More

    ಕಠಿಣ ಪರಿಶ್ರಮದಿಂದ ಯಶಸ್ಸು ಸಾಧ್ಯ

    ವಿಜಯಪುರ : ಕಷ್ಟಪಟ್ಟು ದುಡಿದರೆ ಅದೃಷ್ಟ ನಿಮ್ಮ ಮನೆಯ ಬಾಗಿಲನ್ನು ತಟ್ಟುತ್ತದೆ. ಆದ್ದರಿಂದ ವಿದ್ಯಾರ್ಥಿಗಳು ಜೀವನದಲ್ಲಿ ಯಶಸ್ಸು ಗಳಿಸಬೇಕಾದರೆ ಕಠಿಣ ಪರಿಶ್ರಮ ಪಡಬೇಕು ಎಂದು ಸಿಕ್ಯಾಬ್ ಸಂಸ್ಥೆಯ ಎಆರ್‌ಎಸ್ ಇನಾಮದಾರ ಮಹಿಳಾ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕ ಡಾ.ಮಲ್ಲಿಕಾರ್ಜುನ ಮೇತ್ರಿ ಹೇಳಿದರು.

    ನಗರದ ನವಭಾಗದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಹಮ್ಮಿಕೊಂಡಿದ್ದ 2020-21 ನೇ ಸಾಲಿನ ಸಾಂಸ್ಕೃತಿಕ, ಕ್ರೀಡೆ, ರೆಡ್‌ಕ್ರಾಸ್, ಸ್ಕೌಟ್ಸ್ ಮತ್ತು ಗೈಡ್ಸ್ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಚಟುವಟಿಕೆ ಉದ್ಘಾಟನೆ ಮತ್ತು ಬಿ.ಎ, ಬಿ.ಕಾಂ, ಬಿಬಿಎ, ಬಿ.ಎಸ್ಸಿ ಮತ್ತು ಸ್ನಾತಕೋತ್ತರ ಎಂ.ಕಾಂ ಮತ್ತು ಎಂ.ಎ ರಾಜ್ಯಶಾಸ ಪದವಿಗಳ ಪ್ರಥಮ ಸೆಮಿಸ್ಟರ್ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭದಲ್ಲಿ ಅವರು ಮಾತನಾಡಿದರು.

    ವಿದ್ಯಾರ್ಥಿಯ ಸರ್ವಾಂಗೀಣ ವ್ಯಕ್ತಿತ್ವ ವಿಕಸನಕ್ಕೆ ಪಠ್ಯೇತರ ಚಟುವಟಿಕೆ ಪೂರಕವಾಗಿವೆ. ಪಠ್ಯದ ಜತೆಗೆ ಪಠ್ಯೇತರ ಚಟುವಟಿಕೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ತಮ್ಮಲ್ಲಿರುವ ಸುಪ್ತವಾದ ಪ್ರತಿಭೆಯನ್ನು ಅಭಿವ್ಯಕ್ತಗೊಳಿಸಬೇಕು. ಪ್ರತಿಯೊಬ್ಬರ ಜೀವನದಲ್ಲಿ ಮುಂದೆ ಒಂದು ನಿರ್ದಿಷ್ಟ ಗುರಿ ಹಾಗೂ ಹಿಂದೆ ಒಬ್ಬ ಗುರು ಇರಬೇಕು. ಕಂಡ ಕನಸನ್ನು ಹಾಗೂ ಗುರಿಯ ಈಡೇರಿಕೆಯತ್ತ ಸಾಗಬೇಕು ಎಂದರು.

    ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಎ.ಡಿ.ದೇಶಪಾಂಡೆ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಯಶಸ್ಸು ಗಳಿಸಲು ವಿದ್ಯಾರ್ಥಿಗಳು ಪರಿಶ್ರಮ ಪಡಬೇಕು. ಜೀವನದಲ್ಲಿ ಕೀಳರಿಮೆ ಮತ್ತು ನಕಾರಾತ್ಮಕ ಮನೋಭಾವನೆಯನ್ನು ಹೋಗಲಾಡಿಸಿ ಗುರಿ, ಸಾಧನೆಯ ಪಥದಲ್ಲಿ ಬರುವ ಎಲ್ಲ ಸಂಕಷ್ಟಗಳನ್ನು ಸಮರ್ಥವಾಗಿ ಎದುರಿಸಬಲ್ಲೆನೆಂಬ ಛಲಗಾರಿಕೆಯನ್ನು ಬೆಳೆಸಿಕೊಳ್ಳಬೇಕು ಎಂದು ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.

    ಕಾಲೇಜಿನ ಪ್ರಾಂಶುಪಾಲ ಪ್ರೊ.ಎಸ್.ಎಸ್.ರಾಜಮಾನ್ಯ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಎಂ.ಎನ್.ದಿಂಡೂರ, ಪ್ರೊ. ಸಂತೋಷ ಕಬಾಡೆ, ಮಹದೇವಯ್ಯ, ಪ್ರೊ. ಎಸ್.ಎನ್.ಬಜಂತ್ರಿ, ಡಾ. ಎ.ಆರ್.ಜಾಧವ, ಪ್ರೊ. ಎ.ಟಿ.ಮುದಕಣ್ಣವರ, ಡಾ.ಚಂದ್ರಕಾಂತ ಬಿ., ಡಾ. ಬಿ.ಎಂ.ಕೋರಬು, ಡಾ.ಎ.ಐ.ಹಂಜಗಿ, ಡಾ.ಐ.ಎಸ್.ಶಿವಶರಣರ, ಪ್ರೊ.ಎಸ್.ಆರ್.ಕುಂಬಾರ ಇನ್ನಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts