More

    ಮಧ್ಯವರ್ತಿಗಳ ಮೊರೆ ಹೋಗದಿರಿ

    ವಿಜಯಪುರ: ಸಾಮಾಜಿಕ ಭದ್ರತೆ ಯೋಜನೆಗಳನ್ನು ನೈಜ ಲಾನುಭವಿಗಳಿಗೆ ತಲುಪಿಸಲು ಹಾಗೂ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಪಿಂಚಣಿ ಅದಾಲತ್ ಹಮ್ಮಿಕೊಳ್ಳಲಾಗಿದೆ ಎಂದು ಉಪ ತಹಸೀಲ್ದಾರ್ ವೈ.ಎಸ್. ನಾರಾಯಣಕರ ಹೇಳಿದರು.
    ನಗರದ ಜೋರಾಪುರ ಪೇಠದ ಮಲ್ಲಯ್ಯನ ದೇವಸ್ಥಾನದಲ್ಲಿ ಜಿಲ್ಲಾಡಳಿತದಿಂದ ಶನಿವಾರ ಹಮ್ಮಿಕೊಂಡಿದ್ದ ಪಿಂಚಣಿ ಅದಾಲತ್‌ನಲ್ಲಿ ಹಕ್ಕುಪತ್ರ ವಿತರಿಸಿ ಅವರು ಮಾತನಾಡಿದರು.
    ಬಿಜೆಪಿ ಮುಖಂಡ ಶಿವರುದ್ರ ಬಾಗಲಕೋಟ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರ ಬಡವರಿಗಾಗಿ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲ ವೇತನ ಸೇರಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಫಲಾನುಭವಿಗಳು ಮಧ್ಯವರ್ತಿಗಳ ಮೊರೆ ಹೋಗದೆ ಕಂದಾಯ ಇಲಾಖೆ ಕಚೇರಿಗೆ ಅರ್ಜಿ ಸಲ್ಲಿಸಿದರೆ ಅಧಿಕಾರಿಗಳು ನೇರವಾಗಿ ನಿಮ್ಮ ಮನೆ ಬಾಗಿಲಿಗೆ ಬಂದು ಪಿಂಚಣಿ ಮಂಜೂರು ಮಾಡುತ್ತಾರೆ ಎಂದು ಹೇಳಿದರು.
    ಗ್ರಾಮ ಲೆಕ್ಕಾಧಿಕಾರಿ ಎಸ್.ಬಿ. ಭಜಂತ್ರಿ, ಪಾಲಿಕೆ ಮಾಜಿ ಸದಸ್ಯ ಅಪ್ಪು ಸಜ್ಜನ, ಶರಣಯ್ಯ ಮಠಪತಿ, ಧರೆಪ್ಪ ಶ್ಯಾಪೇಟಿ, ಸಿದ್ದು ಬೆಲ್ಲದ, ಅರುಣ ಹೇರಲಗಿ, ಶಂಕರಯ್ಯ ಮಠಪತಿ, ಅಮಿತ ಕುರ್ಲೆ, ಶ್ರೀಕಾಂತ ಶಹಾಪುರ, ಪ್ರವೀಣ ಹೇರಲಗಿ ಮತ್ತಿತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts