More

    ಶಿರಸಿ ಅರಣ್ಯ ಮಹಾವಿದ್ಯಾಲಯಕ್ಕೆ ವೀರಾಗ್ರಣಿ ಪ್ರಶಸ್ತಿ

    ವಿಜಯಪುರ: ನಗರದ ಹೊರವಲಯದಲ್ಲಿರುವ ಹಿಟ್ನಳ್ಳಿ ಕೃಷಿ ಮಹಾವಿದ್ಯಾಲಯದ ಆವರಣದಲ್ಲಿ ಎರಡು ದಿನಗಳ ಕಾಲ ನಡೆದ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಅಂತರ್ ಕೃಷಿ ಮಹಾವಿದ್ಯಾಲಯಗಳ 31ನೇ ಅಥ್ಲೆಟಿಕ್ಸ್ ಕ್ರೀಡಾಕೂಟದಲ್ಲಿ ಶಿರಸಿ ಅರಣ್ಯ ಮಹಾವಿದ್ಯಾಲಯ ತಂಡ ವೀರಾಗ್ರಣಿ ಪ್ರಶಸ್ತಿ ಮುಡಿಗೇರಿಸಿಕೊಂಡಿತು.

    ಪಂದ್ಯ ಆರಂಭದಿಂದಲೂ ವಿವಿಧ ಸ್ಪರ್ಧೆಯಲ್ಲಿ ಶಿರಸಿ ಅರಣ್ಯ ಮಹಾವಿದ್ಯಾಲಯವು ಸಂಘಟನಾತ್ಮಕ ಸ್ಪರ್ಧೆ ಮೂಲಕ 71 ಅಂಕ ಪಡೆದು ಚಾಂಪಿಯನ್ ಆಗಿ ಹೊರಹೊಮ್ಮಿತು. ಇನ್ನು ವಿಜಯಪುರ ಕೃಷಿ ಮಹಾವಿದ್ಯಾಲಯ ತಂಡ 34 ಅಂಕ ಗಳಿಸಿ ರನ್ನರ್ ಅಪ್‌ಗೆ ತೃಪ್ತಿ ಪಡೆದುಕೊಂಡಿತು. ಮಹಿಳಾ ವಿಭಾಗದಲ್ಲಿ ವಿಜಯಪುರ ಕೃಷಿ ಮಹಾವಿದ್ಯಾಲಯ ತಂಡ 57 ಅಂಕ ಗಳಿಸಿ ಚಾಂಪಿಯನ್ ಎನಿಸಿಕೊಂಡರೆ, 41 ಅಂಕ ಪಡೆದ ಧಾರವಾಡ ಕೃಷಿ ಮಾರುಕಟ್ಟೆ ಮಹಾವಿದ್ಯಾಲಯ ತಂಡ ರನ್ನರ್ ಅಪ್ ಆಯಿತು.

    ಕ್ರೀಡಾಕೂಟದಲ್ಲಿ 100 ಮೀ., 200 ಮೀ., 400 ಮೀ., 800 ಮೀ., ಹಾಗೂ 1500 ಮೀಟರ್ ಓಟದ ಸ್ಪರ್ಧೆ, ಎತ್ತರ ಜಿಗಿತ, ಉದ್ದ ಜಿಗಿತ, 4*100 ರಿಲೇ, ಚಕ್ರ ಎಸೆತ, ಗುಂಡು ಎಸೆತ, ಭಲ್ಲೆ ಎಸೆತ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

    ಡಿವೈಎಸ್‌ಪಿ ಕೆ.ಸಿ.ಲಕ್ಷ್ಮೀ ನಾರಾಯಣ, ಕೃಷಿ ಮಹಾವಿದ್ಯಾಲಯದ ಡೀನ್ ಡಾ.ಎಸ್.ಬಿ. ಕಲಘಟಗಿ, ಧಾರವಾಡ ಕೃಷಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಕಲ್ಯಾಣ ವಿಭಾಗದ ನಿರ್ದೇಶಕ ಡಾ.ಎ.ಎಸ್. ವಸದ, ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಷನ್ ಕಾರ್ಯದರ್ಶಿ ಬಂಡೆಪ್ಪ ತೇಲಿ, ದೈಹಿಕ ಶಿಕ್ಷಣ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ. ಎಸ್.ಬಿ. ನಂದಾರ ಇತರರು ಉಪಸ್ಥಿತರಿದ್ದರು.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts