More

    ಎಐಯುಟಿಯುಸಿ ಪ್ರತಿಭಟನೆ

    ವಿಜಯಪುರ: ದೆಹಲಿಯಲ್ಲಿ ನಡೆಯುತ್ತಿರುವ ರೈತರ ಹೋರಾಟ ಬೆಂಬಲಿಸಿ ಹಾಗೂ ಕೇಂದ್ರ ಸರ್ಕಾರದ ಕಾರ್ಪೋರೇಟ್ ಕಂಪನಿಗಳ ಪರವಾದ ಕರಾಳ ಕಾಯ್ದೆಗಳನ್ನು ವಿರೋಧಿಸಿ ಆಲ್ ಇಂಡಿಯಾ ಯುನೈಟೆಡ್ ಟ್ರೇಡ್ ಯೂನಿಯನ್ ಸೆಂಟರ್ (ಎಐಯುಟಿಯುಸಿ)ನೇತೃತ್ವ ಹಲವು ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
    ನಗರದ ಡಾ.ಬಿ.ಆರ್. ಅಂಬೇಡ್ಕರ್ ವೃತ್ತದಿಂದ ಜಿಲ್ಲಾಡಳಿತ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪದಾಧಿಕಾರಿಗಳು ಬಳಿಕ ಜಿಲ್ಲಾಡಳಿತ ಮೂಲಕ ಪ್ರಧಾನ ಮಂತ್ರಿಗೆ ಮಂಗಳವಾರ ಮನವಿ ಸಲ್ಲಿಸಿದರು.
    ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಚ್.ಟಿ.ಮಾತನಾಡಿ, ಕೃಷಿಯನ್ನು ಖಾಸಗಿ ಬೃಹತ್ ಕಂಪನಿಗಳ ನಿಯಂತ್ರಣಕ್ಕೆ ತರಲಾಗುತ್ತದೆ. ರೈತರು ಸಂಪೂರ್ಣವಾಗಿ ತಮ್ಮ ಸ್ವಾತಂತ್ರೃ ಕಳೆದುಕೊಂಡು ಕಂಪನಿಗಳ ಹಂಗಿನಲ್ಲಿ ನಡೆದಾಡುವ ಹೆಣಗಳಾಗಿ ಬಿಡುತ್ತಾರೆ. ಪಂಜಾಬ್, ಹರಿಯಾಣ, ಉತ್ತರಪ್ರದೇಶ, ರಾಜಸ್ಥಾನ, ಉತ್ತರಖಾಂಡ, ಛತ್ತೀಸಗಢ, ಮಧ್ಯಪ್ರದೇಶ ಹೀಗೆ ಹಲವು ರಾಜ್ಯಗಳ ರೈತರು ಕೇಂದ್ರ ಸರ್ಕಾರದ ಕ್ರಮ ವಿರೋಧಿಸಿ ದೆಹಲಿಯಲ್ಲಿ ತೀವ್ರ ಚಳವಳಿ ನಡೆಸಿವೆ ಎಂದರು.
    ಕಾರ್ಯದರ್ಶಿ ಸುನೀಲ ಸಿದ್ರಾಮಶೆಟ್ಟಿ ಮಾತನಾಡಿ, ಕೇಂದ್ರ ಸರ್ಕಾರ 6-7 ಸುತ್ತು ರೈತ ನಾಯಕರೊಂದಿಗೆ ಮಾತುಕತೆ ನಡೆಸಿತು. ಆದರೆ ಈ ರೈತ ವಿರೋಧಿ ಕಾಯ್ದೆಗಳನ್ನು ಕೈಬಿಡಲು ತಯಾರಿಲ್ಲ. ನಾಚಿಕೆ ಇಲ್ಲದೆ ಸತ್ಯ ಹೇಳುವ ಧೈರ್ಯವಿಲ್ಲದೆ ಅರೆಬರೆ ಅಂಶಗಳನ್ನು ಹೇಳುತ್ತ ಕೇಂದ್ರ ಸರ್ಕಾರವು ದೇಶದ ಜನತೆಯ ದಿಕ್ಕು ತಪ್ಪಿಸುವ ಕುತಂತ್ರವನ್ನು ಮಾಡುತ್ತಿದೆ ಎಂದು ಆಪಾದಿಸಿದರಲ್ಲದೆ, ಕೂಡಲೇ ಈ ಕಾಯ್ದೆಗಳನ್ನು ಹಿಂಪಡೆಯಲು ಆಗ್ರಹಿಸಿದರು.
    ಕಾಶಿಬಾಯಿ ಜನಗೊಂಡ, ಮಹಾದೇವಿ ಧರ್ಮಶೆಟ್ಟಿ, ಶಶಿಕಲಾ ಮ್ಯಾಗೇರಿ, ಲಕ್ಷ್ಮಿ ಲಕ್ಷಟ್ಟಿ, ಅಂಬಿಕಾ ಒಳಸಂಗ, ಗಂಗೂಬಾಯಿ ಉಳ್ಳಾಗಡ್ಡಿ, ಪ್ರಶಾಂತ ಮನಗೂಳಿ, ವಿಜಯಲಕ್ಷ್ಮಿ ಹುಣಶ್ಯಾಳ, ಭಾಗೀರತಿ ಬಡಿಗೇರ, ಬಸಿರಾ ಬಾಗೇವಾಡಿ, ಯಮನವ್ವ ಕೋಲಾರ, ಪರಸುರಾಮ ತಳವಾರ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts