More

  ಸಂವಿಧಾನ ರಚನೆಯಲ್ಲಿ ಮಹಿಳೆಯರ ಕೊಡುಗೆ ಇದೆ

  ವಿಜಯಪುರ : ಭಾರತ ಅತ್ಯಂತ ವಿಶಿಷ್ಟ ಮತ್ತು ಬೃಹತ್ತಾದ ಸಂವಿಧಾನ ಹೊಂದಿದ ದೇಶ. ಅಂತಹ ಸಂವಿಧಾನವನ್ನು ರಚಿಸುವಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪಾತ್ರ ಬಹುಮುಖ್ಯವಾದದು ಎಂದು ಅಕ್ಕಮಹಾದೇವಿ ಮಹಿಳಾ ವಿವಿ ಉಪ ಕುಲಪತಿ ಪ್ರೊ.ಸಬಿಹಾ ಭೂಮಿಗೌಡ ಹೇಳಿದರು.

  ನಗರದ ಹೊರವಲಯದಲ್ಲಿರುವ ಅಕ್ಕಮಹಾದೇವಿ ವಿವಿಯ ಜ್ಞಾನಶಕ್ತಿ ಆವರಣದಲ್ಲಿ ಭಾನುವಾರ ನಡೆದ 71ನೇ ಗಣರಾಜ್ಯೋತ್ಸವದಲ್ಲಿ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.

  ದೇಶದ ಜನರು ನ್ಯಾಯ, ಸ್ವಾತಂತ್ರ್ಯ, ಸಮಾನತೆಯಿಂದ ಬದುಕಲು ಸಂವಿಧಾನ ಒಂದು ಅಡಿಪಾಯ. ಸಂವಿಧಾನ ರಚನೆಯಲ್ಲಿ ಮಹಿಳೆಯರೂ ಕೂಡ ಬಹುದೊಡ್ಡ ಕೊಡುಗೆ ನೀಡಿದ್ದು , ಸಂವಿಧಾನ ರಚನಾ ಕಾರ್ಯದಲ್ಲಿ ಅತ್ಯಂತ ಸಕ್ರಿಯವಾಗಿ ತೊಡಗಿಕೊಂಡು ತಮ್ಮದೇ ಆದ ಪಾತ್ರ ನಿರ್ವಹಿಸಿದ್ದನ್ನು ಅಲ್ಲಗಳೆಯುವಂತಿಲ್ಲ. ಅಮ್ಮು ಸ್ವಾಮಿನಾಥನ್, ದಾಕ್ಷಾಯಣಿ ವಿ., ಬೇಗಂ ಅಝಿಜ, ದುರ್ಗಾಬಾಯಿ ದೇಶಮುಖ, ಹಂಸಾ ಜೀವರಾಜ್ ಮೆಹ್ತಾ, ಕಮಲಾ ಚೌದ್ರಿ, ಲೀಲಾ ರಾಯ್, ಮಾಲತಿ ಚೌಧರಿ, ಪೂರ್ಣಿಮಾ ಬ್ಯಾನರ್ಜಿ, ರಾಜಕುಮಾರಿ ಅಮೃತ ಕೌರ್, ರೇಣುಕಾ ರೇ, ಸರೋಜಿನಿ ನಾಯ್ಡು, ಸುಚೇತಾ ಕೃಪಲಾನಿ, ವಿಜಯಲಕ್ಷ್ಮೀ ಪಂಡಿತ್, ಆಯನಿ ಮಾಸ್ಕರಿನ್ ಅವರಂತಹ ಪ್ರತಿಭಾವಂತ ಮಹಿಳೆಯರು ಸಂವಿಧಾನ ರಚನೆಯಲ್ಲಿ ತೊಡಗಿಕೊಂಡಿದ್ದರು ಎಂದು ಸ್ಮರಿಸಿದರು.

  ವಿವಿ ಕುಲಸಚಿವ (ಮೌಲ್ಯಮಾಪನ) ಪ್ರೊ.ಪಿ.ಜಿ.ತಡಸದ, ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕಿ ಡಾ.ಜ್ಯೋತಿ ಉಪಾಧ್ಯೆ ಉಪಸ್ಥಿತರಿದ್ದರು. ಶಿಕ್ಷಣ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಭಾರತಿ ಗಾಣಿಗೇರ ಕಾರ್ಯಕ್ರಮ ನಿರ್ವಹಿಸಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts