More

    ಪರೀಕ್ಷೆ ಪಾರದರ್ಶಕವಾಗಿ ನಡೆಸಿ

    ವಿಜಯಪುರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಫೆ. 2ರಂದು ನಗರದ 10 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ತಾಂತ್ರಿಕ ಸಹಾಯಕರು ಮತ್ತು ಭದ್ರತಾ ಸಹಾಯಕ ದರ್ಜೆ-3 ರ ಪರೀಕ್ಷೆಗಳನ್ನು ಪಾರದರ್ಶಕವಾಗಿ ನಡೆಯುವಂತೆ ನೋಡಿಕೊಳ್ಳಲು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
    ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಗುರುವಾರ ಪೂರ್ವಭಾವಿ ಸಭೆ ನಡೆಸಿದ ಅವರು, ಅಂದು ಬೆಳಗ್ಗೆ 10.30 ರಿಂದ ಮಧ್ಯಾಹ್ನ 12.30 ರವರೆಗೆ ತಾಂತ್ರಿಕ ಸಹಾಯಕರ ಮತ್ತು ಮಧ್ಯಾಹ್ನ 2.30 ರಿಂದ ಸಂಜೆ 4.30 ರ ವರೆಗೆ ಭದ್ರತಾ ಸಹಾಯಕ ದರ್ಜೆ-3ರ ಪರೀಕ್ಷೆಗಳು ನಡೆಯಲಿವೆ ಎಂದರು.
    ನಕಲುಮುಕ್ತ ಹಾಗೂ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು. ಅಭ್ಯರ್ಥಿಗಳ ಭವಿಷ್ಯದ ಹಿತದೃಷ್ಟಿಯಿಂದ ಈ ಪರೀಕ್ಷೆ ಅತ್ಯಂತ ಮಹತ್ವದ್ದಾಗಿದೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ 10 ವರ್ಷಗಳಲ್ಲಿ ವಿವಿಧ ಪರೀಕ್ಷೆಗಳನ್ನು ವಿವಿಧ ರೀತಿಯಲ್ಲಿ ನಿರ್ವಹಣೆ ಆಧಾರದ ಮೇಲೆ ಇಲ್ಲಿಯ ಹೆಸರಾಂತ ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಿ ಪರೀಕ್ಷೆಗೆ ಅವಕಾಶ ಕಲ್ಪಿಸಿದೆ. ತಾಂತ್ರಿಕ ಸಹಾಯಕರ ಹುದ್ದೆಗೆ 4380 ಹಾಗೂ ಭದ್ರತಾ ಸಹಾಯಕರ ಹುದ್ದೆಗೆ 2780 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದು, ಮಕ್ಕಳ ಭವಿಷ್ಯ, ಸಮಾಜದ ಹಿತದೃಷ್ಟಿಯಿಂದ ಪರೀಕ್ಷೆಗಳು ಪಾರದರ್ಶಕವಾಗಿ ನಡೆಸಬೇಕೆಂದರು.
    ಪಪೂ ಹಾಗೂ ವೃತ್ತಿ ಶಿಕ್ಷಣ ಇಲಾಖೆ ಉಪನಿರ್ದೇಶಕ ಜೆ.ಎಸ್. ಪೂಜೇರ ಮಾತನಾಡಿ, ಪರೀಕ್ಷಾ ಕೇಂದ್ರಗಳ ಸುತ್ತಲೂ 144 ಕಲಂ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿ ಮೊಬೈಲ್, ಕ್ಯಾಲ್ಕುಲೇಟರ್, ಲಾಗ್‌ಟೇಬಲ್ ನಿಷೇಧಿಸಲಾಗಿದೆ. ಸಿಇಟಿ ಮಾದರಿಯಲ್ಲಿ ಈ ಪರೀಕ್ಷೆ ನಡೆಯಲಿದ್ದು ಕೊಠಡಿ ಮೇಲ್ವಿಚಾರಕರು ಪ್ರಶ್ನೆ ಪತ್ರಿಕೆ ಮತ್ತು ಉತ್ತರ ಪತ್ರಿಕೆಗಳನ್ನು ಅತ್ಯುತ್ತಮ ರೀತಿಯಲ್ಲಿ ನಿರ್ವಹಿಸಬೇಕು. ಪರೀಕ್ಷಾ ಕೇಂದ್ರಗಳಲ್ಲಿ ನಕಲುದಂಥ ಅಕ್ರಮ ಚಟುವಟಿಕೆ ನಡೆಯಬಾರದು. ಪರೀಕ್ಷಾ ಕೇಂದ್ರಗಳಿಗೆ ನಿಯೋಜಿತ ಅಧಿಕಾರಿ ಮತ್ತು ಅಭ್ಯರ್ಥಿಗಳು ನಿಗದಿತ ಸಮಯದಲ್ಲಿ ಹಾಜರಿರಬೇಕು. ಗೌಪ್ಯವಸ್ತು, ಉತ್ತರಪತ್ರಿಕೆ, ಒಎಂಆರ್ ಗಳನ್ನು ಭದ್ರವಾಗಿ ಇಡಲು ಕ್ರಮ ಕೈಗೊಳ್ಳಬೇಕು. ಪರೀಕ್ಷಾ ಕೇಂದ್ರಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಲಾಗುತ್ತಿದ್ದು, ಉಪಮುಖ್ಯ ಅಧಿಕ್ಷಕರನ್ನು ಹೊರತುಪಡಿಸಿ ಬೇರಾರೂ ಮೊಬೈಲ್ ಬಳಸುವಂತಿಲ್ಲ. ಪರೀಕ್ಷೆಯು ನಿಯಮಬದ್ಧವಾಗಿ ನಡೆಯುವಂತೆ ನೋಡಿಕೊಳ್ಳಬೇಕೆಂದರು.
    ವಿಜಯಪುರದ ಬಾಲಕರ ಸರ್ಕಾರಿ ಪಪೂ ಕಾಲೇಜ್, ಪಿಡಿಜೆ, ಎಸ್.ಬಿ. ಕಲಾ ಮತ್ತು ಕೆಸಿಪಿ ವಿಜ್ಞಾನ ಪಪೂ ಕಾಲೇಜ್, ಎಸ್.ಎಸ್.ಪಪೂ ಕಾಲೇಜ್, ವಿ.ಬಿ. ದರ್ಬಾರ, ಬಾಲಕಿಯರ ಸರ್ಕಾರಿ ಪಪೂ ಕಾಲೇಜ್, ಬಿಡಿಇ ಬಾಲಕಿಯರ ಪಪೂ ಕಾಲೇಜ್, ಸಿಕ್ಯಾಬ್ ಬಾಲಕಿಯರ ಪಪೂ ಕಾಲೇಜ್, ಎಸ್‌ಕೆವಿಎಂಎಸ್ ಪಪೂ ಕಾಲೇಜ್, ಬಂಜಾರಾ ಪಪೂ ಕಾಲೇಜ್‌ಗಳಲ್ಲಿ ಪರೀಕ್ಷಾ ಕೇಂದ್ರ ತೆರೆಯಲಾಗಿದೆ ಎಂದರು.
    ಉಪಮುಖ್ಯ ಅಧೀಕ್ಷಕರು, ಕಸ್ಟೋಡಿಯನ್, ಪರಿವೀಕ್ಷಕರು ( ಆಬ್ಸರ್ವರ್ಸ್‌), ವಿಶೇಷ ಜಾಗೃತ ದಳದ ಸದಸ್ಯರು ಮತ್ತು ರೂಟ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಪೂಜೇರಿ ತಿಳಿಸಿದರು. ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts