More

    ಎಣಿಕೆ ಕೇಂದ್ರದಲ್ಲಿ ಕರೊನಾ ಮುಂಜಾಗ್ರತೆ ಅವಶ್ಯ

    ವಿಜಯಪುರ: ನೋಡಲ್ ಆರೋಗ್ಯಾಧಿಕಾರಿಗಳು, ಆಶಾಗಳು, ಎಎನ್‌ಎಂ ಹಾಗೂ ಆಂಬುಲೆನ್ಸ್ ಸಿಬ್ಬಂದಿ ಚುನಾವಣೆ ಸಂದರ್ಭ ಅಗತ್ಯ ಮುಂಜಾಗ್ರತೆ ವಹಿಸಲು ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ್ ಸೂಚಿಸಿದರು.
    ಜಿಲ್ಲಾಧಿಕಾರಿ ಕಚೇರಿಯಲ್ಲಿ ಗುರುವಾರ ಅಧಿಕಾರಿಗಳೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಸೋಂಕಿತರು ಹಾಗೂ ಮತದಾನದ ದಿನ ತಪಾಸಣೆಯಿಂದ ಕಂಡುಬಂದ ಶಂಕಿತರು ಮತಗಟ್ಟೆಗಳಿಗೆ ತೆರಳಿ ಖುದ್ದು ಮತದಾನ ಮಾಡಲು ಇಚ್ಛಿಸಿದ್ದಲ್ಲಿ ಆ ಬಗ್ಗೆ ರಿಟರ್ನಿಂಗ್ ಅಧಿಕಾರಿಗಳಿಗೆ ಲಿಖಿತ ಮನವಿ ಸಲ್ಲಿಸಬೇಕು ಎಂದರು.
    ಕೋವಿಡ್ ಕೇರ್ ಕೇಂದ್ರದ ಆರೋಗ್ಯಾಧಿಕಾರಿಗಳು ಇಂತಹವರಿಗೆ ಮತದಾನ ಮಾಡಲು ಅನುಮತಿ ನೀಡಿದ್ದಲ್ಲಿ ಆರೋಗ್ಯ ಇಲಾಖೆ ಸಿಬ್ಬಂದಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಸಂಬಂಧಪಟ್ಟ ಮತಗಟ್ಟೆಗಳಿಗೆ ಮತದಾನದ ಕೊನೆಯ ಒಂದು ಗಂಟೆಯ ಅವಧಿಯಲ್ಲಿ ಕರೊನಾ ಸೋಂಕಿತರು ಹಾಗೂ ಶಂಕಿತರನ್ನು ಕರೆತಂದು ನಂತರ ಅವರನ್ನು ಸ್ವಸ್ಥಾನಕ್ಕೆ ಮರಳಿ ಕರೆದುಕೊಂಡು ಹೋಗಬೇಕು ಎಂದರು.
    ಪ್ರತಿ ಮತಗಟ್ಟೆಗೆ ಒಬ್ಬರಂತೆ ಆಶಾ ಕಾರ್ಯಕರ್ತೆಯನ್ನು ಅಥವಾ ಆರೋಗ್ಯ ಕಾರ್ಯಕರ್ತರನ್ನು ನೇಮಿಸಿದ ಬಗ್ಗೆ ಯಾದಿಯನ್ನು ಆಯಾ ತಾಲೂಕಿನ ತಹಸೀಲ್ದಾರರಿಗೆ ಸಲ್ಲಿಸಬೇಕು. ಪ್ರತಿ ಮತಗಟ್ಟೆಗೆ ಒಬ್ಬರಂತೆ ಆಶಾ ಕಾರ್ಯಕರ್ತೆಯನ್ನು ಅಥವಾ ಆರೋಗ್ಯ ಕಾರ್ಯಕರ್ತರಿಗೆ ಗೌರವಧನ ಪಾವತಿಸಬೇಕು ಎಂದರು.
    ತಹಸೀಲ್ದಾರ್ ಮೋಹನಕುಮಾರಿ, ಆಹಾರ ಮತ್ತು ನಾಗರಿಕ ಸರಬರಾಜು ಉಪ ನಿರ್ದೇಶಕ ಮೆಕ್ಕಳಕಿ ಹಾಗೂ ಎಲ್ಲ ತಹಸೀಲ್ದಾರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts