20.4 C
Bengaluru
Sunday, January 19, 2020

ಅವಶ್ಯಕ ಅನುದಾನಕ್ಕೆ ಪ್ರಸ್ತಾವನೆ ಸಲ್ಲಿಸಿ

Latest News

ತುಂಗಭದ್ರಾ ನದಿಯಲ್ಲಿ ದಂಪತಿ ಶವ ಪತ್ತೆ

ಗುತ್ತಲ: ದಂಪತಿ ಶವಗಳು ಸಮೀಪದ ಹಾವೇರಿ- ಬಳ್ಳಾರಿ ಜಿಲ್ಲೆಗಳ ಸಂಪರ್ಕ ಸೇತುವೆ ಕಳೆಗೆ ತುಂಗಭದ್ರಾ ನದಿಯಲ್ಲಿ ಶನಿವಾರ ಬೆಳಗ್ಗೆ ಪತ್ತೆಯಾಗಿವೆ.

ಅಭಿವೃದ್ಧಿ ಕಾರ್ಯಗಳಿಗೆ ಸಹಕರಿಸಿ

ಹಾನಗಲ್ಲ: ನೌಕರರು ಸರ್ಕಾರಕ್ಕೆ ಬೇಡಿಕೆ ಇಡುವ ಜತೆಗೆ ಅಭಿವೃದ್ಧಿ ಕಾರ್ಯಗಳಿಗೂ ಪ್ರಾಮಾಣಿಕವಾಗಿ ಸಹಕರಿಸಬೇಕು. ಸರ್ಕಾರ-ನೌಕರರ ಸಂಘಟನೆ ಒಂದಾಗಿ ಶ್ರಮಿಸಬೇಕು ಎಂದು ಸರ್ಕಾರಿ ನೌಕರರ...

ಸಂಸ್ಕೃತಿ, ಪರಂಪರೆ ಬೆಳೆಸಲು ಹೋರಾಟ ಅಗತ್ಯ

ರಾಣೆಬೆನ್ನೂರ: ಧರ್ಮ-ಅಧರ್ಮ, ಪರಕೀಯರ ಆಕ್ರಮಣದಿಂದ ಹಾಗೂ ಜಾತಿ, ಭೇದ-ಭಾವ ಹೋಗಲಾಡಿಸುವುದು ಸೇರಿ ಪ್ರತಿ ಹೋರಾಟದಲ್ಲೂ ಕರ್ನಾಟಕದ ಪಾತ್ರ ಬಹುಮುಖ್ಯವಾಗಿದೆ ಎಂದು ರಾಷ್ಟ್ರೀಯ ಸ್ವಯಂ...

ಅಂಗವಿಕಲರಿಗೆ ಪ್ರಥಮ ಆದ್ಯತೆ ನೀಡಿ

ಹಾವೇರಿ: ಅಂಗವಿಕಲರಿಗೆ ಎಲ್ಲ ಯೋಜನೆಗಳಲ್ಲಿ ಪ್ರಥಮ ಆದ್ಯತೆ ನೀಡುವ ಮೂಲಕ ಅವರನ್ನು ಆರ್ಥಿಕವಾಗಿ ಸದೃಢರನ್ನಾಗಿ ಮಾಡಬೇಕು ಎಂದು ಅಂಗವಿಕಲ ವ್ಯಕ್ತಿಗಳ ಅಧಿನಿಯಮದ ಆಯುಕ್ತ...

ಆಯುಷ್ಮಾನ್ ಭಾರತಕ್ಕೆ ಅನಾರೋಗ್ಯ

ಶಂಕರ ಶರ್ಮಾ ಕುಮಟಾ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿನ ಆಯುಷ್ಮಾನ್ ಭಾರತ ಆರೋಗ್ಯ ಸೇವಾ ಕೇಂದ್ರವು ತಾಂತ್ರಿಕ ಸಮಸ್ಯೆಯಿಂದ ಬಳಲುತ್ತಿದ್ದು,...

ವಿಜಯಪುರ: ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯ ಭೂ ಒಡೆತನ ಯೋಜನೆಯಡಿ ಅವಶ್ಯಕವಿರುವ ಅನುದಾನ-ಜಮೀನು ಕುರಿತು ವಾರದಲ್ಲಿ ಸರ್ಕಾರಕ್ಕೆ ಪ್ರಸ್ತಾವನೆ ಕಳುಹಿಸಿಕೊಡಲು ಕ್ರಮ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ 2019-20ನೇ ಸಾಲಿನ ಎಸ್‌ಸಿಪಿ-ಟಿಎಸ್‌ಪಿ ಯೋಜನೆಯಡಿ ಕೇಂದ್ರ, ರಾಜ್ಯ ಹಾಗೂ ಜಿಲ್ಲಾ ವಲಯ ಕಾರ್ಯಕ್ರಮಗಳಲ್ಲಿ ನವೆಂಬರ್ ಅಂತ್ಯಕ್ಕೆ ಸಾಧಿಸಿದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಭೂ ಒಡೆತನ ಯೋಜನೆಯಡಿ ಒಟ್ಟು 40 ಕೋಟಿ ರೂ. ವೆಚ್ಚದ 226 ಎಕರೆ ಜಮೀನಿಗೆ ಸಂಬಂಧಪಟ್ಟಂತೆ ಪ್ರಸ್ತಾವನೆ ಸಲ್ಲಿಸಬೇಕಾಗಿದ್ದು, ಈ ಪೈಕಿ 100 ಎಕರೆ ಜಮೀನಿಗೆ ಮಾತ್ರ ಪ್ರಸ್ತಾವನೆ ಸಲ್ಲಿಸಲಾಗಿದೆ. ಕಾರಣ ಬಾಕಿ ಉಳಿದಿರುವ ಜಮೀನು ಸಹ ಅರ್ಹ ಲಾನುಭವಿಗಳಿಗೆ ದೊರೆಯಲು ಅನುಕೂಲವಾಗುವಂತೆ ಸರ್ಕಾರಕ್ಕೆ ತಕ್ಷಣ ಪ್ರಸ್ತಾವನೆ ಕಳುಹಿಸಿಕೊಡುವಂತೆ ಜಿಲ್ಲಾಧಿಕಾರಿ ಸೂಚಿಸಿದರು.

ಹೆಚ್ಚಿದ ಬೇಡಿಕೆ

ವಿಜಯಪುರ-ಕಲಬುರ್ಗಿ ಹಾಗೂ ರಾಯಚೂರು ಜಿಲ್ಲೆಗಳಲ್ಲಿ ಭೂ ಒಡೆತನ ಯೋಜನೆಯಡಿ ಲಾನುಭವಿಗಳಿಂದ ಬೇಡಿಕೆ ಹೆಚ್ಚಾಗಿದ್ದು, ಜಮೀನು ಕೂಡ ಇಲ್ಲಿ ಲಭ್ಯವಿರುವುದರಿಂದ ಅರ್ಹ ಲಾನುಭವಿಗಳಿಗೆ ಈ ಯೋಜನೆಯ ಲಾಭ ದೊರೆಯಲು ಅನುಕೂಲವಾಗುವಂತೆ ಪ್ರಸ್ತಾವನೆ ರೂಪಿಸಿ ಕಳುಹಿಸಬೇಕು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಲಾನುಭವಿಗಳೆಲ್ಲರೂ ಈ ಯೋಜನೆಯ ಲಾಭ ಪಡೆಯುವಂತೆ ನೋಡಿಕೊಳ್ಳಲು ಸೂಚಿಸಿದರು.

ಇಲಾಖೆವಾರು ವಿವರ

ಕೃಷ್ಣಾ ಭಾಗ್ಯ ಜಲನಿಗಮದ ವತಿಯಿಂದ ಆಲಮಟ್ಟಿ ಹಾಗೂ ರಾಂಪೂರ ವಲಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಯೋಜನೆಯಡಿ ಬೊರವೆಲ್ ಸಿಸಿ ರಸ್ತೆ, ತೆರೆದ ಬಾವಿ ಸೇರಿದಂತೆ ನಿಗದಿತ ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಯೋಜನೆ ರೂಪಿಸಿಕೊಂಡು ಜಾರಿಗೊಳಿಸಬೇಕು.
ಕೃಷಿ ಇಲಾಖೆ ಹಾಗೂ ತೋಟಗಾರಿಕೆ ಇಲಾಖೆಗಳ ವ್ಯಾಪ್ತಿಯಲ್ಲಿ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಶೇಕಡಾ ನೂರರಷ್ಟು ಪ್ರಗತಿ ಸಾಧಿಸಬೇಕು. ಲಾನುಭವಿ ಆಧಾರಿತ ಯೋಜನೆಗಳಿಗೆ ಸಂಬಂಧಪಟ್ಟಂತೆ ವಿವಿಧ ಅನುದಾನದ ಸಮಸ್ಯೆಯನ್ನು ಬಗೆಹರಿಸಿಕೊಳ್ಳುವ ಜೊತೆಗೆ ಬರುವ ಮಾರ್ಚ್ ಅಂತ್ಯದೊಳಗೆ ನಿಗದಿತ ಗುರಿ ಸಾಧಿಸಬೇಕು. ಈಗಾಗಲೇ ಮೀಸಲಿಡಲಾದ ಅನುದಾನವನ್ನು ಸಮರ್ಪಕವಾಗಿ ಬಳಸಿ ಅರ್ಹ ಲಾನುಭವಿಗಳಿಗೆ ಸೌಲಭ್ಯ ದೊರೆಯುವಂತೆ ನೋಡಿಕೊಳ್ಳಲು ಸೂಚನೆ ನೀಡಿದರು.

ಕೆಬಿಜೆಎನ್‌ಎಲ್

ಗ್ರಾಮೀಣ ಕುಡಿಯುವ ನೀರು ಸರಬರಾಜು ಯೋಜನೆಯಡಿ ಸುಮಾರು 23 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾದ ಕಾಮಗಾರಿಗಳ ಪಟ್ಟಿಯನ್ನು ಗ್ರಾಮವಾರು ಹಾಗೂ ತಾಲೂಕುವಾರು ನೀಡಬೇಕು. ಅದರಂತೆ ಕೃಷ್ಣಾ ಭಾಗ್ಯ ಜಲನಿಗಮದ ಅಧಿಕಾರಿಗಳೊಂದಿಗೆ ಸಮನ್ವಯತೆ ಸಾಧಿಸಿ ಸಮುದಾಯ ಭವನ ಸಿಸಿ ರಸ್ತೆ, ಸೇರಿದಂತೆ ಇನ್ನಿತರ ಕಾಮಗಾರಿ ಕೈಗೆತ್ತಿಕೊಳ್ಳಲು ಅವರು ಸಲಹೆ ನೀಡಿದರು.
ರೇಷ್ಮೆ ಇಲಾಖೆ ವ್ಯಾಪ್ತಿಯಲ್ಲಿ ಆರ್ಥಿಕ ಮತ್ತು ಭೌತಿಕ ಪ್ರಗತಿ ಸಾಧಿಸಬೇಕು. ವಿಶೇಷವಾಗಿ ಕಿಸಾನ್ ನರ್ಸರಿ ಯೋಜನೆಯಡಿ 15 ದಿನಗಳಲ್ಲಿ ಆರ್ಥಿಕ ಪ್ರಗತಿ ಸಾಧಿಸಿ ಲಾನುಭವಿಗಳಿಗೆ ಸೌಲಭ್ಯ ಕಲ್ಪಿಸಬೇಕು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವ್ಯಾಪ್ತಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಓದು ಕಾರ್ಯಕ್ರಮ ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಡಾ.ಬಿ.ಆರ್.ಅಂಬೇಡ್ಕರ್ ಅವರ ಜೊತೆಗೆ ಭಾರತದ ಸಂವಿಧಾನದ ಬಗ್ಗೆಯೂ ಪರಿಣಾಮಕಾರಿಯಾದ ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯಲ್ಲಿ 2015-16ರಿಂದ ಬಾಕಿ ಇರುವ ಪ್ರವಾಸಿ ಟ್ಯಾಕ್ಸಿ ಯೋಜನೆಯಡಿ ಸೌಲಭ್ಯ ಕಲ್ಪಿಸಬೇಕು. ದೇವರಾಜ ಅರಸು ನಿಗಮ, ಅಂಬೇಡ್ಕರ ಅಭಿವೃದ್ಧಿ ನಿಗಮ, ಕೃಷ್ಣಾ ಭಾಗ್ಯ ಜಲನಿಗಮ ಸೇರಿದಂತೆ ವಿವಿಧ ಇಲಾಖೆಗಳು ವಿಶೇಷವಾಗಿ ಬೋರವೆಲ್ ಕೊರೆಯಿಸುವುದಕ್ಕೆ ಸಂಬಂಧಪಟ್ಟಂತೆ ಲಾನುಭವಿಗಳ ಪುನರಾವರ್ತನೆ ಆಗದಂತೆ ನೋಡಿಕೊಳ್ಳಬೇಕು ಎಂದರು.
ಆಯುಷ್ ಇಲಾಖೆ ವ್ಯಾಪ್ತಿಯಲ್ಲಿ ಮನೆ ಮದ್ದು ಕಾರ್ಯಕ್ರಮದಡಿಯಲ್ಲಿ ನಿಗದಿತ ಆರ್ಥಿಕ ಹಾಗೂ ಭೌತಿಕ ಸಾಧನೆ ಮಾಡಬೇಕು. ಸಭೆಗೆ ಗೈರು ಹಾಜರಾಗಿರುವ ಪಂಚಾಯತ್ ರಾಜ್ ಇಂಜಿನೀಯರಿಂಗ್ ವಿಭಾಗದ ಕಾರ್ಯನಿರ್ವಾಹಕ ಅಭಿಯಂತರರಿಗೆ ಕಾರಣ ಕೇಳಿ ನೋಟಿಸ್ ಜಾರಿಗೊಳಿಸುವ ಜೊತೆಗೆ ಮುಂದಿನ ಸಭೆಯಲ್ಲಿ ಮುಖ್ಯಸ್ಥರೇ ಹಾಜರಾಗಿ ಸಾಧಿಸಿರುವ ಪ್ರಗತಿಯ ಜೊತೆಗೆ ಶೇ.100 ಅನುದಾನ ಎಸ್‌ಸಿಪಿ-ಟಿಎಸ್‌ಪಿಯಡಿ ಬಳಸಿರುವ ಬಗ್ಗೆ ಮಾಹಿತಿ ನೀಡಬೇಕು. ಅದರಂತೆ ವಿವಿಧ ನಗರ ಸ್ಥಳೀಯ ವ್ಯಾಪ್ತಿಯಲ್ಲಿ ವಿಶೇಷವಾಗಿ ಆಲಮೇಲ, ಚಡಚಣ, ಕೊಲ್ಹಾರ, ನಾತಲವಾಡ ಸೇರಿದಂತೆ ಕಡಿಮೆ ಪ್ರಗತಿ ಸಾಧಿಸಿದ ನಗರ ಸ್ಥಳೀಯ ಸಂಸ್ಥೆಗಳು, ನಿಗದಿತ ಗುರಿಗೆ ತಕ್ಕಂತೆ ಪ್ರಗತಿ ಸಾಧಿಸುವಂತೆ ಸೂಚಿಸಿದರು.
ಸಂಸದ ರಮೇಶ ಜಿಗಜಿಣಗಿ ಮಾತನಾಡಿ, 4-5 ವರ್ಷಗಳ ಹಿಂದೆ ಗಂಗಾಕಲ್ಯಾಣ ಯೋಜನೆ, ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿಯಲ್ಲಿ ಆಯ್ಕೆಯಾದ ಲಾನುಭವಿಗಳ ಬೋರವೆಲ್‌ಗಳ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಸಂಪರ್ಕಗೊಳಿಸದ ಕಾರಣ ಅವರ ಪಂಪ್‌ಸೆಟ್‌ಗಳು ಹಾಳಾಗಿ ಹಾಗೂ ಬೇರೆ ಅವರಿಗೆ ಮಾರುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.
ಜಿಪಂ ಸಿಇಒ ಗೋವಿಂದ ರೆಡ್ಡಿ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಮಹೇಶ ಪೋದ್ದಾರ ಇತರರಿದ್ದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...