More

    ಗಣರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ನಿರ್ಧಾರ

    ವಿಜಯಪುರ: ಜಿಲ್ಲಾಡಳಿತದಿಂದ ಈ ಬಾರಿಯೂ ಜ.26 ರಂದು ಗಣರಾಜ್ಯೋತ್ಸವವನ್ನು ಅದ್ದೂರಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಯಿತು.
    ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ ನಡೆದ ಪೂರ್ವ ಸಿದ್ಧತೆ ಸಭೆಯಲ್ಲಿ ಇಂಥದ್ದೊಂದು ನಿರ್ಧಾರ ಕೈಗೊಳ್ಳಲಾಯಿತು.
    ಅಂದು ಬೆಳಗ್ಗೆ 8ಕ್ಕೆ ಶಾಲೆ-ಕಾಲೇಜ್‌ಗಳಲ್ಲಿ, ಸರ್ಕಾರಿ ಕಚೇರಿಗಳಲ್ಲಿ ಧ್ವಜಾರೋಹಣ ನೆರವೇರಿಸುವುದು. ಬಳಿಕ 8.30ಕ್ಕೆ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ನಡೆಯುವ ರಾಷ್ಟ್ರ ಧ್ವಜಾರೋಹಣ ಕಾರ್ಯಕ್ರಮಕ್ಕೆ ಆಗಮಿಸುವ ಜೊತೆಗೆ ಪೂರ್ವಭಾವಿಯಾಗಿ ಅಗತ್ಯವಿರುವ ಮೂಲ ವ್ಯವಸ್ಥೆ ಕಲ್ಪಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಡಿಸಿ ಪಾಟೀಲ ಸೂಚಿಸಿದರು. ಪೊಲೀಸ್ ಇಲಾಖೆಯಿಂದ ಸೂಕ್ತ ಅಭ್ಯಾಸದೊಂದಿಗೆ ಶಿಸ್ತುಬದ್ಧವಾದ ಪಥ ಸಂಚಲನ ಕೈಗೊಳ್ಳಬೇಕು. ಸಾರ್ವಜನಿಕ ಶಿಕ್ಷಣ ಇಲಾಖೆ, ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ ಸೇರಿದಂತೆ ವಿವಿಧ ಶಾಲೆ ಮತ್ತು ತಂಡಗಳನ್ನು ಒಳಗೊಂಡ ಕವಾಯತು ತಂಡಗಳನ್ನು ರಚಿಸಿ ಪಥ ಸಂಚಲನಕ್ಕೆ ಸಿದ್ಧತೆ ಮಾಡಿಕೊಳ್ಳಬೇಕು. ಅದರಂತೆ ಸಾಮೂಹಿಕ ಕವಾಯತು ಮತ್ತು ಸಾಮೂಹಿಕ ನೃತ್ಯ ತಂಡಗಳಿಗೆ ಪ್ರಶಸ್ತಿ ವಿತರಿಸಲು ಸೂಚಿಸಿದರು.
    ಶಿಷ್ಠಾಚಾರದಂತೆ ಅತಿಥಿಗಳನ್ನು ಆಹ್ವಾನಿಸಬೇಕು. ರಾಷ್ಟ್ರ ಮತ್ತು ಅಂತಾರಾಷ್ಟ್ರ ಮಟ್ಟದ ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಸನ್ಮಾನ, ನಗರದ ವಿವಿಧ ವೃತ್ತಗಳ ಶೃಂಗಾರ, ವಿದ್ಯುತ್ ದೀಪಗಳಿಂದ ಅಲಂಕಾರ, ನಗರ ಸ್ವಚ್ಚತೆ ಮತ್ತು ಕ್ರೀಡಾಂಗಣದ ಸ್ವಚ್ಚತೆಗೆ ಕ್ರಮ ಕೈಗೊಳ್ಳಲು ಸೂಚಿಸಿದರು.
    ಭಾರತ ಸಂವಿಧಾನದ ಪ್ರಸ್ತಾವನೆಯ ಅಂಶಗಳನ್ನು ಕಾರ್ಯಕ್ರಮ ನಿರೂಪಕರಿಂದ ಓದಿಸುವುದು ಹಾಗೂ ಕ್ರೀಡಾಂಗಣ ಸೇರಿದಂತೆ ನಗರದಲ್ಲಿ ಫ್ಲೆಕ್ಸ್ ಅಳವಡಿಸಿ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಕ್ರೀಡಾಂಗಣ ವ್ಯಾಪ್ತಿಯಲ್ಲಿ ಸೂಕ್ತ ಚಿಕಿತ್ಸೆಗಾಗಿ ಆ್ಯಂಬುಲನ್ಸ್ ವ್ಯವಸ್ಥೆ, ಅಗ್ನಿ ಶಾಮಕ ವಾಹನದ ವ್ಯವಸ್ಥೆ, ಪೊಲೀಸ್ ಬಿಗಿ ಬಂದೋ ಬಸ್ತ್, ಸಂಜೆ ರಂಗ ಮಂದಿರದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ವ್ಯವಸ್ಥೆಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಸೂಚಿಸಿ ದರು.
    ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಮಹೇಶ ಪೋದ್ದಾರ ಸ್ವಾಗತಿಸಿದರು. ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ, ಜಿಪಂ ಮುಖ್ಯ ಯೋಜನಾಧಿಕಾರಿ ನಿಂಗಪ್ಪ ಗೋಠಿ, ನಗರಾಭಿವೃದ್ಧಿ ಪ್ರಾಧಿಕಾರದ ಪ್ರಭಾರಿ ಆಯುಕ್ತ ಡಾ.ಔದ್ರಾಮ. ಉಪವಿಭಾಗಾಧಿಕಾರಿ ಸೋಮಲಿಂಗ ಗೆನ್ನೂರ, ಸಮಾಜ ಮುಖಂಡರಾದ ಶರಣು ಸಬರದ, ಭರತ ಕೋಳಿ, ಶರಣಪ್ಪ ಕಣಮೇಶ್ವರ, ಸಂಗಮೇಶ ಬದಾಮಿ, ಬಿ.ಎಚ್.ಕೋಲಾರ, ದೇವೆಂದ್ರ ಮೆರಿಕರ, ರಾಮು ಹೊಸಪೇಟೆ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts