More

    81 ನಾಮಪತ್ರ ತಿರಸ್ಕೃತ

    ವಿಜಯಪುರ: ಜಿಲ್ಲೆಯಲ್ಲಿ ಗ್ರಾಮ ಪಂಚಾಯಿತಿ ಚುನಾವಣೆ ಅಖಾಡ ರಂಗೇರುತ್ತಿದ್ದು, ಮೊದಲ ಹಂತದ ನಾಮಪತ್ರ ಸಲ್ಲಿಕೆ ಈಗಾಗಲೇ ಮುಕ್ತಾಯಗೊಂಡಿದೆ. ಒಟ್ಟು 111 ಗ್ರಾಪಂಗಳ 2126 ಸ್ಥಾನಗಳಿಗೆ 7517 ನಾಮಪತ್ರಗಳು ಸ್ವೀಕೃತಗೊಂಡಿದ್ದು, 81 ನಾಮಪತ್ರಗಳು ತಿರಸ್ಕೃತಗೊಂಡಿವೆ. 7232 ಅಭ್ಯರ್ಥಿಗಳ ನಾಮಪತ್ರ ಕ್ರಮಬದ್ಧವಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಸುನೀಲ್ ಕುಮಾರ್ ತಿಳಿಸಿದ್ದಾರೆ.

    ನಾಮಪತ್ರ ಹಿಂಪಡೆಯಲು ಕಸರತ್ತು

    ಈಗಾಗಲೇ ಗ್ರಾಪಂ ಚುನಾವಣೆ ಅಖಾಡಕ್ಕಿಳಿದ ಅಭ್ಯರ್ಥಿಗಳು ಮನೆ ಮನೆಗೆ ತೆರಳಿ ಪ್ರಚಾರ ಮಾಡಲು ಆರಂಭಿಸಿದ್ದಾರೆ. ಇನ್ನೂ ಕೆಲವರು ತಮ್ಮ ಎದುರಾಳಿ ಅಭ್ಯರ್ಥಿಯನ್ನು ಕಣದಿಂದ ಹೊರಗುಳಿಯುವಂತೆ ಅಂಗಲಾಚುತ್ತಿದ್ದಾರೆ. ಶಾಸಕರು, ಜಿಪಂ, ತಾಪಂ ಸದಸ್ಯರು, ಹಿರಿಯ ಮುಖಂಡರ ಸಮ್ಮುಖದಲ್ಲಿ ನಾಮಪತ್ರ ಹಿಂಪಡೆಯಲು ತೆರೆಮರೆಯಲ್ಲಿ ಕಸರತ್ತು ನಡೆಸುತ್ತಿದ್ದಾರೆ. ಡಿ.14ರಂದು ಉಮೇದುವಾರಿಕೆಯನ್ನು ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ಕೆಲ ಅಭ್ಯರ್ಥಿಗಳು ಅವಿರೋಧ ಆಯ್ಕೆಗೆ ಮುಖಂಡರ ಸಭೆ ನಡೆಸುವುದು, ಪ್ರತಿಸ್ಪರ್ಧಿಗಳ ಮನವೊಲಿಕೆ ಮಾಡುವಲ್ಲಿ ನಿರತರಾಗಿದ್ದಾರೆ.

    2ನೇ ಹಂತದ ಅಖಾಡ ಶುರು

    ಜಿಲ್ಲೆಯಲ್ಲಿ ಎರಡನೇ ಹಂತದ ಗ್ರಾಪಂ ಚುನಾವಣೆಗೆ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸುತ್ತಿದ್ದಾರೆ. ಈಗಾಗಲೇ 497 ಜನರಿಂದ ನಾಮಪತ್ರ ಸಲ್ಲಿಕೆ ಆಗಿವೆ. ಇಂಡಿ ತಾಲೂಕು ವ್ಯಾಪ್ತಿಯಲ್ಲಿ 207, ಚಡಚಣ 109, ಸಿಂದಗಿ 137, ದೇವರಹಿಪ್ಪರಗಿ ಭಾಗದಲ್ಲಿ 44 ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಸಿದ್ದಾರೆ.
    ಎರಡನೇ ಹಂತದಲ್ಲಿ ನಾಲ್ಕು ತಾಲೂಕುಗಳಲ್ಲಿ 88 ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ. 1628 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಡಿ.16ರಂದು ಉಮೇದುವಾರಿಕೆ ಸಲ್ಲಿಸಲು ಕೊನೆ ದಿನವಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts