More

  ರಾಷ್ಟ್ರೀಯ ಹೆಣ್ಣುಮಗುವಿನ ಸಪ್ತಾಹ ಆಚರಣೆ

  ವಿಜಯಪುರ: ಜಿಲ್ಲಾಡಳಿತ, ಜಿಪಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಶಿಶು ಅಭಿವೃದ್ಧಿ ಯೋಜನೆ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಆಶ್ರಯದಲ್ಲಿ ರಾಷ್ಟ್ರೀಯ ಹೆಣ್ಣುಮಗುವಿನ ಸಪ್ತಾಹ ಅಂಗವಾಗಿ ಹಮ್ಮಿಕೊಂಡಿದ್ದ ಬೃಹತ್ ಪ್ರಭಾತ್ ಫೇರಿ ಕಾರ್ಯಕ್ರಮವನ್ನು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ಹಾಗೂ ಜಿಲ್ಲಾ ಟಾಸ್ಕ್‌ಫೋರ್ಸ್ ಸಮಿತಿ ಸದಸ್ಯ ನ್ಯಾಯಾಧೀಶ ರವೀಂದ್ರ ಕಾರಬಾರಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.
  ನಗರದ ಸಿದ್ದೇಶ್ವರ ದೇವಸ್ಥಾನದಿಂದ ಆರಂಭವಾದ ಜಾಗೃತಿ ಜಾಥಾ ನಗರದ ಪ್ರಮುಖ ರಸ್ತೆಗಳ ಮೂಲಕ ಹಾಯ್ದು ಜಿಲ್ಲಾ ಕ್ರೀಡಾಂಗಣದಲ್ಲಿ ಕೊನೆಗೊಂಡಿತು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ನಿರ್ಮಲ ಸುರಪುರ, ಬಿಬಿಬಿಪಿ ಟಾಸ್ಕ್‌ಫೋರ್ಸ್ ಸಮಿತಿ ಜಿಲ್ಲಾ ಸದಸ್ಯ ಕಾರ್ಯದರ್ಶಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಎಸ್.ಆರ್.ಆಲಗೂರ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಅನೀಲ ಉಕ್ಕಲಿ, ನಿರೂಪಣಾಧಿಕಾರಿ ಕೆ.ಕೆ. ಚವಾಣ್, ‘ಬೇಟಿ ಬಚಾವೋ ಬೇಟಿ ಪಡಾವೋ’ ಜಿಲ್ಲಾ ನೋಡಲ್ ಅಧಿಕಾರಿ ನಿರ್ಮಲಾ ದೊಡಮನಿ, ಅಂಗನವಾಡಿ ಸಹಾಯಕಿಯರು, ಕಾರ್ಯಕರ್ತೆಯರು ಹಾಗೂ ವಿದ್ಯಾರ್ಥಿಗಳು ಜಾಥಾದಲ್ಲಿ ಪಾಲ್ಗೊಂಡಿದ್ದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts