More

    ಎಸ್‌ಟಿ ಮೀಸಲು ಸ್ಥಾನ ಹೆಚ್ಚಿಸಲು ಆಗ್ರಹ

    ವಿಜಯಪುರ: ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಎಸ್‌ಟಿ ಸ್ಥಾನಗಳ ಮೀಸಲು ಪ್ರಮಾಣ ಹೆಚ್ಚಿಸಲು ಆಗ್ರಹಿಸಿ ಅಖಿಲ ಭಾರತೀಯ ವಾಲ್ಮೀಕಿ ಸಮಾಜ ಸೇವಾ ಸಂಘದಿಂದ ಸೋಮವಾರ ಜಿಲ್ಲಾಡಳಿತ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
    ನೇತೃತ್ವ ವಹಿಸಿದ್ದ ಸಂಘದ ಅಧ್ಯಕ್ಷ ಮಲ್ಲಿಕಾರ್ಜುನ ಬಟಗಿ ಮಾತನಾಡಿ, ಪಂಚಾಯತ್ ರಾಜ್ ವ್ಯವಸ್ಥೆ ಬಂದಾಗಿನಿಂದಲೂ ಮೀಸಲಾತಿಯಲ್ಲಿ ಆಯ್ಕೆಗೊಂಡ ವಾಲ್ಮೀಕಿ ಸಮುದಾಯಕ್ಕೆ ಜಿಲ್ಲೆಯಲ್ಲಿ ಬೆರಳೆಣಿಕೆಯಷ್ಟು ಸ್ಥಾನ ಮಾತ್ರ ಸಿಗುತ್ತಿವೆ. ಜಿಲ್ಲೆಯ 12 ತಾಲೂಕುಗಳಲ್ಲಿ ನಮ್ಮ ಸಮುದಾಯದ ಜನರಿದ್ದಾರೆ. ಆದರೆ ಮೀಸಲಾತಿ ನಿಗದಿ ಪಡಿಸುವಾಗ ನಮ್ಮ ಸಮುದಾಯವನ್ನು ಕಡೆಗಣಿಸುತ್ತಿರುವುದು ಖಂಡನೀಯ. ಜನಸಂಖ್ಯೆಗೆ ಅನುಗುಣವಾಗಿ ಎಸ್‌ಟಿ ಮೀಸಲಾತಿ ಸೌಲಭ್ಯ ಕಲ್ಪಿಸಬೇಕೆಂದು ಒತ್ತಾಯಿಸಿದರು.
    ಜಿಲ್ಲೆಯಲ್ಲಿ ಕೇವಲ ನಾಲ್ಕು ತಾಲೂಕಿನಲ್ಲಿ ಗ್ರಾಪಂಗಳಿಗೆ ಮೀಸಲಾತಿ ಸೌಲಭ್ಯ ಕಲ್ಪಿಸಲಾಗಿದೆ. ಇನ್ನುಳಿದ 8 ತಾಲೂಕುಗಳಿಗೆ ಈವರೆಗೆ ಮೀಸಲಾತಿ ಕಲ್ಪಿಸಿಲ್ಲ. ಇದರಿಂದ ವಾಲ್ಮೀಕಿ ಸಮುದಾಯಕ್ಕೆ ತುಂಬಾ ಅನ್ಯಾಯವಾಗಿದೆ. ಎಸ್‌ಟಿ ಮೀಸಲು ಸೌಲಭ್ಯದಲ್ಲಿ ತಾರತಮ್ಯ ಮಾಡದೆ 12 ತಾಲೂಕುಗಳಿಗೆ ಅಧ್ಯಕ್ಷ-ಉಪಾಧ್ಯಕ್ಷರ ಮೀಸಲಾತಿ ಸೌಲಭ್ಯವನ್ನು ಕಲ್ಪಿಸಬೇಕು. ಇಲ್ಲದೆ ಹೋದರೆ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
    ದಲಿತ ಮುಖಂಡ ಅಡಿವೆಪ್ಪ ಸಾಲಗಲ್ಲ, ಪ್ರಶಾಂತ ದಳವಾಯಿ, ಶರಣಗೌಡ ಪಾಟೀಲ, ಶಾಸಪ್ಪ ಲಿಂಗದಳ್ಳಿ, ಸದಾನಂದ ಚವ್ಹಾಣ್ ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts