More

    ಬಲಿಷ್ಠ ಭಾರತ ನಿರ್ಮಾಣಕ್ಕೆ ಕ್ರೀಡೆ ಅವಶ್ಯ

    ವಿಜಯಪುರ: ಮುಂದಿನ 10 ವರ್ಷಗಳಲ್ಲಿ ಭಾರತ ವಿಶ್ವಮಟ್ಟದ ಯುವರಾಷ್ಟ್ರ ಎಂದು ಗುರುತಿಸಿಕೊಳ್ಳಲು ಇಂದಿನ ಯುವ ಜನತೆ ಕ್ರೀಡೆಯಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಪಾಲ್ಗೊಳ್ಳುವುದು ಹಾಗೂ ಫಿಟ್‌ಇಂಡಿಯಾ ಸಂಕಲ್ಪದೊಂದಿಗೆ ಸದೃಢ ರಾಷ್ಟ್ರವಾಗಬೇಕೆಂದು ರಾಷ್ಟ್ರ ಪ್ರಶಸ್ತಿ ಪುರಸ್ಕೃತರ ೆಡರೇಷನ್ ರಾಷ್ಟ್ರೀಯ ಅಧ್ಯಕ್ಷ ಡಾ. ಜಾವೀದ ಜಮಾದಾರ ಹೇಳಿದರು.
    ನಗರ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ವತಿಯಿಂದ ಬುಧವಾರ ನಡೆದ ವಿಶ್ವ ಜೂಡೋ ದಿನಾಚರಣೆ ಉದ್ಘಾಟಿಸಿ ಅವರು ಮಾತನಾಡಿದರು.
    ಬಲಿಷ್ಠ ಭಾರತ ನಿರ್ಮಾಣಕ್ಕಾಗಿ ಯುವಜನತೆಯನ್ನು ಬಲಿಷ್ಠಗೊಳಿಸುವುದು ಅಗತ್ಯ. ಇಂದಿನ ಯುವಜನರ ಶಾರೀರಿಕ ಬೆಳವಣಿಗೆ ನಿರಾಶದಾಯಕವಾಗಿರುವುದನ್ನು ತಡೆಯಲು ವಿವಿಧ ಕ್ರೀಡೆಗಳಲ್ಲಿ ಪಾಲ್ಗೊಳ್ಳಬೇಕು. ಯುವ ಜನತೆ ಹೆಚ್ಚು ಹೆಚ್ಚು ಕ್ರೀಡೆಯಲ್ಲಿ ಭಾಗವಹಿಸುವಂತೆ ಪ್ರೇರೇಪಿಸಬೇಕಾಗಿದೆ. ಅಗತ್ಯ ಮಾರ್ಗದರ್ಶನ, ಪ್ರೋತ್ಸಾಹ ಹಾಗೂ ಸೌಲಭ್ಯಗಳನ್ನು ಒದಗಿಸಬೇಕಾಗಿದೆ ಎಂದರು.
    ರಾಜ್ಯ ಯುವ ಪ್ರಶಸ್ತಿ ಪುರಸ್ಕೃತ ಬಾಬಾಸಾಹೇಬ ವಿಜಯದಾರ ಮಾತನಾಡಿ, ಕ್ರೀಡೆ ಮನಸ್ಸು, ಶರೀರ ಗಟ್ಟಿಯಾಗಿಸುವುದರ ಜತೆಗೆ ವ್ಯಕ್ತಿತ್ವ ವಿಕಸನ ಮತ್ತು ಉದ್ಯೋಗ ಒದಗಿಸುವ ತಾಣ ಎಂಬ ಮಹತ್ವವನ್ನು ಎಲ್ಲರೂ ಅರಿಯಬೇಕೆಂದರು.
    ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಎಸ್.ಜಿ. ಲೋಣಿ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂತಾರಾಷ್ಟ್ರೀಯ ಜೂಡೋಪಟು, ಏಶಿಯನ್ ಮತ್ತು ಕಾಮನ್‌ವೆಲ್ತ್ ಗೇಮ್ಸ್ ಪದಕ ವಿಜೇತೆ ಮಲಪ್ರಭಾ ಜಾಧವ, ಅಂತಾರಾಷ್ಟ್ರೀಯ ತರಬೇತುದಾರ, ದ್ರೋಣಾಚಾರ್ಯ ಪ್ರಶಸ್ತಿ ಪುರಸ್ಕೃತೆ ತ್ರಿವೇಣಿ ಎಂ.ಎನ್. ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts