ವಸತಿ ಶಾಲೆಗೆ ಡಿಸಿ ಭೇಟಿ

ವಿಜಯಪುರ: ಕಾರಜೋಳ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಗೆ ದಿಢೀರ್ ಭೇಟಿ ನೀಡಿದ ಜಿಲ್ಲಾಧಿಕಾರಿ ಎಸ್.ಬಿ.ಶೆಟ್ಟೆಣ್ಣವರ ಅಡುಗೆ ಕೋಣೆ, ವಿದ್ಯಾರ್ಥಿಗಳಿಗೆ ನೀಡುವ ಆಹಾರ ತಯಾರಿಕೆ, ಸ್ವಚ್ಛತೆ ಸೇರಿದಂತೆ ಇತರೆ ಸೌಲಭ್ಯಗಳ ಕುರಿತು ಪರಿಶೀಲನೆ ನಡೆಸಿದರು.

ನೀಡುತ್ತಿರುವ ಸೌಲಭ್ಯ, ಶಿಕ್ಷಣದ ಗುಣಮಟ್ಟ ಕುರಿತಂತೆ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದ ಜಿಲ್ಲಾಧಿಕಾರಿಗಳು, ಆಹಾರ ಗುಣಮಟ್ಟದ್ದಾಗಿರಬೇಕು. ವಿದ್ಯಾರ್ಥಿಗಳಿಗೆ ಅನನು ಕೂಲ ಆಗಬಾರದು. ಗುಣಮಟ್ಟ ಶಿಕ್ಷಣದ ಜತೆಗೆ ಉತ್ತಮ ಆಹಾರ ಪೂರೈಸಬೇಕು. ಆಹಾರ ತಯಾರಿಕೆಗೆ ತಾಜಾ ತರಕಾರಿ ಪದಾರ್ಥಗಳನ್ನು ಬಳಸಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು. ವಿದ್ಯಾರ್ಥಿಗಳಿಗೆ ನೀಡುವ ಆಹಾರವನ್ನು ಸ್ವಯಂ ಸೇವಿಸುವುದರ ಮೂಲಕ ಗುಣಮಟ್ಟವನ್ನು ಜಿಲ್ಲಾಧಿಕಾರಿಗಳು ಪರಿಶೀಲಿಸಿದರು.