More

    ಪರೀಕ್ಷೆ ಕೇಂದ್ರಗಳಲ್ಲಿ ನಿಗಾವಹಿಸಿ

    ವಿಜಯಪುರ: ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಪಾರದರ್ಶಕ, ನಕಲುಮುಕ್ತ ಹಾಗೂ ನ್ಯಾಯಸಮ್ಮತ ರೀತಿಯಲ್ಲಿ ನಡೆಯಬೇಕು. ಅದಕ್ಕಾಗಿ ಅಧಿಕಾರಿಗಳು ನಿಗಾವಹಿಸುವಂತೆ ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಹೇಳಿದರು.
    ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಕುರಿತ ಜಿಲ್ಲಾಮಟ್ಟದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಕೋವಿಡ್-19 ಕುರಿತು ಪರೀಕ್ಷೆ ಕೇಂದ್ರಗಳಲ್ಲಿ ಅತ್ಯಂತ ತೀವ್ರ ನಿಗಾವಹಿಸಬೇಕು. ಯಾವುದೇ ಲೋಪದೋಷಗಳಾಗದಂತೆ ಕಾರ್ಯನಿರ್ವಹಿಸಬೇಕು. ಜಿಲ್ಲೆಯಲ್ಲಿ ಒಟ್ಟು 106 ಪರೀಕ್ಷೆ ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಲಾಗುತ್ತಿದ್ದು. ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು ಎಂದು ತಿಳಿಸಿದರು.
    ಪರೀಕ್ಷೆ ಕೇಂದ್ರದಲ್ಲಿ ಸಿಆರ್‌ಪಿಸಿ 144 ಕಲಂ ಅನ್ವಯ ನಿರ್ಬಂಧಿತ ಪ್ರದೇಶದ 200 ಮೀ. ಸುತ್ತಲೂ ಜನರು, ಪಾಲಕರು ಬರದಂತೆ ನಿಷೇಧಿಸಲಾಗುವುದು. ಪರೀಕ್ಷಾ ಕೇಂದ್ರಕ್ಕೆ ನಿಯೋಜಿತ ಅಧಿಕಾರಿಗಳು, ಸಿಬ್ಬಂದಿ ಮತ್ತು ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಇನ್ನಿತರ ಯಾರೂ ಪ್ರವೇಶ ಮಾಡಕೂಡದು. ನಕಲುದಂತಹ ಅಕ್ರಮ ಚಟುವಟಿಕೆಯಲ್ಲಿ ತೊಡಗಿರುವವರನ್ನು ತಕ್ಷಣ ಬಂಧಿಸುವುದಾಗಿ ತಿಳಿಸಿದರು.
    ಪರೀಕ್ಷೆ ಅವಧಿಯಲ್ಲಿ ಮುಖ್ಯ ಮೇಲ್ವಿಚಾರಕರು ಕೀ ಪ್ಯಾಡ್ ಮೊಬೈಲ್ ಬಳಸಬೇಕು. ಅವರನ್ನು ಹೊರತುಪಡಿಸಿ ಯಾರೂ ಮೊಬೈಲ್ ಬಳಸುವಂತಿಲ್ಲ. ಪರೀಕ್ಷೆ ಬರೆಯಲಿರುವ 36, ಸಾವಿರ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ ಆಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಪರೀಕ್ಷೆಗೆ ಸರಿಯಾದ ಸಮಯದಲ್ಲಿ ತಲುಪಲು ವಿದ್ಯಾರ್ಥಿಗಳಿಗೆ ಬಸ್ ವ್ಯವಸ್ಥೆ ಒದಗಿಸಬೇಕು ಎಂದರು.

    ಮಕ್ಕಳಲ್ಲಿ ಜಾಗೃತಿ ಮೂಡಿಸಿ

    ಕೋವಿಡ್- 19 ಅಪಾಯಕಾರಿಯಾಗಿ ವಿಶ್ವಾದ್ಯಂತ ವಿಸ್ತಾರ ಹೊಂದುತ್ತಿರುವುದರಿಂದ ಅನಾವಶ್ಯಕವಾಗಿ ಹೊರಗೆ ಓಡಾಡದೆ ಸೂಕ್ತ ಜಾಗೃತಿ ವಹಿಸುವಂತೆ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು. ಮಾ.22ರಂದು ಪ್ರಧಾನಿ ಮೋದಿ ಅವರ ಸಲಹೆಯಂತೆ ಜನತಾ ಕರ್ಯ್ೂ ಎಲ್ಲರೂ ಪಾಲಿಸುವಂತೆ ಮನವಿ ಮಾಡಿದರು.

    ಜಿಪಂ ಸಿಇಒ ಗೋವಿಂದ ರೆಡ್ಡಿ ಮಾತನಾಡಿದರು. ವಿಶ್ವ ಆರೋಗ್ಯ ಸಂಸ್ಥೆ ಸರ್ವೇಕ್ಷಣಾಧಿಕಾರಿ ಮುಕುಂದ ಗಲಗಲಿ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ತರಬೇತಿ ನೀಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಸಿ.ಪ್ರಸನ್ನಕುಮಾರ, ಸರ್ಕಾರಿ ಶಿಕ್ಷಕರ ಶಿಕ್ಷಣ ಮಹಾವಿದ್ಯಾಲಯ ಪ್ರಾಂಶುಪಾಲ ರಾಜೀವ ನಾಯಕ, ನೋಡಲ್ ಅಧಿಕಾರಿಗಳು ಹಾಗೂ ಬಿಇಒ ಇತರರು ಉಪಸ್ಥಿತರಿದ್ದರು.

    ಪರೀಕ್ಷೆ ಕೇಂದ್ರಗಳಲ್ಲಿ ನಿಗಾವಹಿಸಿ
    ಪರೀಕ್ಷೆ ಕೇಂದ್ರಗಳಲ್ಲಿ ನಿಗಾವಹಿಸಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts