More

    ಹಕ್ಕಿ ಜ್ವರದ ಬಗ್ಗೆ ಯಾವುದೇ ಆತಂಕವಿಲ್ಲ

    ವಿಜಯಪುರ: ಮೈಸೂರು ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಹಕ್ಕಿಜ್ವರ ಕಂಡು ಬಂದಿರುವ ಬಗ್ಗೆ ಗಮನಕ್ಕೆ ಬಂದಿದ್ದು, ಜಿಲ್ಲೆಯಲ್ಲಿ ಈವರೆಗೂ ಅಂಥ ಯಾವುದೇ ಪಾಸಿಟಿವ್ ಪ್ರಕರಣಗಳು ದಾಖಲಾಗಿಲ್ಲ. ಹೀಗಾಗಿ ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸ್ಪಷ್ಟಪಡಿಸಿದ್ದಾರೆ.

    ಬುಧವಾರ ಜಿಲ್ಲಾಡಳಿತ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಮಾತನಾಡಿರುವ ಅವರು, ಜಿಲ್ಲೆಯ ಪಶು ಸಂಗೋಪನೆ ಇಲಾಖೆಯಿಂದ ಹಕ್ಕಿಜ್ವರ ಹರಡದಂತೆ ತೀವ್ರ ಮುನ್ನೆಚ್ಚರಿಕೆ ವಹಿಸಲಾಗಿದೆ. ಪ್ರತಿ ತಿಂಗಳು ಪ್ರತಿ ತಾಲೂಕಿನಿಂದ, ಹೋಬಳಿಗಳಲ್ಲಿ ಕ್ಲೊಯಕಲ್, ತ್ರೆಕ್ರೇಯಲ್, ಸೀರಂ ಮತ್ತು ಎನ್ವಿರಾಮೆಂಟಲ್ ಮಾದರಿಗಳನ್ನು ಬೆಂಗಳೂರು ಲ್ಯಾಬ್‌ಗೆ ಕಳುಹಿಸಿ, ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಈವರೆಗೆ ಯಾವುದೇ ಪಾಸಿಟಿವ್ ಪ್ರಕರಣಗಳು ದಾಖಲಾಗದೆ ಇರುವುದರಿಂದ ಸಾರ್ವಜನಿಕರು ಮತ್ತು ಕೋಳಿ ಸಾಕಾಣಿಕೆದಾರರು ಯಾವುದೇ ಆತಂಕಕ್ಕೆ ಒಳಗಾಗಬಾರದೆಂದರು.

    ಜಿಪಂ ಸಿಇಒ ಗೋವಿಂದ ರೆಡ್ಡಿ ಮಾತನಾಡಿ, ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿಗಳ ವ್ಯಾಪ್ತಿಯಲ್ಲಿ ಕೋಳಿ ಾರ್ಮ್‌ಗಳ ಸಾಂದ್ರತೆ ಹೆಚ್ಚಾಗಿದೆ. ಜಿಲ್ಲೆಯಲ್ಲಿ ಕೋಳಿ ಸಾಗಾಣಿಕೆ ಕೈಗೊಳ್ಳುವ ಸಂದರ್ಭದಲ್ಲಿ ಹೆಚ್ಚಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದರು.

    ಪಶುಸಂಗೋಪನೆ ಇಲಾಖೆ ಉಪನಿರ್ದೇಶಕ ಡಾ. ಪ್ರಾಣೇಶ ಜಹಗೀರದಾರ ಮಾತನಾಡಿ, ಸರ್ವೇಕ್ಷಣಾ ಕಾರ್ಯವನ್ನು ಇನ್ನೂ ಹೆಚ್ಚು ಬಲಪಡಿಸುವದರೊಂದಿಗೆ ಕೋಳಿ ಕ್ಷೇತ್ರಗಳ ಮೇಲೆ ತೀವ್ರ ನಿಗಾ ಇಡಲು ಸೂಚಿಸಲಾಗಿದೆ. ಪ್ರತಿ ತಾಲೂಕಿನಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ರ‌್ಯಾಪಿಡ್ ರೆಸ್ಪಾನ್ಸ್ ಟೀಮ್ ರಚಿಸಲಾಗಿದ್ದು, ಪ್ರತಿದಿನ ವರದಿ ಪಡೆದುಕೊಳ್ಳಲು ಸಹಾಯಕ ನಿರ್ದೇಶಕರು ಜಿಲ್ಲಾ ಕೋಳಿ ಸಾಕಾಣಿಕೆ ಮತ್ತು ತರಬೇತಿ ಕೇಂದ್ರ ವಿಜಯಪುರ ಇವರನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

    ಅಪರ ಜಿಲ್ಲಾಧಿಕಾರಿ ಡಾ. ಔದ್ರಾಮ, ಹೆಚ್ಚುವರಿ ಪೊಲೀಶ್ ಅಧೀಕ್ಷಕ ಡಾ.ರಾಮ ಅರಸಿದ್ಧಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಮಹೇಂದ್ರ ಕಾಪಸೆ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts