More

    29 ಜನ ಜಿಲ್ಲಾಸ್ಪತ್ರೆಯಿಂದ ಬಿಡುಗಡೆ

    ವಿಜಯಪುರ: ಮಹಾಮಾರಿ ಕರೊನಾದಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ಕೂಡ ಹೆಚ್ಚುತ್ತಿದ್ದು, ಸೋಮವಾರ 29 ಜನ ಜಿಲ್ಲಾಸ್ಪತ್ರೆಯಿಂದ ಬಿಡುಗಡೆ ಹೊಂದಿದರು.
    ಜಿಲ್ಲೆಯಲ್ಲಿ ಈವರೆಗೆ ಒಟ್ಟು 202 ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, 88 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದಾರೆ. ಸೋಮವಾರ ಯಾವುದೇ ಪಾಸಿಟಿವ್ ಪ್ರಕರಣಗಳು ಬಂದಿಲ್ಲ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದ್ದಾರೆ.
    ಜಿಲ್ಲೆಯಲ್ಲಿ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ 28736 ಜನರು ಬಂದ ಬಗ್ಗೆ ವರದಿಯಾಗಿದ್ದು, ಇವರ ಮೇಲೆ ತೀವ್ರ ನಿಗಾ ಇಡಲಾಗಿದೆ. 8433 ಜನರು 28 ದಿನಗಳ ಐಸೋಲೇಷನ್ ಅವಧಿ ಪೂರ್ಣಗೊಳಿಸಿದ್ದಾರೆ. 20189 ಜನರು (1 ರಿಂದ 28 ದಿನಗಳ) ರಿಪೋರ್ಟಿಂಗ್ ಅವಧಿಯಲ್ಲಿದ್ದು, ಈವರೆಗೆ ಒಟ್ಟು 6 ಜನ ಮೃತಪಟ್ಟಿದ್ದಾರೆ. ಒಟ್ಟು 108 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಈವರೆಗೆ 26358 ಜನರ ಗಂಟಲು ದ್ರವ ಮಾದರಿ ಸಂಗ್ರಹಿಸಿದ್ದು, 25730 ಜನರ ವರದಿ ನೆಗೆಟಿವ್ ಬಂದಿದೆ. ಇನ್ನೂ 426 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ ಎಂದು ಜಿಲ್ಲಾಧಿಕಾರಿ ಪಾಟೀಲ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts