More

    ವಿದ್ಯುತ್ ದರ ಏರಿಕೆ ಖಂಡಿಸಿ ಕರವೇ ಪ್ರತಿಭಟನೆ

    ವಿಜಯಪುರ: ವಿದ್ಯುತ್ ದರ ಏರಿಕೆ ಏರಿಕೆ ಖಂಡಿಸಿ ಕರವೇ (ನಮ್ಮ ಬಣ) ಪದಾಧಿಕಾರಿಗಳು ಶುಕ್ರವಾರ ಜಿಲ್ಲಾಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

    ಜಿಲ್ಲಾಧ್ಯಕ್ಷ ಶೇಷರಾವ ಮಾನೆ ಮಾತನಾಡಿ, ಸರ್ಕಾರದ ಬೆಲೆ ಏರಿಕೆ ನೀತಿಯಿಂದ ಜನ ಕಂಗಾಲಾಗಿದ್ದಾರೆ. ಈಗಾಗಲೇ ಅಗತ್ಯ ವಸ್ತುಗಳ ಬೆಲೆ ಸಾಕಷ್ಟು ಏರಿಕೆಯಾಗಿದೆ. ಇದೀಗ ವಿದ್ಯುತ್ ದರ ಏರಿಕೆ ಮಾಡಿದ್ದು ಗಾಯದ ಮೇಲೆ ಬರೆ ಎಳೆದಂತಾಗಿದೆ. ಸರ್ಕಾರ ಕೂಡಲೇ ಬೆಲೆ ಏರಿಕೆ ನೀತಿ ವಾಪಸ್ ಪಡೆಯಬೇಕೆಂದು ಒತ್ತಾಯಿಸಿದರು.

    ಅಡುಗೆ ಅನಿಲ ಬೆಲೆ 820 ರೂ., ಅಡುಗೆ ತೈಲದ ಬೆಲೆ ಕೆಜಿಗೆ 180 ರೂ., ಪೆಟ್ರೋಲ್ ಬೆಲೆ ಲೀಟರ್‌ಗೆ 100 ರೂ., ತೊಗರಿ ಬೇಳೆ ಬೆಲೆ ಕೆಜಿಗೆ 160 ರೂ. ಹೀಗೆ ಇನ್ನೂ ಅನೇಕ ದಿನಬಳಕೆ ಸಾಮಗ್ರಿ ಬೆಲೆ ಗಗನಕ್ಕೇರಿದೆ. ಕಳೆದ ಒಂದೂವರೆ ತಿಂಗಳಿನಿಂದ ಲಾಕ್‌ಡೌನ್ ನಿಂದಾಗಿ ಜನ ಉದ್ಯೋಗವಿಲ್ಲದೆ ತತ್ತರಿಸಿದ್ದಾರೆ. ಜೀವನ ಸಾಗಿಸುವುದೇ ದುಸ್ತರವಾಗಿದೆ. ಇಂಥ ಸಂದರ್ಭ ಬೆಲೆ ಏರಿಕೆ ಮಾಡಿರುವುದು ಸರಿಯಲ್ಲ ಎಂದರು.

    ಸರ್ಕಾರ ಸಂಕಷ್ಟದಲ್ಲಿ ಮುಳುಗಿರುವ ಜನಸಾಮಾನ್ಯರ ನೆರವಿಗೆ ಧಾವಿಸಬೇಕು. ಬದಲಾಗಿ ಬೆಲೆ ಏರಿಕೆ ಮಾಡಿ ಮತ್ತಷ್ಟು ಸಂಕಷ್ಟಕ್ಕೆ ದೂಡಿರುವುದು ಸರಿಯಲ್ಲ. ಕೂಡಲೇ ಬೆಲೆ ಏರಿಕೆ ನೀತಿ ಕೈಬಿಡದಿದ್ದರೆ ರಾಜ್ಯಾದ್ಯಂತ ಪ್ರಬಲ ಹೋರಾಟ ಹಮ್ಮಿಕೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

    ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಕೆ. ಬನ್ನಟ್ಟಿ, ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷ ಭೀಮಾಶಂಕರಯ್ಯ ವಿರಕ್ತಮಠ ಹಾಗೂ ಜಿಲ್ಲಾ ಮುಖಂಡ ಸುರೇಶ ಮಿರಜಕರ ಮತ್ತಿತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts