಗೊಳಿಸಲಾಗಿದೆ, ಇನ್ನೂ ಹೆಚ್ಚುವರಿಯಾಗಿ ವೆಂಟಿಲೇಟರ್‌ಳನ್ನು ಒದಗಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಇನ್ನುಳಿದಂತೆ ಅಗತ್ಯ ಸ್ಯಾನಿಟೈಜರ್, ಥ್ರಿಬಲ್ ಲೇಯರ್ ಮಾಸ್ಕ್ ಸೇರಿದಂತೆ ವೈದ್ಯಕೀಯ ಸಿಬ್ಬಂದಿಗೆ ಅಗತ್ಯವಿರುವ ಪರಿಕರಗಳನ್ನು ವಿತರಿಸಲಾಗುವುದು ಎಂದರು.
    ಜಿಲ್ಲೆಯಲ್ಲಿ ಒಂದೇ ಒಂದು ಪಾಸಿಟಿವ್ ಪ್ರಕರಣ ದಾಖಲಾದರೂ ಜಿಲ್ಲಾ ಆಸ್ಪತ್ರೆಯನ್ನು ಕರೊನಾ ಆಸ್ಪತ್ರೆಯಾಗಿ ಪರಿವರ್ತನೆ ಮಾಡಲು ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ, ತಕ್ಷಣವೇ ಅಲ್ಲಿರುವ ರೋಗಿಗಳನ್ನು ಬೇರೆ ಆಸ್ಪತ್ರೆಗೆ ದಾಖಲಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

    ಲ್ಯಾಬ್‌ಗಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts