More

    ಪಿ.ಸುನೀಲ್‌ಕುಮಾರ್ ಅಧಿಕಾರ ಸ್ವೀಕಾರ

    ವಿಜಯಪುರ: ಇಲ್ಲಿನ ಜಿಲ್ಲಾಧಿಕಾರಿ ಕಾರ್ಯಾಲಯದಲ್ಲಿ ನೂತನ ಜಿಲ್ಲಾಧಿಕಾರಿಯಾಗಿ ಪಿ.ಸುನೀಲ್ ಕುಮಾರ್ ಅವರು ಗುರುವಾರ ಅಧಿಕಾರ ವಹಿಸಿಕೊಂಡರು. ಅವರಿಗೆ ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಔದ್ರಾಮ ಅವರು ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು. ವೈ.ಎಸ್.ಪಾಟೀಲ ಅವರನ್ನು ಮೈಸೂರಿನ ಆಡಳಿತ ತರಬೇತಿ ಸಂಸ್ಥೆಗೆ ವರ್ಗಾವಣೆ ಮಾಡಿದ ಹಿನ್ನೆಲೆಯಲ್ಲಿ ಸುನೀಲ್ ಕುಮಾರ್ ಅವರು ಅಧಿಕಾರ ವಹಿಸಿಕೊಂಡಿದ್ದಾರೆ.
    2011ನೇ ಸಾಲಿನ ಐಎಎಸ್ ಬ್ಯಾಚ್‌ನವರಾದ ಸುನೀಲ್ ಕುಮಾರ್ ಅವರು 2002 ರಲ್ಲಿ ಆಂಧ್ರದೇಶದ ವಾರಂಗಲ್‌ನಲ್ಲಿರುವ ನ್ಯಾಷನಲ್ ಇನ್ಸ್‌ಸ್ಟ್ಟಿಟ್ಯುಟ್ ಆಫ್ ಟೆಕ್ನಾಲಜಿ ಯಲ್ಲಿ ಎಲೆಕ್ಟಿಕಲ್ ಮತ್ತು ಎಲೆಕ್ಟಾನಿಕ್ಸ್ ಇಂಜಿನಿಯರಿಂಗ್ ಮುಗಿಸಿ, ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ದಲ್ಲಿ ಸಾಫ್ಟವೇರ್ ಇಂಜಿನಿಯರ್ ಆಗಿ 2002 ರಿಂದ 2009 ರವರೆಗೆ ಸೇವೆ ಸಲ್ಲಿಸಿದ್ದಾರೆ. ಅದರಂತೆ ಅದೇ ಕಂಪನಿಯಲ್ಲಿ ಚೆನ್ನೈನಲ್ಲಿ ಮೂರು ವರ್ಷ ಹಾಗೂ ಅಮೆರಿಕದ ನ್ಯೂಜೆರ್ಸಿಯಲ್ಲಿ ನಾಲ್ಕು ವರ್ಷ ಸೇವೆ ಸಲ್ಲಿಸಿದ್ದಾರೆ.
    ನಂತರ 2011 ರಲ್ಲಿ ಐಎಎಸ್ ಪಾಸ್ ಮಾಡಿದ ಅವರು ಹಾಸನ ಜಿಲ್ಲೆಯಲ್ಲಿ ಪ್ರೊಬೇಷನರಿ ಐಎಎಸ್ ಅಧಿಕಾರಿಯಾಗಿ ಸೇವೆ ಅನುಭವ ಹೊಂದಿದ್ದಾರೆ. ಅದರಂತೆ ಹೊಸಪೇಟೆ ಉಪ ವಿಭಾಗಾಧಿಕಾರಿಗಳಾಗಿ ಒಂದು ವರ್ಷ, ಯಾದಗಿರಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾಗಿ ಏಳು ತಿಂಗಳು, ಕಲಬುರಗಿ ಮಹಾನಗರ ಪಾಲಿಕೆಯ ಆಯುಕ್ತರಾಗಿ ಎರಡು ವರ್ಷ ಮೂರು ತಿಂಗಳು ಮತ್ತು ಬೆಂಗಳೂರಿನ ಮೂರು ವಿಭಾಗಗಳಲ್ಲಿ ಸೇವೆ ಸಲ್ಲಿಸಿದ್ದಾರೆ. ಕಟ್ಟಡ ಕಾರ್ಮಿಕ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಾಹಣಾಧಿಕಾರಿಗಳಾಗಿ, ಕರ್ನಾಟಕ ಮುನ್ಸಿಪಲ್ ಡೆಟಾ ಸೆಂಟರ್‌ನ ಜಂಟಿ ನಿರ್ದೇಶಕರಾಗಿ ಮತ್ತು ಕೊಪ್ಪಳ ಜಿಲ್ಲಾಧಿಕಾರಿಯಾಗಿ ನಂತರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಒಂದು ವರ್ಷ ಹನ್ನೊಂದು ತಿಂಗಳ) ಸೇವೆ ಸಲ್ಲಿಸಿದ ಅಪಾರ ಅನುಭವ ಹೊಂದಿದ್ದು, ಇದೀಗ ವಿಜಯಪುರ ಜಿಲ್ಲಾಧಿಕಾರಿಗಳಾಗಿ ಅಧಿಕಾರ ವಹಿಸಿಕೊಂಡಿದ್ದಾರೆ.

    ಅಧಿಕಾರ ವಹಿಸಿಕೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಲ್ಲೆಯಲ್ಲಿ ತೀವ್ರಗತಿಯಲ್ಲಿ ಕೋವಿಡ್ ಸೋಂಕು ಹರಡುತ್ತಿದ್ದು, ಅಧಿಕಾರಿಗಳೊಂದಿಗೆ ಈ ಕುರಿತು ಕೂಲಂಕಶವಾಗಿ ಪರಿಶೀಲಿಸಿ ಕೋವಿಡ್ ನಿಯಂತ್ರಣಕ್ಕೆ ಪರಿಣಾಮಕಾರಿಯಾದ ಕ್ರಮಗಳನ್ನು ಕೈಗೊಳ್ಳುವುದಾಗಿ ತಿಳಿಸಿದರು. ಜಿಪಂ ಸಿಇಒ ಗೋವಿಂದರೆಡ್ಡಿ ಇತರರು ಉಪಸ್ಥಿತರಿದ್ದರು.

    ಪಿ.ಸುನೀಲ್‌ಕುಮಾರ್ ಅಧಿಕಾರ ಸ್ವೀಕಾರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts