More

    ರಾಷ್ಟ್ರೀಯ ವಿಜ್ಞಾನ ದಿನಾಚಾರಣೆ

    ವಿಜಯಪುರ: ನಗರದ ಹೊರವಲಯ ಇಟ್ಟಂಗಿಹಾಳದ ಎಕ್ಸಲಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಶುಕ್ರವಾರ ರಾಷ್ಟ್ರೀಯ ವಿಜ್ಞಾನ ದಿನವನ್ನು ಸಡಗರದಿಂದ ಆಚರಿಸಲಾಯಿತು.
    ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಶಿವಾನಂದ ಕೆಲೂರ, ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವನೆ, ಸೃಜನಶೀಲತೆ ಹಾಗೂ ಹೊಸ ಹೊಸ ವಿಷಯಗಳನ್ನು ವೈಜ್ಞಾನಿಕ ದೃಷ್ಟಿಕೊನದಿಂದ ನೋಡಬೇಕೆಂದರು. ಪ್ರತಿ ಕ್ಷೇತ್ರದಲ್ಲಿಯೂ ವಿಜ್ಞಾನದ ಅವಶ್ಯಕತೆ ಇದೆ. ವಿಶೇಷವಾಗಿ ಕೃಷಿ, ಖಗೋಳ ಹಾಗೂ ರಕ್ಷಣೆಯಲ್ಲಿ ವಿಜ್ಞಾನ ಮುಂದುವರಿದಿದೆ ಎಂದರು.

    ಜಿಲ್ಲಾ ಆಡಳಿತದಿಂದ ಹಮ್ಮಿಕೊಂಡ ಕೌನಬನೇಗಾ ವಿದ್ಯಾಪತಿ ಕಾರ್ಯಕ್ರಮದಲ್ಲಿ ಪ್ರಥಮ ಸ್ಥಾನ ಪಡೆದು 51 ಸಾವಿರ ಬಹುಮಾನ ಪಡೆದ ಆಕಾಶ ಜಿತ್ತಿ ಹಾಗೂ ಜಿಲ್ಲಾ ಮಟ್ಟದ ವಿಜ್ಞಾನ ಹಾಗೂ ಗಣಿತ ಓಲಂಪಿಯಾಡ್‌ದಲ್ಲಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದ ಪ್ರತೀಕ್ಷಾ ಗದಗೀಮಠ ಅವರನ್ನು ಸನ್ಮಾನಿಸಲಾಯಿತು. ಸಂಸ್ಥೆ ಆಡಳಿತಾಧಿಕಾರಿ ಅಮರೇಶ ಅಳಗುಂಡಗಿ, ಮುಖ್ಯ ಶಿಕ್ಷಕರಾದ ಎಸ್.ಎಸ್.ದೊಡಮನಿ, ಎಸ್.ಬಿ. ಹೆಗಳಾಡಿ, ಶಿಕ್ಷಕಕರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

    ರಾಷ್ಟ್ರೀಯ ವಿಜ್ಞಾನ ದಿನಾಚಾರಣೆ
    ರಾಷ್ಟ್ರೀಯ ವಿಜ್ಞಾನ ದಿನಾಚಾರಣೆ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts