22.5 C
Bengaluru
Sunday, January 19, 2020

ಕಿಸಾನ ಸಮ್ಮಾನ್ ಯೋಜನೆ ಅವಧಿ ವಿಸ್ತರಣೆಗೆ ಆಗ್ರಹ

Latest News

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕಾಲನಲ್ಲಿ ಲೀನವಾದ ‘ಪ್ರಳಯ’

ಅಕ್ಕಿಆಲೂರ: ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸಮೀಪದ ಮಲಗುಂದ ಗ್ರಾಮದ ಪ್ರಳಯ ಎಂಬ ಹೆಸರಿನ ಹೋರಿ ಶನಿವಾರ ಅನಾರೊಗ್ಯದಿಂದ ಅಸುನಿಗಿದ್ದು,...

ನೇತ್ರಾವತಿ ನದಿಯಲ್ಲಿ ದೋಣಿ ಮಗುಚಿ ಯುವತಿ ಸಾವು: ಐವರ ರಕ್ಷಣೆ, ಓರ್ವಳ ಸ್ಥಿತಿ ಗಂಭೀರ

ಮಂಗಳೂರು: ದೋಣಿ ದುರಂತದಲ್ಲಿ ಓರ್ವ ಯುವತಿ ನೀರುಪಾಲಾಗಿರುವ ಘಟನೆ ಭಾನುವಾರ ಸಂಜೆ ಉಳ್ಳಾಲ ಬಳಿಯ ನೇತ್ರಾವತಿ ನದಿಯಲ್ಲಿ ಸಂಭವಿಸಿದೆ. ಐವರು ಯುವತಿಯರನ್ನು ರಕ್ಷಿಸಲಾಗಿದ್ದು,...

ವಿಜಯಪುರ: ಪ್ರಧಾನ ಮಂತ್ರಿ ಕಿಸಾನ ಸಮ್ಮಾನ್ ಯೋಜನೆಗೆ ಅರ್ಜಿ ಸಲ್ಲಿಕೆ ಅವಧಿ ಮುಂದುವರಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರೈತ-ಕೃಷಿ ಕಾರ್ಮಿಕ ಸಂಘಟನೆ ಪದಾಧಿಕಾರಿಗಳು ಸೋಮವಾರ ಪ್ರತಿಭಟನೆ ನಡೆಸಿದರು.
ಜಿಲ್ಲಾಡಳಿತ ಕಚೇರಿ ಎದುರು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಘೋಷಣೆ ಕೂಗಿದ ರೈತ ಮುಖಂಡರು ಹಾಗೂ ಸಂಘಟನೆ ಪದಾಧಿಕಾರಿಗಳು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರ ಮೂಲಕ ರಾಜ್ಯ ಮತ್ತು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ರಾಜ್ಯ ಉಪಾಧ್ಯಕ್ಷ ಬಿ. ಭಗವಾನರೆಡ್ಡಿ ಮಾತನಾಡಿ, ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಪ್ರಧಾನ ಮಂತ್ರಿ ಕಿಸಾನ ಸಮ್ಮಾನ್ ಯೋಜನೆಯಡಿ ಪ್ರತಿ ವರ್ಷ ರೈತರ ಖಾತೆಗೆ 6000ರೂ. ಜಮಾ ಮಾಡಲಾಗುತ್ತಿದೆ. ಈಗಾಗಲೇ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅವಧಿ ವಿಸ್ತರಿಸಲಾಗಿದ್ದರೂ ಇನ್ನೂ ಅನೇಕರು ಹೆಸರು ನೋಂದಾಯಿಸಿಲ್ಲ. ಅವಧಿ ಮುಗಿದಿದೆ ಎಂದು ಅಧಿಕಾರಿಗಳು ಅರ್ಜಿ ಸ್ವೀಕರಿಸುತ್ತಿಲ್ಲ. ಹೀಗಾಗಿ ಯೋಜನೆ ಸದುಪಯೋಗವಾಗಲು ಇನ್ನಷ್ಟು ಅವಧಿ ವಿಸ್ತರಿಸಬೇಕು ಎಂದು ಆಗ್ರಹಿಸಿದರು.
ಭೀಕರ ಬರದ ಹಿನ್ನೆಲೆ ಅನೇಕರು ಗುಳೆ ಹೋಗಿದ್ದಾರೆ. ಇನ್ನೂ ಸ್ವಗ್ರಾಮಕ್ಕೆ ಮರಳಿಲ್ಲ. ಅವರಿಗೆಲ್ಲ ಯೋಜನೆ ಅರಿವಿಲ್ಲ. ಇದೀಗ ಮಳೆಗಾಲ ಆರಂಭಗೊಳ್ಳುತ್ತಿದ್ದು ಗುಳೆಕಾರರು ಸ್ವಗ್ರಾಮಕ್ಕೆ ಹಿಂತಿರುಗುತ್ತಿದ್ದಾರೆ. ಇನ್ಮುಂದೆ ದಾಖಲೆ ಸಂಗ್ರಹಿಸಿ ಅರ್ಜಿ ಸಲ್ಲಿಸುವ ಧಾವಂತರದಲ್ಲಿದ್ದಾರೆ. ಅವರಿಗೆಲ್ಲ ಯೋಜನೆ ತಲುಪಬೇಕೆಂದರೆ ಅವಧಿ ವಿಸ್ತರಣೆ ಅನಿವಾರ್ಯ ಎಂದು ತಿಳಿಸಿದರು.
ಜಿಲ್ಲಾ ಸಂಚಾಲಕ ಬಾಳು ಜೇವೂರ ಮಾತನಾಡಿ, ಮುಂಗಾರು ಮಳೆಯಾಗಿದ್ದರಿಂದ ಅನೇಕರು ಬಿತ್ತನೆಯತ್ತ ಚಿತ್ತ ನೆಟ್ಟಿದ್ದಾರೆ. ಸತತ ಬರದಿಂದ ಕಂಗೆಟ್ಟ ರೈತರಿಗೆ ಕಳೆದೆರೆಡು ದಿನಗಳ ಹಿಂದೆ ಸುರಿದ ಮಳೆ ಆಶಾಭಾವ ಹೆಚ್ಚಿಸಿದೆ. ಈ ಬಾರಿಯಾದರೂ ಉತ್ತಮ ಬೆಳೆ ತೆಗೆಯಬೇಕೆಂದು ಬಿತ್ತನೆಗೆ ಅಣಿಯಾಗುತ್ತಿದ್ದಾರೆ. ಆದರೆ, ಸಕಾಲಕ್ಕೆ ಬಿತ್ತನೆ ಬೀಜ ಮತ್ತು ರಸಗೊಬ್ಬರ ಸಿಗದೇ ಪರದಾಡುತ್ತಿದ್ದಾರೆ. ರೈತ ಸಂಪರ್ಕ ಕೇಂದ್ರಗಳಲ್ಲಿ ಅವಶ್ಯಕ ಬೀಜ ಮತ್ತು ರಸಗೊಬ್ಬರ ಸಿಗುತ್ತಿಲ್ಲ. ಜಿಲ್ಲಾಡಳಿತ ಕೂಡಲೇ ಸಂಬಂಧಿಸಿದ ಇಲಾಖೆಗೆ ಸೂಚಿಸುವ ಮೂಲಕ ರೈತರಿಗೆ ಬೀಜ ಹಾಗೂ ರಸಗೊಬ್ಬರ ಸಿಗುವಂತೆ ಮಾಡಬೇಕೆಂದು ಮನವಿ ಮಾಡಿದರು.
ಜಿಲ್ಲಾ ಸಮಿತಿ ಸದಸ್ಯರಾದ ತಿಪ್ಪರಾಯ ಹತ್ತರಕಿ, ಪ್ರಕಾಶ, ಶ್ರೀಶೈಲ, ಮಾದಪ್ಪ ಸೇರಿದಂತೆ ಅನೇಕರು ಭಾಗವಹಿಸಿದ್ದರು.

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...