More

    ಅಂಗನವಾಡಿ ಕಾರ್ಯಕರ್ತೆಯರ ಧರಣಿ

    ವಿಜಯಪುರ: 18 ತಿಂಗಳಿಂದ ಬಾಕಿ ಇರುವ ವೇತನ ಬಿಡುಗಡೆಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ರಾಜ್ಯ ಸಂಯುಕ್ತ ಅಂಗನವಾಡಿ ನೌಕರರ ಸಂಘದ ನೇತೃತ್ವದಲ್ಲಿ ಬುಧವಾರ ಜಿಲ್ಲಾ ಪಂಚಾಯಿತಿ ಎದುರು ಧರಣಿ ನಡೆಸಿದರು.
    ಧರಣಿ ಬೆಂಬಲಿಸಿದ ರೈತ ಕೃಷಿ ಕಾರ್ಮಿಕ ಸಂಘದ ಉಪಾಧ್ಯಕ್ಷ ಬಿ. ಭಗವಾನ್ ರೆಡ್ಡಿ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರಿಗೆ ಈವರೆಗೆ ನ್ಯಾಯಯುತವಾಗಿ ಸಿಗಬೇಕಾದ ಹೆಚ್ಚುವರಿ ವೇತನ ನೀಡದೆ ಇರುವ ಜಿಲ್ಲಾಡಳಿತದ ಕ್ರಮ ಖಂಡಿಸಿದರು.
    ದೇಶಾದ್ಯಂತ ಗ್ರಾಮೀಣ ಪ್ರದೇಶದಲ್ಲಿ ತಾಯಿ ಮತ್ತು ಮಗುವಿನ ಆರೋಗ್ಯ, ಆರೈಕೆ ಹಾಗೂ ಅಶಕ್ತ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸುವಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಪಾತ್ರ ಬಹುಮುಖ್ಯವಾಗಿದೆ. ಸರ್ಕಾರ ಅವರ ಸೇವೆಗೆ ತಕ್ಕ ಸೌಲಭ್ಯಗಳನ್ನು ನೀಡದೆ ಮಾಲೀಕರ ಪರ ನೀತಿಗಳನ್ನು ಜಾರಿಗೊಳಿಸುವ ಮೂಲಕ ನೌಕರರಿಗೆ ಅನ್ಯಾಯವೆಸಗುತ್ತಿದೆ ಎಂದು ಆರೋಪಿಸಿದರು.
    ಸಂಘದ ಮತ್ತು ಎಐಯುಟಿಯುಸಿ ಜಿಲ್ಲಾಧ್ಯಕ್ಷ ಮಲ್ಲಿಕಾರ್ಜುನ ಎಚ್.ಟಿ ಮಾತನಾಡಿ, ಕಾರ್ಯಕರ್ತೆಯರ ಸಮಸ್ಯೆಗಳ ಕುರಿತು ಕಳೆದ ಜೂನ್ 29 ರಂದು ಮನವಿ ಸಲ್ಲಿಸಿ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಈವರೆಗೆ ಸಮಸ್ಯೆ ಬಗೆಹರಿದಿಲ್ಲ. ಡಿಸೆಂಬರ್ ಅಂತ್ಯದೊಳಗೆ ಸಮಸ್ಯೆ ಪರಿಹರಿಸದಿದ್ದರೆ ಎಲ್ಲ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಕುಟುಂಬ ಸಮೇತ ಅಹೋರಾತ್ರಿ ಧರಣಿ ಹಮ್ಮಿಕೊಳ್ಳುವುದಾಗಿ ಎಚ್ಚರಿಸಿದರು.
    ಎಐಯುಟಿಯುಸಿ ಜಿಲ್ಲಾ ಸಮಿತಿ ಸದಸ್ಯೆ ಕಾಶೀಬಾಯಿ ಜಿ.ಟಿ., ರಾಜ್ಯ ಸಂಯುಕ್ತ ಅಕ್ಷರ ದಾಸೋಹ ಕಾರ್ಯಕರ್ತೆಯರ ಸಂಘದ ಜಿಲ್ಲಾ ಸಂಘಟನಾಕಾರರಾದ ಶಶಿಕಲಾ ಮ್ಯಾಗೇರಿ ಮತ್ತು ಗಿರಿಜಾ ಮಠಪತಿ ಮಾತನಾಡಿದರು.
    ಲಕ್ಷ್ಮಿಲಕ್ಷೆಟ್ಟಿ, ಆರ್.ಟಿ. ಕ್ಯಾಡಿ, ನಿಂಗಮ್ಮ ಮಠ, ಸಾವಿತ್ರಿ ನಾಗರತ್ತಿ, ಸವಿತಾ ತೇರದಾಳ, ರೇಣುಕಾ ಹಡಪದ, ಸರಸ್ವತಿ ಮದ್ರಕಿ, ಶಿವಮ್ಮ ಹಚಡದ, ಬೇಬಿ ಲಮಾಣಿ, ಸುವರ್ಣ ಕಾಳೆ, ಗಿರೆವ್ವ ಗುಳಬಾಳ, ಶಶಿಕಲಾ ಗುಡ್ಡದ, ಪುಷ್ಪಾ ಹೊಸಮಠ, ದಿಲ್‌ಶಾದ್ ಬಿ.ಅವಟಿ, ಭಾರತಿ ಭೀಮಪ್ಪ ಮಾದರ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts