24.9 C
Bangalore
Wednesday, December 11, 2019

ಸಂಚಾರ ದಟ್ಟಣೆಗೆ ಕೊನೆಗೂ ಮುಕ್ತಿ

Latest News

ವಿಷ್ಣು‌ ಸೇನಾ‌ ಸಮಿತಿಯಿಂದ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಆಯೋಜನೆ

ಬಳ್ಳಾರಿ: ಚಿತ್ರನಟ ವಿಷ್ಣುವರ್ಧನ್ ಅವರ 10ನೇ ಪುಣ್ಯಸ್ಮರಣೆ ಹಿನ್ಮೆಲೆಯಲ್ಲಿ ವಿಷ್ಣು ಸೇನಾ ಸಮಿತಿಯಿಂದ ಡಿ.29ರಂದು ನಗರ ಹಾಗೂ ತಾಲೂಕಿನ ಕಮ್ಮರಚೇಡು ಗ್ರಾಮದಲ್ಲಿ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಡಿ.29ರಂದು...

ಮೈಸೂರಿನ ಬನುಮಯ್ಯ ಸಂಸ್ಥೆಯ ಶತಮಾನೋತ್ಸವಕ್ಕೆ ಚಾಲನೆ

ಮೈಸೂರು: ಧರ್ಮಪ್ರಕಾಶ ಡಿ.ಬನುಮಯ್ಯ ವಿದ್ಯಾಸಂಸ್ಥೆ ಶತಮಾನೋತ್ಸವ ಸಮಾರಂಭವನ್ನು ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಂತವೀರ...

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ಪೌರತ್ವ ತಿದ್ದುಪಡಿ ಮಸೂದೆ ದೇಶದ ಈಶಾನ್ಯ ಭಾಗದ ಜನರ ಮೇಲಿನ ಕ್ರಿಮಿನಲ್​ ದಾಳಿ: ರಾಹುಲ್​ ಗಾಂಧಿ ಟೀಕೆ

ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆ ಹುಟ್ಟು ಹಾಕಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಟ್ವೀಟ್​ ಮೂಲಕ ಟೀಕಿಸಿದ್ದು, ದೇಶದ...

ವಿಜಯಪುರ: ಸಂಚಾರ ದಟ್ಟಣೆ, ಸಾರ್ವಜನಿಕರಿಗೆ ಕಿರಿಕಿಯಾಗುತ್ತಿದ್ದ ಕಿರಾಣಿ ಬಜಾರ್ ಕೊನೆಗೂ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ಪ್ರದೇಶಕ್ಕೆ ಸ್ಥಳಾಂತರಗೊಂಡಿದ್ದು, ನೂತನ ಕಿರಾಣಿ ಸಗಟು ವ್ಯಾಪಾರ ಮಾರುಕಟ್ಟೆಯನ್ನು ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಸೋಮವಾರ ಉದ್ಘಾಟಿಸಿದರು.

ನಂತರ ಮಾತನಾಡಿದ ಅವರು, ನಗರದ ಕಿರಾಣಿ ಬಜಾರ್‌ನಲ್ಲಿ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಮಾಡುತ್ತಿದ್ದರಿಂದ ಸಂಚಾರಕ್ಕೆ ತೀವ್ರ ತೊಂದರೆ ಆಗುತ್ತಿತ್ತು. ಅದನ್ನು ಅರಿತ ಪೊಲೀಸ್ ಇಲಾಖೆ ಬೆಳಗ್ಗೆ 8 ರಿಂದ ರಾತ್ರಿ 10ರ ವರೆಗೆ ಭಾರಿ ವಾಹನಗಳ ಲೋಡಿಂಗ್ ಮತ್ತು ಅನ್‌ಲೋಡಿಂಗ್ ಅನ್ನು ನಿಷೇಧಿಸಿತ್ತು. ಇದೀಗ ಶಾಶ್ವತ ಪರಿಹಾರ ಕಂಡುಕೊಳ್ಳುವ ಉದ್ದೇಶದಿಂದ ಸಗಟು ವ್ಯವಹಾರವನ್ನು ಸಂಪೂರ್ಣವಾಗಿ ಕೆಐಎಡಿಬಿಗೆ ಸ್ಥಳಾಂತರಿಸಿರುವುದರಿಂದ ಸುಗಮ ಸಂಚಾರಕ್ಕೆ ಅನುಕೂಲವಾಗಿದೆ. ಸಗಟು ವ್ಯವಹಾರವನ್ನು ಕೆಐಎಡಿಬಿ ಪ್ರದೇಶದಲ್ಲಿ ನಡೆಸಲು ನಗರದಿಂದ ಸಂಚರಿಸಲು ಹೆಚ್ಚಿನ ಬಸ್ ಸೌಕರ್ಯ ಮತ್ತು ರಕ್ಷಣೆ ಒದಗಿಸಲಾಗಿದೆ ಎಂದರು.

ತಪ್ಪಿದ ಸಂಚಾರ ದಟ್ಟಣೆ ಕಿರಿಕಿರಿ
ನಿತ್ಯ ಕಿರಾಣಿ ಬಜಾರ್‌ನಲ್ಲಿ 200 ರಿಂದ 300 ವಾಹನಗಳ ಲೋಡಿಂಗ್ ಮತ್ತು ಅನ್‌ಲೋಡಿಂಗ್ ನಡೆಯುತ್ತಿದ್ದವು. ರಸ್ತೆ ಚಿಕ್ಕದಾಗಿರುವುದರಿಂದ ರಸ್ತೆ ಮಧ್ಯೆ ವಾಹನಗಳು ನಿಲ್ಲುವುದು ಅನಿವಾರ್ಯವಾಗಿತ್ತು. ಅದರಿಂದ ಸಂಚಾರ ದಟ್ಟಣೆಗೆ ಕಾರಣವಾಗುತ್ತಿತ್ತು. ಈ ಸಮಸ್ಯೆ ನಿವಾರಣೆಗಾಗಿ ಕೆಐಎಡಿಬಿ ಪ್ರದೇಶದಲ್ಲಿ ನಿರ್ಮಾಣಗೊಂಡಿರುವ ಗೋದಾಮುಗಳಲ್ಲಿ ಸಗಟು ವ್ಯವಹಾರ ನಡೆಸಲು ಪೊಲೀಸ್ ಇಲಾಖೆ ಸೂಚಿಸಿತ್ತು. ಸದ್ಯ ನಗರದಲ್ಲಿರುವ ಕಿರಾಣಿ ಬಜಾರ್‌ನಲ್ಲಿನ ಅಂಗಡಿಗಳಲ್ಲಿ ಎಂದಿನಂತೆ ವ್ಯಾಪಾರ ಮಾಡಬಹುದು. ಆದರೆ, ಲೋಡ್ ಅಥವಾ ಅನ್‌ಲೋಡ್ ಮಾಡಲು ಅವಕಾಶವಿಲ್ಲ. ಸಾರ್ವಜನಿಕರ ಹಿತದೃಷ್ಟಿಯಿಂದ ಆಟೊಗಳ ಓಡಾಟಕ್ಕೆ ಮಾತ್ರ ಅವಕಾಶ ಮಾಡಿಕೊಡಲಾಗಿದೆ ಎಂದು ಶಾಸಕ ಯತ್ನಾಳ ತಿಳಿಸಿದರು.

ಜ್ಞಾನಯೋಗಾಶ್ರಮದ ಬಸವಲಿಂಗ ಸ್ವಾಮೀಜಿ, ಸಂಸದ ರಮೇಶ ಜಿಗಜಿಣಗಿ, ಎಂಎಲ್‌ಸಿ ಅರುಣ ಶಹಾಪುರ, ಶಾಸಕ ದೇವಾನಂದ ಚವಾಣ್, ಕಿರಾಣಿ ಬಜಾರ್ ಸಂಘಟನೆ ಅಧ್ಯಕ್ಷ ಡಿ.ಎಸ್.ಗುಡ್ಡೋಡಗಿ, ಮಾರುಕಟ್ಟೆಯ ವ್ಯಾಪಾರಸ್ಥರು, ರೈತರು ಹಾಗೂ ನಗರದ ಸಾರ್ವಜನಿಕರು ಪಾಲ್ಗೊಂಡಿದ್ದರು.

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...