More

    ಮೌಲಾನಾ ಅಬ್ದುಲ್ ಕಲಾಂ ಆಜಾದ್‌ರ ಕೊಡುಗೆ ಅಪಾರ

    ವಿಜಯಪುರ: ದೇಶದ ಮೊದಲ ಶಿಕ್ಷಣ ಮಂತ್ರಿಯಾಗಿದ್ದ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ ಕೊಡುಗೆ ಅಪಾರ ಎಂದು ಕಾಂಗ್ರೆಸ್ ಮುಖಂಡ ಅಬ್ದುಲ್ ಹಮೀದ್ ಮುಶ್ರೀಫ್ ಹೇಳಿದರು.
    ನಗರದ ಜಿಲ್ಲಾ ಕಾಂಗ್ರೆಸ್ ಕಾರ್ಯಾಲಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ 133ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
    ಆಜಾದ್ ಅವರು 1888ರಲ್ಲಿ ಮೆಕ್ಕಾದಲ್ಲಿ ಜನಿಸಿದರು. ಅವರು ಸ್ವಂತತ್ರ ಹೋರಾಟಗಾರರಾಗಿದ್ದರು. ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಎರಡು ಬಾರಿ ಆಯ್ಕೆಯಾಗಿದ್ದರು. ನೆಹರು ಅವರ ಸಂಪುಟದಲ್ಲಿ ಮೊದಲನೇ ಶಿಕ್ಷಣ ಮಂತ್ರಿಯಾಗಿ ಕಾರ್ಯನಿರ್ವಹಿಸಿದ್ದರು. ದೇಶಕ್ಕೆ ಅವರ ಕೊಡುಗೆ ಅಪಾರ ಎಂದರು.
    ಮುಖಂಡರಾದ ಮಹ್ಮದ ರಫೀಕ್ ಟಪಾಲ, ಚಾಂದಸಾಬ ಗಡಗಲಾವ, ಐ.ಎಂ.ಇಂಡಿಕರ, ಅಬ್ದುಲ್ ಖಾದರ, ವಸಂತ ಹೊನಮೊಡೆ, ಪರವೇಜ ಚಟ್ಟರಕಿ, ಡಿ.ಎಸ್. ಮುಲ್ಲಾ, ಶಶಿಕಾಂತ ನಾಯ್ಕಡಿ, ಎ.ಬಿ. ಮುಲ್ಲಾ, ದಾವಲಸಾಬ ಬಾಗವಾನ, ತಾಜುದ್ದೀನ್ ಖಲಿಪಾ, ಜಾಫರ್‌ಶೇಖ, ಆಶೀಫ್ ಪುಂಗಿವಾಲೆ ಮುಂತಾದವರು ಉಪಸ್ಥಿತರಿದ್ದರು.

    ಆಜಾದ್ ಶ್ರೇಷ್ಠ ಶಿಕ್ಷಣ ತಜ್ಞ

    ವಿಜಯಪುರದ ಕಾಳಿದಾಸ ಶಿಕ್ಷಣ ಸಂಸ್ಥೆಯ ಸಭಾಭವನದಲ್ಲಿ ಡಾ. ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ ಜನ್ಮ ದಿನಾಚರಣೆ ಹಾಗೂ ರಾಷ್ಟ್ರೀಯ ಶಿಕ್ಷಣ ದಿನ ಆಚರಿಸಲಾಯಿತು.
    ಈ ವೇಳೆ ಅಪ್ಪಾಸಾಬ ಯರನಾಳ ಮಾತನಾಡಿ, ಅಬ್ದುಲ್ ಕಲಾಂ ಆಜಾದ್ ಅವರು ಶ್ರೇಷ್ಠ ಶಿಕ್ಷಣ ತಜ್ಞರು ಹಾಗೂ ಸ್ವಾತಂತ್ರೃ ಹೋರಾಟಗಾರರಾಗಿದ್ದರು ಎಂದು ಸ್ಮರಿಸಿದರು.
    ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಎಂ.ಸಿ. ಮುಲ್ಲಾ, ಕಸಾಪ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಯಂಡಿಗೇರಿ, ಉಪನ್ಯಾಸಕ ಸತ್ಯಣ್ಣ ಹಡಪದ, ಯಾಜ ಕಲಾದಗಿ, ಈಶ್ವರ ಕಮ್ಮಾರ ಇನ್ನಿತರರು ಉಪಸ್ಥಿತರಿದ್ದರು.

    ರಾಷ್ಟ್ರೀಯ ಶಿಕ್ಷಣ ದಿನಾಚರಣೆ

    ವಿಜಯಪುರದ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ಆವರಣದಲ್ಲಿ ಬುಧವಾರ ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರ ಜನ್ಮ ದಿನದ ಅಂಗವಾಗಿ ರಾಷ್ಟ್ರೀಯ ಶಿಕ್ಷಣ ದಿನ ಆಚರಿಸಲಾಯಿತು.
    ಪ್ರಾಚಾರ್ಯ ಎಸ್.ಜೆ. ಗೌಡರ ಮಾತನಾಡಿ, ಮೌಲಾನಾ ಅಬ್ದುಲ್ ಕಲಾಂ ಆಜಾದ್ ಅವರು ಒಬ್ಬ ಶ್ರೇಷ್ಠ ಶಿಕ್ಷಣ ತಜ್ಞರಾಗಿದ್ದರು. ಅವರಿಗೆ ಮರಣೋತ್ತರವಾಗಿ ಭಾರತದ ಅತ್ಯುನ್ನತ ಪ್ರಶಸ್ತಿ ‘ಭಾರತ ರತ್ನ’ ಪ್ರಶಸ್ತಿಯನ್ನು ಕೊಡಲಾಗಿದೆ ಎಂದರು. ಕಾಲೇಜಿನ ವಿವಿಧ ವಿಭಾಗದ ಮುಖ್ಯಸ್ಥರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts